ಶಾಲಾ ಕಾಲೇಜು
ಮುಕುಂದ ಕೃಪಾ ಶಾಲಾ ವಾರ್ಷಿಕೋತ್ಸವ, ಬಹುಮಾನ ವಿತರಣೆ (Mukunda Kripa School Anniversary, Prize Distribution)
ಮುಕುಂದ ಕೃಪಾ ಶಾಲಾ ವಾರ್ಷಿಕೋತ್ಸವ, ಬಹುಮಾನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಬಾಳಿಗಾ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ (Udupi) ಉಡುಪಿ: ಉಡುಪಿಯಮುಕುಂದ ಕೃಪಾ ಶಾಲೆಯಲ್ಲಿ ವಾರ್ಷಿಕೋತ್ಸವ ಮತ್ತು ವಾರ್ಷಿಕ ಬಹುಮಾನ ವಿತರಣಾ ಸಮಾರಂಭ ಜರಗಿತು. ಮುಖ್ಯ ಅತಿಥಿಗಳಾಗಿ ಎ.ವಿ ಬಾಳಿಗಾ ಆಸ್ಪತ್ರೆಯ ಆಡಳಿತ ಅಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ, ಮಕ್ಕಳು ಹಾಗೂ ಹೆತ್ತವರು ಹಿತಮಿತವಾಗಿ ಮೊಬೈಲ್ ಬಳಕೆಯನ್ನು ಮಾಡಬೇಕು. ಹೆತ್ತವರು ಮಕ್ಕಳಿಗೆ ಮಾದರಿಯಾಗಿ ಇರಬೇಕೆಂದು ಸಲಹೆ ನೀಡಿದರು. […]

