Tag: bengaluru

ಅಪರಾಧ

ಬಿಜೆಪಿ ಮುಖಂಡನಿಗೆ ಟಿಕೆಟ್ ಕೊಡುವುದಾಗಿ ಕೋಟ್ಯಾಂತರ ರೂ. ವಂಚನೆ – ಉಡುಪಿಯಲ್ಲಿ ಚೈತ್ರ ಕುಂದಾಪುರ ಪೊಲೀಸ್ ವಶಕ್ಕೆ

ಬಿಜೆಪಿ ಮುಖಂಡನಿಗೆ ಟಿಕೆಟ್ ಕೊಡುವುದಾಗಿ ಕೋಟ್ಯಾಂತರ ರೂ.ವಂಚನೆ – ಉಡುಪಿಯಲ್ಲಿ ಚೈತ್ರ ಕುಂದಾಪುರ ಪೊಲೀಸ್ ವಶಕ್ಕೆ   ಉಡುಪಿ: ಬೈಂದೂರಿನ ಬಿಜೆಪಿ ಮುಖಂಡ, ಸಮಾಜ ಸೇವಕರೋರ್ವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಚೈತ್ರ ಕುಂದಾಪುರ ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರಳನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನ […]

ಅಪರಾಧ

ಸರ್ಕಾರಿ ಯೋಜನೆಯ ಬಗ್ಗೆ ಸುಳ್ಳು ವರದಿ: ವಾಹಿನಿ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದ ಪ್ರಿಯಾಂಕ್‌ ಖರ್ಗೆ

ಸರ್ಕಾರಿ ಯೋಜನೆಯ ಬಗ್ಗೆ ಸುಳ್ಳು ವರದಿ: ವಾಹಿನಿ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದ ಪ್ರಿಯಾಂಕ್‌ ಖರ್ಗೆ ಬೆಂಗಳೂರು: ಕರ್ನಾಟಕ ಸರ್ಕಾರದ ಯೋಜನೆಗಳ ಬಗ್ಗೆ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿರುವ Aaj Tak ವಾಹಿನಿ ಮತ್ತು ನಿರೂಪಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್‌ ಮಾಡಿದ್ದಾರೆ. ಬಿಜೆಪಿ ಸಂಸದರು ಮೊದಲು ಈ ರೀತಿ ಸುಳ್ಳು ಹೇಳುವುದನ್ನು ಪ್ರಾರಂಭಿಸಿದ್ದರು. ಇದೀಗ ಮಾಧ್ಯಮಗಳು ಸರ್ಕಾರದ ಯೋಜನೆಗಳ ಬಗ್ಗೆ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದೆ. ಇದು ಉದ್ದೇಶಪೂರ್ವಕ ಮತ್ತು […]

ಪ್ರಚಲಿತ

ಅನೈತಿಕ ಪೊಲೀಸ್ ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ : ಸಿಎಂ

ಅನೈತಿಕ ಪೊಲೀಸ್ ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ : ಸಿಎಂ  ಸದ್ಯದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ‌ ಸ್ಥಾಪನೆ ಬೆಂಗಳೂರು ಸೆ ೯ : ಸೇಂಟ್ ಮೇರಿಯಮ್ಮನವರ ಬೆಸಿಲಿಕಾ ಚರ್ಚ್ ಅತ್ಯಂತ ದೊಡ್ಡ ಭಾವೈಕ್ಯತಾ ಕೇಂದ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ನಲ್ಲಿ ತಾಯಿ ಮೇರಿ ಜಯಂತೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.  ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲಾ ಜಾತಿ, ಧರ್ಮದವರು ಬರುತ್ತಾರೆ. ಹೀಗಾಗಿ ಇದೊಂದು ಭಾವೈಕ್ಯತಾ ಕೇಂದ್ರವಾಗಿ ರೂಪುಗೊಂಡಿದೆ. ಹೀಗಾಗಿ […]

ರಾಜಕೀಯ

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ: ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಸಿಎಂ

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ: ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಸಿಎಂ ಬೆಂಗಳೂರು, ಸೆಪ್ಟೆಂಬರ್ 08: ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ  ಎನ್ನುವ ಬಗ್ಗೆ ನಮಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.  ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ  ಮುಖ್ಯಮಂತ್ರಿಗಳು ಮಾಧ್ಯಮದರಿಗೆ ಇಂದು  ಪ್ರತಿಕ್ರಿಯೆ ನೀಡಿದರು. ಜನರ ಹತ್ತಿರ ಮತ ಕೇಳುತ್ತೇವೆ.  ಜನ ನಮ್ಮ ಪರವಾಗಿದ್ದಾರೆ ಎಂದು ಅವರು ಹೇಳಿದರು

ವ್ಯವಹಾರ

ದೇಶದಲ್ಲಿನ ಉತ್ಪಾದನೆ ಸಮಾನ ಹಂಚಿಕೆ ಆದರೆ ಮಾತ್ರ ಸಮ ಸಮಾಜ ನಿರ್ಮಾಣ: ಸಿಎಂ

ದೇಶದಲ್ಲಿನ ಉತ್ಪಾದನೆ ಸಮಾನ ಹಂಚಿಕೆ ಆದರೆ ಮಾತ್ರ ಸಮ ಸಮಾಜ ನಿರ್ಮಾಣ: ಸಿಎಂ  ಬೆಂಗಳೂರು, ಸೆ 8: ದೇಶದ ಆಸ್ತಿ ಮತ್ತು ಉತ್ಪಾದನೆ ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಗ್ರಹ ಆಗುತ್ತಿರುವುದರಿಂದ ಸಾಮಾಜಿಕ , ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ಕಮಲಾ ಹಂಪಾನಾ ಸಾಹಿತ್ಯ ವೇದಿಕೆ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಬೆಳಕು ಬಿತ್ತಿದವರು’, ‘ಪ್ರಾಕೃತಾ ಕಥಾ ಸಾಹಿತ್ಯ’ ಮತ್ತು ‘the journey of life’ ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. […]

ಅಪರಾಧ

ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಕಲ್ಬುರ್ಗಿಯವರನ್ನೂ ಕೊಂದಿದೆ: ಸಿಎಂ

ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಎಂ.ಎಂ.ಕಲ್ಬುರ್ಗಿಯವರನ್ನೂ ಕೊಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಸೆ 5 : ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ  ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಭೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಗೌರಿ ಮೆಮೋರಿಯಲ್ ಟ್ರಸ್ಟ್ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣಾರ್ಥ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ “ಸರ್ವಾಧಿಕಾಲದ ಹೊತ್ತಲ್ಲಿ ದೇಶವನ್ನು ಮರುಕಟ್ಟುವ ಕಲ್ಪನೆ” ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಾತ್ಮಗಾಂಧಿ ಅತ್ಯಂತ ಧರ್ಮನಿರಪೇಕ್ಷತೆಯಿಂದ ಬದುಕನ್ನು ಆಚರಿಸುತ್ತಿದ್ದರು. […]

ರಾಜಕೀಯ

ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ: ಸಿದ್ದರಾಮಯ್ಯ

ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ: ಸಿದ್ದರಾಮಯ್ಯ  ಬೆಂಗಳೂರು: ಮುಂಬೈನಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಮಹತ್ವದ ಮೂರನೆಯ ಸಭೆಯು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತವನ್ನು ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನಡೆಸಲು ಸಮನ್ವಯ ಸಮಿತಿಯನ್ನು ರೂಪಿಸಿರುವುದು ಹಾಗೂ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ವಿಚಾರದಲ್ಲಿ ಯೋಜಿತವಾಗಿ ಮುಂದುವರೆಯಲು ಕ್ರಮವಹಿಸಿರುವುದು ಸ್ವಾಗತಾರ್ಹ. ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ ಶುರುವಾಗಿದೆ. ನಮ್ಮ ನೆಚ್ಚಿನ […]

ಜೀವನಶೈಲಿ

ಪತ್ರಕರ್ತ ಜನಾರ್ಧನ ಕೊಡವೂರುರವರಿಗೆ ಛಾಯಾ ಸಾಧಕ ಪುರಸ್ಕಾರ

ಬೆಂಗಳೂರು : ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಇವರಿಗೆ ಛಾಯಾ ಸಾಧಕ ಪುರಸ್ಕಾರ. ಛಾಯಾಗ್ರಹಣ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಇವರಿಗೆ ಕರ್ನಾಟಕ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ರವರಿಂದ ಛಾಯಾ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕೆಎಸ್ ಪಿವಿ ಅಧ್ಯಕ್ಷ ರಮೇಶ್ ಬಿ.ಕೆ, ಗರುಡ ಫೌಂಡೇಶನ್ ನ ಅಧ್ಯಕ್ಷೆ ಮೇಧಿನಿ ಗರುಡಾಚಾರ್, ಕೋಶಾಧಿಕಾರಿ ರಘು, ಕಾರ್ಯದರ್ಶಿ ರಮೇಶ್ ಮೂರ್ತಿ ಉಪಸ್ಥಿತರಿದ್ದರು.

ರಾಜಕೀಯ

ಕಾವೇರಿ, ಮೇಕೆದಾಟು, ಮಹಾದಾಯಿ ಜಲ ವಿವಾದ: ಸರ್ವಪಕ್ಷ ಸಭೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಮುಖಂಡರು

ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ: ಸರ್ವರ ಸಹಕಾರ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ವಿವಾದ: ಸಂಕಷ್ಟ ಹಂಚಿಕೆ ಸೂತ್ರ ಅಗತ್ಯ: ಸಿಎಂ ಸಿದ್ದರಾಮಯ್ಯ ಬೆಂಗಳೂರು, ಆಗಸ್ಟ್‌ 23- ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.  ಅವರು ಇಂದು ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ […]

ರಾಜಕೀಯ

ದೇವರಾಜ ಅರಸು ಅವರ ಕಾರ್ಯಕ್ರಮಗಳ ಫಲಾನುಭವಿಗಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇವರಾಜ ಅರಸು ಅವರ ಕಾರ್ಯಕ್ರಮಗಳ ಫಲಾನುಭವಿಗಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಸವಣ್ಣನವರಿಂದ ಹಿಡಿದು ಕೃಷ್ಣರಾಜ ಒಡೆಯರು ಮತ್ತು ಅರಸು ಅವರ ವರೆಗೂ ಸಾಮಾಜಿಕ ನ್ಯಾಯ ಒದಗಿಸಿದ ಚರಿತ್ರೆ ನಮ್ಮ ನಾಡಿಗೆ ಇದೆ. ಉಳುವವನೇ ಭೂಮಿ ಒಡೆಯ ಎನ್ನುವುದನ್ನು ಬಿಜೆಪಿ ಉಲ್ಟಾ ಮಾಡಿದೆ. ಉಳ್ಳವನೇ ಭೂಮಿ ಒಡೆಯ ನನ್ನಾಗಿಸಿದೆ  ದೇವರಾಜ ಅರಸು ಮತ್ತು ರಾಜೀವ್ ಗಾಂಧಿ ಅವರು ಭವಿಷ್ಯದ ಭಾರತ ಮತ್ತು ಭವಿಷ್ಯದ ಸಮಾಜ ಹೇಗಿರಬೇಕು ಎನ್ನುವ ಸಾಮಾಜಿಕ ನ್ಯಾಯದ ಕನಸು-ಕಾರ್ಯಕ್ರಮಗಳನ್ನು ರೂಪಿಸಿದ ಮಹಾನ್ […]

eMedia Kannada  @2025. All Rights Reserved.