ಪುನೀತ್ ಕೆರೆಹಳ್ಳಿ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧನ
ಬೆಂಗಳೂರು:ಇದ್ರೀಷ್ ಪಾಷಾ ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಆತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಹತ್ತು ವರ್ಷಗಳ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪ್ರಕರಣಗಳನ್ನು ಆಧರಿಸಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಜೆಪಿ ನಗರ ನಿವಾಸಿಯಾಗಿರುವ ಈತ, ಮೂಲತಃ ಹಾಸನದವನು. ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯನ್ನು ಕಟ್ಟಿಕೊಂಡು ಜನರನ್ನು […]


