Tag: bengaluru

ರಾಜಕೀಯ

ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರಾಗಿ ಆಯ್ಕೆ

ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರಾಗಿ ಆಯ್ಕೆ ಬೆಂಗಳೂರು: ರಾಜ್ಯದ ಹೆಸರಾಂತ ರಂಗಭೂಮಿ – ಚಲನಚಿತ್ರ ಕಲಾವಿದ,  ಮಾಜಿ ಶಾಸಕರು  ಹಾಗೂ ಹಿರಿಯ  ರಾಜಕಾರಣಿಗಳಾದ ಮುಖ್ಯಮಂತ್ರಿ ಚಂದ್ರು ರವರನ್ನು  ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.  ಪಕ್ಷದ ಸಂಘಟನೆಯ  ರಾಷ್ಟ್ರೀಯ  ಪ್ರಧಾನ ಕಾರ್ಯದರ್ಶಿ  ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ಇವರೊಂದಿಗೆ  ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ  ಬಿ.ಟಿ. ನಾಗಣ್ಣ  ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್  ರವರುಗಳನ್ನು […]

ಆಹಾರ

ಅನ್ನ ಭಾಗ್ಯ: ಸೋಮವಾರದಿಂದ ಅನ್ನಭಾಗ್ಯ ಜಾರಿಗೆ

ಬೆಂಗಳೂರು:Annabhagya : ರಾಜ್ಯ ಸರ್ಕಾರ ತನ್ನ ಐದು ಗ್ಯಾರಂಟಿಗಳಲ್ಲಿ ಈಗಾಗಲೇ 2 ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇನ್ನು ನಾಳೆಯಿಂದ ಮೂರನೇ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಕೂಡ ಜಾರಿಗೆ ಬರಲಿದ್ದು ನಾಳೆಯಿಂದ ನೇರವಾಗಿ ಬಿಪಿಎಲ್​ ಹಾಗೂ ಅಂತ್ಯೋದಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ. ಸೋಮವಾರ ಸಂಜೆ ಐದು ಗಂಟೆಗೆ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ.  ರಾಜ್ಯ ಸರ್ಕಾರವು ಐದು ಕೆಜಿ ಅಕ್ಕಿಯನ್ನು ನ್ಯಾಯಬೆಲೆ ಅಂಗಡಿಯಲ್ಲಿ ನೀಡಿದ್ದು ಉಳಿದ ಐದು ಕೆಜಿ ಅಕ್ಕಿಯ ಬದಲಾಗಿ 170 ರೂಪಾಯಿಗಳನ್ನು […]

ರಾಜಕೀಯ

 ಗೋಹತ್ಯೆ ನಿಷೇಧ ಕಾನೂನು ರದ್ದುಗೊಳಿಸುವ ಪ್ರಸ್ತಾವವಿಲ್ಲ: ಪರಿಷತ್​​​ನಲ್ಲಿ ಸಚಿವ ಕೆ. ವೆಂಕಟೇಶ್​ ಸ್ಪಷ್ಟನೆ

  ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವ ಕರ್ನಾಟಕ ಸರ್ಕಾರದ ಮುಂದಿಲ್ಲ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಬುಧವಾರ ವಿಧಾನ ಪರಿಷತ್ತಿಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಅಕ್ರಮ ಗೋಸಾಗಾಟ ಮಾಡುವವರ ವಿರುದ್ಧ ಕ್ರಮಕೈಗೊಂಡಿಲ್ಲ. ಗೋ ಸಂರಕ್ಷಣೆ ವಿಧೇಯಕ ಹಿಂಪಡೆಯುವ ಬಗ್ಗೆ ಸ್ಪಷ್ಟಪಡಿಸಲಿ ಎಂದು ಬಿಜೆಪಿ ಎಂಎಲ್​ಸಿ ಎನ್ ರವಿಕುಮಾರ್ ಆಗ್ರಹಿಸಿದ್ದರು. ಇದಕ್ಕೆ ಉತ್ತರಿಸಿದ ಸಚಿವರು, ‘ಕರ್ನಾಟಕ ವಧೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆ’ಯನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಹೇಳಿದ್ದಾರೆ. […]

ರಾಜಕೀಯ

ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಬೀದಿಗಿಳಿಯುತ್ತೇವೆ: ಸರ್ಕಾರಕ್ಕೆ ಗುತ್ತಿಗೆದಾರರ ಸಂಘ ಎಚ್ಚರಿಕೆ

ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಬೀದಿಗಿಳಿಯುತ್ತೇವೆ: ಸರ್ಕಾರಕ್ಕೆ ಗುತ್ತಿಗೆದಾರರ ಸಂಘ ಎಚ್ಚರಿಕೆ   ಬೆಂಗಳೂರು: ಈ ಹಿಂದೆ ಬೊಮ್ಮಾಯಿ ಸರ್ಕಾರದ ವಿರುದ್ಧ ಕಮೀಷನ್ ಬಾಂಬ್ ಹಾಕಿದ್ದ ಗುತ್ತಿಗೆದಾರರ ಸಂಘ ಇದೀಗ ಸಿದ್ದರಾಮಯ್ಯ ಸರ್ಕಾರದ ವಿರುದ್ಧವೂ ತಿರುಗಿಬೀಳುವ ಮುನ್ಸೂಚನೆ ನೀಡಿದೆ. ಜುಲೈ 15ರೊಳಗೆ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಬೀದಿಗಿಳಿಯುವುದಾಗಿ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕಾಮಗಾರಿಗಳ ಬಿಲ್ ತಡೆಹಿಡಿಯಲಾಗಿತ್ತು. ಕಳೆದ ವಾರ ರಾಜ್ಯ ಗುತ್ತಿಗೆದಾರರ ಸಂಘ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಬಾಕಿ ಬಿಡುಗಡೆಗೆ […]

ರಾಜಕೀಯ

ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಬರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ ಎಂದು ಹೇಳಿದರು. […]

ಅಪರಾಧ

ಬೆಂಗಳೂರು; ಮಸೀದಿಗೆ ಹುಸಿ ಬಾಂಬ್ ಕರೆ, ಪೊಲೀಸರಿಂದ ಪರಿಶೀಲನೆ

ಬೆಂಗಳೂರು;ಶಿವಾಜಿ ನಗರದ ಆಜಾಂ ಮಸೀದಿಯಲ್ಲಿ ಬಾಂಬ್ ಇರಿಸಿದ್ದಾರೆ ಎಂದು ಹುಸಿ ಬಾಂಬ್ ಕರೆ ಮಾಡಲಾಗಿದ್ದು, ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿರುವ ಬಗ್ಗೆ ವರದಿಯಾಗಿದೆ. ಶಿವಾಜಿನಗರದ ಮಾರುಕಟ್ಟೆ ಪ್ರದೇಶದಲ್ಲಿ ಆಜಾಂ ಮಸೀದಿಗೆ ಬಾಂಬ್ ಇಟ್ಟಿರುವುದಾಗಿ ಬುಧವಾರ ರಾತ್ರಿ ಸುಮಾರು 10 ಗಂಟೆಗೆ 112 ಸಂಖ್ಯೆಗೆ ಕರೆ ಮಾಡಲಾಗಿದೆ. ಶಿವಾಜಿನಗರ ಪೊಲೀಸ್ ಠಾಣೆ ಮತ್ತು ಪೂರ್ವ ವಿಭಾಗದ ಡಿಸಿಪಿ ಅವರಿಗೂ ಈ ಬಗ್ಗೆ ಮಾಹಿತಿ ರವಾನೆ ಮಾಡಲಾಗುತ್ತದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ಶಿವಾಜಿನಗರ ಪೊಲೀಸರು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ […]

ದೇಶ-ವಿದೇಶ ಪ್ರಚಲಿತ

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆ ನೆರವೇರಿಸಿದ ಸಿಎಂ

*ಜಾತಿಗಣತಿಯನ್ನು ಪಡೆಯಬೇಡ ಎಂದು ಆಗ ಪುಟ್ಟರಂಗಶೆಟ್ಟಿಯವರಿಗೆ ಹೇಳಿದ್ದೇ ಆಗಿನ ಮುಖ್ಯಮಂತ್ರಿ ಕುಮಾರಸ್ವಾಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ *ನಾವು ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತೇವೆ. ಸಮಾಜದ ತಾರತಮ್ಯ ನಿವಾರಣೆಗೆ ಈ ರೀತಿಯ ಗಣತಿ ಮತ್ತು ಅಧ್ಯಯನಗಳು ಅಗತ್ಯ *ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇನೆ ಕಾಗಿನೆಲೆ ಮಹಾಸಂಸ್ಥಾನ ಎಲ್ಲಾ ಶೋಷಿತ ಸಮುದಾಯಗಳಿಗೆ ಸೇರಿದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ ಬೆಂಗಳೂರು, ಜು 2: ಸಮಸ್ತ ಶೋಷಿತ ಸಮುದಾಯಗಳ ಮಹಾಸಂಸ್ಥಾನ ಆಗಬೇಕು ಎನ್ನುವ ಮಹಾ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ […]

ರಾಜಕೀಯ

  ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳ ರಕ್ಷಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ

  ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ನೇತೃತ್ವದಲ್ಲಿ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿಯಾಗಿ ತಮ್ಮ ಸಮುದಾಯಗಳ ಸಮಸ್ಯೆಗಳನ್ನು ಚರ್ಚಿಸಿ ತಮ್ಮ ಬೇಡಿಕೆಗಳನ್ನು ಮಂಡಿಸಿದರು. ಬೆಂಗಳೂರು: ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳನ್ನು  ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಯ ನೀಡಿದರು.  ಗೃಹಕಚೇರಿ ಕೃಷ್ಣಾದಲ್ಲಿ  ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ವತಿಯಿಂದ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ  ಸಂಘಟನೆಗಳ […]

ರಾಜಕೀಯ

ಅನ್ನಭಾಗ್ಯ: ಜುಲೈ 10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಪ್ರಾರಂಭ:    ಸಿಎಂ

 ಬೆಂಗಳೂರು: ಅನ್ನಭಾಗ್ಯ ಯೋಜನೆಯ ಹಣ ಜುಲೈ 1ರಂದೇ ಕೊಡ್ತೀವಿ ಅಂತಾ ಹೇಳಿಲ್ಲ. ಈ ತಿಂಗಳು 10ರ ನಂತರ ಕೊಡಲು ಪ್ರಾರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ತಮ್ಮ ಸರ್ಕಾರಿ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ, ಜುಲೈ ತಿಂಗಳ ಅಕ್ಕಿ ಬದಲಿಗೆ ದುಡ್ಡನ್ನು ಜುಲೈ 1ರಂದೇ ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು. ಜುಲೈ 10ರ ನಂತರ ಹಣ ಹಾಕುವ ಪ್ರಕ್ರಿಯೆ ಆರಂಭವಾಗಲಿದೆ […]

ರಾಜಕೀಯ

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಸಂಪೂರ್ಣ ಉಚಿತ – ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿರುವ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ರೂ.150 ಸೇವಾ ಕೇಂದ್ರಗಳು ವಸೂಲಿ ಮಾಡುತ್ತಿವೆ ಎನ್ನಲಾಗುತ್ತಿತ್ತು. ಈಗ ಗೃಹ ಲಕ್ಷ್ಮೀ ಯೋಜನೆಗೂ ಹಾಗೆ ವಸೂಲಿ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೀಗಾಗಿ ಗೃಹಲಕ್ಷ್ಮೀಯರಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಒಂದು ರೂ ಕೂಡ ಅರ್ಜಿ ಸಲ್ಲಿಸಲು ಕೊಡುವಂತಿಲ್ಲ. ಉಚಿತ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮೀ ಯೋಜನೆಗೆ ಒಂದು ರೂ […]

eMedia Kannada  @2025. All Rights Reserved.