ರಾಜಕೀಯ
ಕಾಪು ಕ್ಷೇತ್ರದಲ್ಲಿ ಅನುದಾನ ಲಭ್ಯತೆಯಲ್ಲಿ ನಾರಾಯಣ ಗುರು ವಸತಿ ಶಾಲೆಗೆ ಕ್ರಮ : ಸಚಿವ ಶಿವರಾಜ ತಂಗಡಗಿ
ಬೆಳಗಾವಿ ಅಧಿವೇಶನದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ ಸಚಿವರು (Belgaum) ಬೆಳಗಾವಿ; ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಾರಾಯಣ ಗುರು ವಸತಿ ಶಾಲೆಯನ್ನು ಮಂಜೂರು ಮಾಡುವ ಬಗ್ಗೆ ಸ್ವೀಕೃತವಾಗುವ ಪ್ರಸ್ತಾವನೆಯನ್ನು ಅನುದಾನದ ಲಭ್ಯತೆಯ ಅನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿಯವರು ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ್ದಾರೆ. […]

