Tag: anna bhagya

ಆಹಾರ

ಅನ್ನ ಭಾಗ್ಯ: ಸೋಮವಾರದಿಂದ ಅನ್ನಭಾಗ್ಯ ಜಾರಿಗೆ

ಬೆಂಗಳೂರು:Annabhagya : ರಾಜ್ಯ ಸರ್ಕಾರ ತನ್ನ ಐದು ಗ್ಯಾರಂಟಿಗಳಲ್ಲಿ ಈಗಾಗಲೇ 2 ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇನ್ನು ನಾಳೆಯಿಂದ ಮೂರನೇ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಕೂಡ ಜಾರಿಗೆ ಬರಲಿದ್ದು ನಾಳೆಯಿಂದ ನೇರವಾಗಿ ಬಿಪಿಎಲ್​ ಹಾಗೂ ಅಂತ್ಯೋದಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ. ಸೋಮವಾರ ಸಂಜೆ ಐದು ಗಂಟೆಗೆ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ.  ರಾಜ್ಯ ಸರ್ಕಾರವು ಐದು ಕೆಜಿ ಅಕ್ಕಿಯನ್ನು ನ್ಯಾಯಬೆಲೆ ಅಂಗಡಿಯಲ್ಲಿ ನೀಡಿದ್ದು ಉಳಿದ ಐದು ಕೆಜಿ ಅಕ್ಕಿಯ ಬದಲಾಗಿ 170 ರೂಪಾಯಿಗಳನ್ನು […]

ರಾಜಕೀಯ

ಅನ್ನಭಾಗ್ಯ: ಜುಲೈ 10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಪ್ರಾರಂಭ:    ಸಿಎಂ

 ಬೆಂಗಳೂರು: ಅನ್ನಭಾಗ್ಯ ಯೋಜನೆಯ ಹಣ ಜುಲೈ 1ರಂದೇ ಕೊಡ್ತೀವಿ ಅಂತಾ ಹೇಳಿಲ್ಲ. ಈ ತಿಂಗಳು 10ರ ನಂತರ ಕೊಡಲು ಪ್ರಾರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ತಮ್ಮ ಸರ್ಕಾರಿ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ, ಜುಲೈ ತಿಂಗಳ ಅಕ್ಕಿ ಬದಲಿಗೆ ದುಡ್ಡನ್ನು ಜುಲೈ 1ರಂದೇ ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು. ಜುಲೈ 10ರ ನಂತರ ಹಣ ಹಾಕುವ ಪ್ರಕ್ರಿಯೆ ಆರಂಭವಾಗಲಿದೆ […]

ರಾಜಕೀಯ

ಸಿಎಂ ಬೊಮ್ಮಾಯಿ, ಯಡಿಯೂರಪ್ಪ ವಿರುದ್ಧ ಕಿಡಿ

ಬಿಟ್ಟಿ ಉಪದೇಶನೀಡುವ ಬೊಮ್ಮಾಯಿ, ಯಡಿಯೂರಪ್ಪನವರು ಬಡವರಿಗೆ ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಳುತ್ತಿಲ್ಲ   5 ಕೆ.ಜಿ ಅಕ್ಕಿ ಕೊಡಿ, ಉಳಿದ 5 ಕೆ.ಜಿ ಅಕ್ಕಿ ಕೊಡಲು ಆಗದಿದ್ರೆ ಹಣ ಕೊಡಿ ಎಂದು ನಮಗೆ ಬಿಟ್ಟಿ ಉಪದೇಶ ನೀಡುವ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಮುಂತಾದ ಬಿಜೆಪಿ ನಾಯಕರು ಒಂದು ಬಾರಿಯೂ ಇದು ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮ, ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದು ರಾಜ್ಯ ಬಿಜೆಪಿ ನಾಯಕರ ನೈಜ […]

eMedia Kannada  @2025. All Rights Reserved.