Tag: bengaluru

ರಾಜಕೀಯ

ಆಸಿಡ್ ದಾಳಿ ಸಂತ್ರಸ್ಥೆಗೆ ಸಚಿವಾಲಯದಲ್ಲಿ ಉದ್ಯೋಗ: ಸಿಎಂ ಆದೇಶ

ಬೆಂಗಳೂರು: ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ಥೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು. 2022ರ ಏಪ್ರಿಲ್ 28 ರಂದು ಆಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ […]

ರಾಜಕೀಯ

ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು  ಸರ್ಕಾರ ಬದ್ದ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿಂದಿನ ಸರ್ಕಾರದ ಅವಧಿಯಲ್ಲಿ ಆದ ಶಿಫಾರಸ್ಸಿನಂತೆ ವಿದ್ಯುತ್ ದರ ಹೆಚ್ಚಳ ಬೆಂಗಳೂರು: ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಪೀಣ್ಯ ಕೈಗಾರಿಕಾ ಸಂಘದ  ಅಧ್ಯಕ್ಷ ಮಂಜುನಾಥ್ ಹೆಚ್ ಅವರ ನೇತೃತ್ವದ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ  ಸಂದರ್ಭದಲ್ಲಿ ಅವರು ಮಾತನಾಡಿದರು.  ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೆ.ಇ. ಆರ್.ಸಿ ವಿದ್ಯುತ್ ದರ ಹೆಚ್ಚಳ ಮಾಡಿತ್ತು. ಹೀಗಾಗಿ ಅವರಿಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು […]

ಅಪರಾಧ

ದ.ಕ ಮೂಲದ ತಹಶೀಲ್ದಾರ್ ಮನೆಯಲ್ಲಿ ರಾಶಿ ರಾಶಿ ಹಣ

ಬೆಂಗಳೂರು; ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.ಪುರಂ ತಹಶೀಲ್ದಾರ್ ‘ಅಜಿತ್ ರೈ’ ಬಂಧಿಸಲಾಗಿದೆ. . ತಹಶೀಲ್ದಾರ್​ ಅಜಿತ್ ರೈ ಮನೆ ಮೇಲೆ ನಿನ್ನೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದ ಲೋಕಾಯುಕ್ತ ಪೊಲೀಸರು ಲಕ್ಷಾಂತರ ನಗದು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಅವರನ್ನು ಲೋಕಾಯುಕ್ತ ಪೋಲಿಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಜಿತ್​ ರೈಗೆ ಸಂಬಂಧಿಸಿದ 10 ಕಡೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 1.90 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದು, […]

ರಾಜಕೀಯ

ಅನ್ನ ಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು :  ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಮೊದಲ ತುತ್ತಿನಲ್ಲಿಯೇ ಕಲ್ಲು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆ ಜಾರಿ ಮಾಡುವಲ್ಲಿ  ಜನರಿಗೆ ದೋಖಾ ಮಾಡುವುದು ಮುಂದುವರೆಸಿದೆ. ಹತ್ತು ಕೆಜಿ ಅಕ್ಕಿ ಕೊಡುವ ಗ್ಯಾರೆಂಟಿ ನೀಡಿ ಈಗ ಒಬ್ಬರಿಗೆ 170 ರೂ. ಹಾಕುವುದಾಗಿ ಹೇಳಿರುವುದು ಸರ್ಕಾರದ ವಂಚನೆಯ ಇನ್ನೊಂದು ಮುಖ ಬಯಲಾಗಿದೆ. ರಾಜ್ಯ ಸರ್ಕಾರ ನೀಡುವ 170 ರೂ. ಗ್ರಾಮೀಣ ಮಹಿಳೆಯ […]

ರಾಜಕೀಯ

ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿಮಾತ್ರ ಬರುತ್ತದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನವರು ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಅಕ್ಕಿಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಈಗ ಐದು ಕೆಜಿ ಕೊಡುವುದಾಗಿ ಹೇಳುತ್ತಿದ್ದಾರೆ. ಅವರು ಮಾತಿಗೆ ತಪ್ಪುತ್ತಿದ್ದಾರೆ. ಎಷ್ಟಾದರೂ ಆಗಲಿ ನಾವು ಅಕ್ಕಿಯನ್ನೇ ಕೊಡುತ್ತೇವೆ ಅಂತ […]

ರಾಜಕೀಯ

ಅನ್ನಭಾಗ್ಯ: ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಅನ್ನಭಾಗ್ಯ: ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ 5 ಕೆಜಿ ಅಕ್ಕಿಗೆ ಹಣವನ್ನು ನೀಡಲು ನಿರ್ಧರಿಸಿದೆ. ಈಗಾಗಲೇ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯನ್ನು ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದ್ದು, ಉಳಿದ ಹೆಚ್ಚುವರಿ 5 ಕೆಜಿ ಅಕ್ಕಿಗೆ ರೂ 170 ನೀಡಲು ತೀರ್ಮಾನ […]

ಅಪರಾಧ

 breaking news …. ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ..!  

ಬೆಂಗಳೂರು: ಕರ್ನಾಟಕದಾದ್ಯಂತ ಇಂದು (ಜೂನ್ 28) ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ (Lokayukta Raid). ಇದರೊಂದಿಗೆ ಬೆಳ್ಳಂಬೆಳಗ್ಗೆಯೇ ಸಿಹಿ ನಿದ್ದೆಯಲ್ಲಿದ್ದ ಕೆಲ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯ ಹಲವೆಡೆ ದಾಳಿ ಮಾಡಿದ್ದು, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರು, ರಾಮನಗರ, ಬಾಗಲಕೋಟೆ, ಬೆಳಗಾವಿ, ತುಮಕೂರು, ಕಲಬುರಗಿ, ಯಾದಗಿರಿ, […]

ರಾಜಕೀಯ

2024ರ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಆಡಳಿತದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

  2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಬಿಜೆಪಿಯ ಹಿಂದಿನ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳು ಮತ್ತು ಅಕ್ರಮಗಳ ಬಗ್ಗೆ ತಮ್ಮ ಸರ್ಕಾರ ತನಿಖೆ ನಡೆಸಲಿದೆ ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ಮೂಲಗಳ ಪ್ರಕಾರ, ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಕುರಿತು ಸರ್ಕಾರ ಯೋಜಿಸುತ್ತಿದೆ. ಚುನಾವಣಾ ಪೂರ್ವದಲ್ಲಿ ತಮ್ಮ ಪಕ್ಷ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಲಿದೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ನ ಐದು ಭರವಸೆಗಳ ಅನುಷ್ಠಾನದಿಂದ ಬೊಕ್ಕಸಕ್ಕೆ ವರ್ಷಕ್ಕೆ 59 […]

ರಾಜಕೀಯ

ಚತ್ತೀಸ್‌ಘಡದಿಂದ ಅಕ್ಕಿ, ತೆಲಂಗಾಣದಿಂದ ಭತ್ತ ಸಿಗಲಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿಗಾಗಿ ತೆಲಂಗಾಣ ಸರ್ಕಾರವು ಕರ್ನಾಟಕಕ್ಕೆ ಭತ್ತ ಕೊಡುವುದಾಗಿ ಮತ್ತು ಛತ್ತೀಸ​ಗಢ ​ಸರ್ಕಾರ ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ 10 ಕೆ.ಜಿ ಅಕ್ಕಿ ನೀಡಲು 2 ಲಕ್ಷದ 29 ಸಾವಿರ ಮೆಟ್ರಿಕ್​ ಟನ್ ಅಕ್ಕಿ ಬೇಕು. ಪಂಜಾಬ್​ ಸರ್ಕಾರವೂ ನವೆಂಬರ್​ ತಿಂಗಳಿನಿಂದ ಅಕ್ಕಿ ಕೊಡುವುದಾಗಿ ತಿಳಿಸಿದೆ ಎಂದರು. ಬಡವರ ಕಾರ್ಯಕ್ರಮಕ್ಕೆ ತೊಂದರೆ ನೀಡಬೇಕೆಂದು ಅಕ್ಕಿ […]

ರಾಜಕೀಯ

ಧಮ್ಮಿದ್ದರೆ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ: ಬಸವರಾಜ ಬೊಮ್ಮಾಯಿ

ಇದು ಸುಳ್ಳ ಮಳ್ಳರ ಸರ್ಕಾರ: ಬಸವರಾಜ ಬೊಮ್ಮಾಯಿ ಬೆಂಗಳೂರು: ಕಾಂಗ್ರೆಸ್ ಸಿಎಂಗೆ ಧಮ್ಮಿದ್ದರೆ, ತಾಕತ್ತಿದ್ದರೆ ಎಲ್ಲ ಕಡೆಯಿಂದ ಅಕ್ಕಿ ಶೇಖರಿಸಿ. ಕೆಂದ್ರದ 5 ಪ್ಲಸ್ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ಬಿಜೆಪಿ ವತಿಯಿಂದ  ಇಂದು ನಗರದ ಆನಂದ ರಾವ್ ವೃತ್ತದ ಬಳಿ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದಾಗ ಅವರನ್ನು ಪೊಲೀಸರು ಬಂಧಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ […]

eMedia Kannada  @2025. All Rights Reserved.