ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಸ್ಥಾಪಕರ ಸಂಸ್ಮರಣೆ, ಗುರುವಂದನೆ (Guruvandane at padubidri Ganapathi School)
ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಸ್ಥಾಪಕರ ಸಂಸ್ಮರಣೆ, ಗುರುವಂದನೆ. (Padubidri) ಪಡುಬಿದ್ರಿ: ಶ್ರೀ ವಿಬುಧೇಶತೀರ್ಥ ಶ್ರೀಪಾದರ ಸಂಸ್ಮರಣೆ ಮತ್ತು ಗುರುವಂದನ ಕಾರ್ಯಕ್ರಮವನ್ನು ಪಡುಬಿದ್ರಿ ಗಣಪತಿ ಪ್ರೌಢಶಾಲೆ ಮತ್ತು ಶ್ರೀ ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಔಚಿತ್ಯಪೂರ್ಣವಾಗಿ ಆಚರಿಸಲಾಯಿತು. ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ನಾರಾಯಣ ಹೆಬ್ಬಾರರು ಮುಖ್ಯ ಅಭ್ಯಾಗತರಾಗಿ ಆಗಮಿಸಿ “ಶಿಕ್ಷಣ ಕ್ಷೇತ್ರಕ್ಕೆ ವಿಬುಧೇಶತೀರ್ಥರ ಕೊಡುಗೆ ಅನನ್ಯವಾದುದು. ಶಿಸ್ತುಬದ್ಧವಾದ, ದೇಶಪ್ರೇಮವನ್ನು ಬೆಳೆಸುವ ಶಿಕ್ಷಣದಿಂದ ಮಾತ್ರ ದೇಶ ಅಭಿವೃದ್ಧಿ ಸಾಧ್ಯವೆಂದು ಅವರು ಭಾವಿಸಿದ್ದರು” ಎಂದು […]


