ಸಿಡಿಲು ಬಡಿದು ಬಾಲಕ ಮೃತ್ಯು
ಬಂಟ್ವಾಳ: ಭಾನುವಾರ ಸಂಜೆ ಬಂಟ್ವಾಳದಾದ್ಯಂತ ಸಿಡಿಲು,ಮಿಂಚಿನ ಅಬ್ಬರಕ್ಕೆತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಕೆದಿಲಗ್ರಾಮದ ಮುರಿಯಾಜೆ ನಿವಾಸಿ ಚಂದ್ರಹಾಸ ಎಂಬವರ ಪುತ್ರ ಸುಭೋದ್ ಸಿ (14) ಎಂಬ ಬಾಲಕ ಸಿಡಿಲು ಬಡಿದು ಗಾಯಗೊಂಡಿದ್ದು, ಕೂಡಲೇ ಅತನನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅತನನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಮೃತ ಬಾಲಕ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ಘಟನೆ ನಡೆದಿದೆ […]










