Tag: bengaluru

ರಾಜಕೀಯ

ಮನೆ ಯಜಮಾನಿಗೆ 2 ಸಾವಿರ ನೀಡುವ ಗೃಹಲಕ್ಷ್ಮೀ ಯೋಜನೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆಯ ಕುರಿತು ಅಧಿಕೃತ ಆದೇಶ ಹೊರಬಿದ್ದಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ 2000ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ಮುಂದಾಗಿತ್ತು. ಇತ್ತೀಚೆಗೆ ನಡೆದ ಸಚಿವ ಸಂಪುಟದ ಅನುಮೋದನ ಪಡೆದುಕೊಂಡಿತ್ತು. ಸದ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರಮುಖ ಷರತ್ತುಗಳೇನು?1. ಆಹಾರ […]

ಅಪರಾಧ ವ್ಯವಹಾರ

ಬೆಂಗಳೂರು: ಫೇಸ್‌ಬುಕ್‌ ಗೆಳತಿಯಿಂದ ವಂಚನೆ, 37 ಲಕ್ಷ ರೂ. ಕಳೆದುಕೊಂಡ  ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ

ಸಾಮಾಜಿಕ ಮಾಧ್ಯಮವಾದ ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವತಿಯೊಬ್ಬರು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರಿಗೆ 37 ಲಕ್ಷ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ.  ಫೇಸ್‌ಬುಕ್‌ನಲ್ಲಿ ಪರಿಚಯವಾಗಿ, ನಂತರ ವಿಡಿಯೊ ಕಾಲ್‌ಗಳ ಮೂಲಕ ಸಲುಗೆ ತೋರುತ್ತಿದ್ದ ಯುವತಿಯು ಚನ್ನವೀರ ಶಿವಾಚಾರ್ಯ ಸ್ವಾಮೀಜಿಯಿಂದ 37 ಲಕ್ಷ ರೂಪಾಯಿ ಕಸಿದುಕೊಂಡಿರುವ ಸಂಬಂಧ ದಾಬಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಆಗಿದೆ.

ರಾಜಕೀಯ ವ್ಯವಹಾರ

ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು ಶಕ್ತಿ ಸ್ಮಾರ್ಟ್​​ಕಾರ್ಡ್​; ಅರ್ಜಿ ಸಲ್ಲಿಸುವುದು ಹೇಗೆ?

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ  ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಸೋಮವಾರ ಹೊರಡಿಸಿದೆ. ಅದರಂತೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್​​ಕಾರ್ಡ್’   ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್​​ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸ್ಮರ್ಟ್​​ಕಾರ್ಡ್ ದೊರೆಯುವ ವರೆಗೆ ಉಚಿತ ಪ್ರಯಾಣ ಹೇಗೆ? ಶಕ್ತಿ ಸ್ಮಾರ್ಟ್‌ಕಾರ್ಡ್‌ ಅನ್ನು ವಿತರಿಸುವವರೆಗೆ ಭಾರತ […]

Uncategorised ದೇಶ-ವಿದೇಶ

ಪುಸ್ತಕದಲ್ಲಿದ್ದ ವಿಚಾರಗಳು ಮಸ್ತಕಕ್ಕೆ ಹೋದರೆ ಮಸ್ತಕವೇ ಒಂದು ಪುಸ್ತಕವಾಗುವುದು –  ನ್ಯಾಯವಾದಿ ಎಂ ಗುರುಪ್ರಸಾದ್ ಮಂಡ್ಯ

 ಬೆಂಗಳೂರು : ಕರ್ನಾಟಕ ಸಾಮಾಜಿಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮತ್ತು ಬರಹ ಪ್ರಕಾಶನ ಮಂಗಳೂರು ಸಾರಥ್ಯದಲ್ಲಿ  ಬೆಂಗಳೂರಿನ ನಯನ ರಂಗಮಂದಿರದಲ್ಲಿ ಜೂನ್ 03 ರಂದು ಕೃತಿಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ  ಸಂಭ್ರಮ ಸಡಗರದಿಂದ ನಡೆಯಿತು.  ಕಾರ್ಯಕ್ರಮವನ್ನು  ಉದ್ಘಾಟಿಸಿದ ನ್ಯಾಯವಾದಿ ಗುರುಪ್ರಸಾದ್ ಮಾತನಾಡಿ, ಪುಸ್ತಕದಲ್ಲಿರುವ  ವಿಚಾರಗಳು ಮಸ್ತಕಕ್ಕೆ ಹೋದರೆ ಮಸ್ತಕವೇ ಒಂದು ಪುಸ್ತಕವಾಗಿ ರೂಪುಗೊಳ್ಳುತ್ತದೆ. 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರು ತಮ್ಮ ಅನುಭವ ಮಂಟಪದಲ್ಲಿ   ಇವನಾರವ ಇವನಾರವ ಎಂದೆನಿಸದೆ , ಇವ […]

ದೇಶ-ವಿದೇಶ ರಾಜಕೀಯ ವ್ಯವಹಾರ

ಸಿದ್ದರಾಮಯ್ಯ ಸರಕಾರದಲ್ಲಿ ಸಂಭಾವ್ಯ ಉಸ್ತುವಾರಿ ಸಚಿವರು

ಸಿದ್ದರಾಮಯ್ಯ ಸರಕಾರದಲ್ಲಿ ಸಂಭಾವ್ಯ ಉಸ್ತುವಾರಿ ಸಚಿವರು ಬೆಂಗಳೂರು; ನೂತನ ಸರಕಾರ ಬಂದ ಬಳಿಕ ಆಡಳಿತ ಯಂತ್ರ ಚುರುಕುಗೊಳಿಸಿದ ಸಿಎಂ ಸಿದ್ದರಾಮಯ್ಯ ಉಸ್ತುವಾರಿ ಸಚಿವರ ನೇಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಉಸ್ತುವಾರಿ ಸಚಿವರಾಗಿ ಸಚಿವ ಕೆ.ಜೆ.ಜಾರ್ಜ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನ ಉಸ್ತುವಾರಿ ಸಚಿವರಾಗಿ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ನೇಮಕ ಮಾಡಲಾಗಿದೆ‌ ಎನ್ನುವುದು ಪ್ರಾಥಮಿಕ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ‌. ಯಾವ ಜಿಲ್ಲೆಗೆ ಯಾರು ಉಸ್ತುವಾರಿ ಸಚಿವರು? ಬೆಂಗಳೂರು ನಗರ ಕೆ ಜೆ ಜಾರ್ಜ್ ಬೆಂಗಳೂರು […]

ಕರಾವಳಿ ದೇಶ-ವಿದೇಶ ರಾಜಕೀಯ

ಖಾಲಿ ಹುದ್ದೆಗೆ ಶೀಘ್ರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಯಾಗುವುದು ಖಚಿತ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.  ಮುಂದಿನ ವರ್ಷ ಈ ರೀತಿ ಸಮಸ್ಯೆ ಆಗದಂತೆ ಈಗಿನಿಂದಲೇ ಕ್ರಮ ಕೈಗೊಳ್ಳುತ್ತೇವೆ. ಪಠ್ಯ ಪರಿಷ್ಕರಣೆ ಸಂಬಂಧ ಸೋಮವಾರ ಸಂಜೆ ಬಂದು ಕಾಣುವಂತೆ ಸಿಎಂ ಹೇಳಿದ್ದಾರೆ. ಈ ಬಗ್ಗೆ ಸಾಹಿತಿಗಳು-ತಜ್ಞರ ಜೊತೆಯೂ ಚರ್ಚೆಯಾಗಿದೆ. ಸಿಎಂ ನೇತೃತ್ವದಲ್ಲಿಯೇ ಪರಿಷ್ಕರಣೆಗೆ ಮುಂದಾಗಲಾಗುವುದು ಎಂದಿದ್ದಾರೆ. ನನ್ನ ಇಲಾಖೆಯಲ್ಲಿ ಶಿಕ್ಷಕರ ಕೊರತೆಯಿದೆ. ಶಿಕ್ಷಕರ ಕೌನ್ಸಲಿಂಗ್ ಆರಂಭವಾಗಿದೆ, ಅಲ್ಲದೆ ಖಾಲಿ ಇರುವ ಹುದ್ದೆಗೆ ಶೀಘ್ರ ನೇಮಕಾತಿ ನಡೆಯಲಿದೆ ಎಂದು […]

ತಂತ್ರಜ್ಞಾನ ದೇಶ-ವಿದೇಶ ವ್ಯವಹಾರ

200 ಯುನಿಟ್ ವಿದ್ಯುತ್ ಫ್ರೀ ಘೋಷಣೆ ಬೆನ್ನಲ್ಲೇ  ಯುನಿಟ್ ಬೆಲೆಯೇರಿಸಿದ ಇಂಧನ ಇಲಾಖೆ

ಬೆಂಗಳೂರು‌ : ರಾಜ್ಯ ಕಾಂಗ್ರೆಸ್ ನ ಪ್ರಣಾಳಿಕೆಯ ಪೈಕಿ ಒಂದಾಗಿದ್ದ ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆಯ  ಜೊತೆಗೆ ವಿದ್ಯುತ್ ದರ ಏರಿಸುವ ಮೂಲಕ ರಾಜ್ಯ  ಸರಕಾರ ಜನತೆಗೆ ಶಾಕ್ ನೀಡಿದೆ. ಆದಾಯದ ಕೊರತೆ ಮತ್ತು ನಷ್ಟವನ್ನು ಸರಿದೂಗಿಸಿಕೊಳ್ಳಲು ಪ್ರತಿ ಯೂನಿಟ್ ದರವನ್ನು ಏರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ, ಬೆಸ್ಕಾಂ ಗ್ರಾಹಕರು ಜುಲೈ 1 ರಿಂದ ಸೆಪ್ಟೆಂಬರ್ ವರೆಗೆ ಪ್ರತಿ ಯೂನಿಟ್ಗೆ 51 ಪೈಸೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಅಕ್ಟೋಬರ್ 1 […]

ಅಪರಾಧ

ಬೆಂಗಳೂರು: ಕೈಕಾಲು, ರುಂಡಕತ್ತರಿಸಿಮಹಿಳೆಯಬರ್ಬರಕೊಲೆ

ಬೆಂಗಳೂರು: ಕೈ ಕಾಲು, ರುಂಡ ಕತ್ತರಿಸಿ ಮಹಿಳೆಯ ಬರ್ಬರ ಕೊಲೆ ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೈ ಕಾಲುಗಳು ಹಾಗೂ ರುಂಡವಿಲ್ಲದ 52 ವರ್ಷದ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ದೃಶ್ಯಗಳನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ನಗರದ ಹೊರವಲಯದ ಬನ್ನೇರುಘಟ್ಟದಲ್ಲಿ ಈ ಘಟನೆ ನಡೆದಿದ್ದು, ಹಂತಕರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಕೊಲೆಯ ಹಿಂದಿನ ಉದ್ದೇಶವನ್ನು ತಿಳಿಯಲು ತನಿಖೆ ನಡೆಸುತ್ತಿದ್ದಾರೆ. ಮೃತರನ್ನು ಬನ್ನೇರುಘಟ್ಟದ ಜನತಾ ಕಾಲೋನಿ ನಿವಾಸಿ ಗೀತಾ ಎಂದು ಗುರುತಿಸಲಾಗಿದ್ದು, ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ […]

ದೇಶ-ವಿದೇಶ ರಾಜಕೀಯ ವ್ಯವಹಾರ

ಕಾಂಗ್ರೆಸ್ 5 ಗ್ಯಾರಂಟಿ ಯೋಜನೆಗಳ ಘೋಷಣೆ

ಬೆಂಗಳೂರು : ಕಾಂಗ್ರೆಸ್ 5 ಗ್ಯಾರಂಟಿ ಯೋಜನೆಗಳ ಕುರಿತ ಸಂಪುಟ ತೀರ್ಮಾನಗಳ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಇಂದು ಮಾಹಿತಿ ನೀಡಿದರು. ಜನ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ನಾವು ಬಸವಣ್ಣನ ನಾಡಿನವರು. ಕೊಟ್ಟ ಮಾತಿಗೆ ಬದ್ಧ.5 ಗ್ಯಾರಂಟಿಗಳನ್ನು ನೀಡುವ ಸಂಬಂಧ ತೀರ್ಮಾನ ಮಾಡಿದ್ದೇವೆ ಎಂದರು. ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ವಿದ್ಯುತ್, 12 ತಿಂಗಳ ಸರಾಸರಿ ಆಧರಿಸಿ, ಅದಕ್ಕೆ ಶೇಕಡಾ 10 ರಷ್ಟು ಸೇರಿಸಿ, ಅದಕ್ಕೆ ಸಂಪೂರ್ಣ ಶುಲ್ಕ […]

eMedia Kannada  @2025. All Rights Reserved.