Tag: bengaluru

ರಾಜಕೀಯ

‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ರಿಂದ ಪ್ರಾರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯ ವಿಧಾನ ಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕ ತಿಳಿಸಿದ್ದಾರೆ.  ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ […]

ರಾಜಕೀಯ

ಹೆಡ್ಗೆವಾರ್, ಸಾವರ್ಕರ್, ಸೂಲಿಬೆಲೆ ಪಾಠ ಕೈ ಬಿಟ್ಟಿದ್ದೇವೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆದೇಶವೇ ಇಲ್ಲದೆ, ಕಾನೂನುಬಾಹಿರವಾಗಿ ಪಠ್ಯ ಪರಿಷ್ಕರಣೆ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಯಾವುದೇ ಅರ್ಹತೆ ಇಲ್ಲದ ರೋಹಿತ್ ಚಕ್ರತೀರ್ಥ ಎಂಬ ಬಲಪಂಥೀಯ ಟ್ರೋಲರ್‌ ಒಬ್ಬರ ಅಧ್ಯಕ್ಷತೆಯಲ್ಲಿ ಸಮಾಜವಿರೋಧಿ ಪಠ್ಯಗಳನ್ನು ಸೇರಿಸಲಾಗಿದೆ ಎಂದು ಆರೋಪಿಸಿ ಪ್ರತಿಭಟನೆಗಳು ಜರುಗಿದ್ದವು. ನಾವು ಅಧಿಕಾರಕ್ಕೆ ಬಂದರೆ ಆ ಪಠ್ಯಗಳನ್ನು ಕೈಬಿಡುತ್ತೇವೆ ಎಂದು ಕಾಂಗ್ರೆಸ್ ಪಕ್ಷ ಹೇಳಿತ್ತು. ಇಂದು ನಡೆದ ಸಂಪುಟ ಸಭೆಯಲ್ಲಿ ಬಿಜೆಪಿ ಸರ್ಕಾರದ ಮಾಡಿದ ಪಠ್ಯ ಪರಿಷ್ಕರಣೆಯ ಬದಲಾವಣೆಗಳನ್ನು ತೆಗೆದುಹಾಕಿದ್ದೇವೆ ಎಂದು ಪ್ರಾಥಮಿಕ ಮತ್ತು […]

ಅಪರಾಧ

ತಾಯಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ಮೃತದೇಹ ತುಂಬಿ ಪೊಲೀಸರಿಗೆ ಶರಣಾದ  ಮಗಳು

ಬೆಂಗಳೂರು:  ತನ್ನ ತಾಯಿಯನ್ನು ಕೊಂದು, ಮೃತದೇಹವನ್ನು ಸೂಟ್‌ಕೇಸ್‌ ನಲ್ಲಿ ಹಾಕಿ ಪೋಲಿಸ್‌ ಠಾಣೆಗೆ ತಂದು ಪೋಲೀಸರಿಗೆ ಶರಣಾಧ ಘಟನೆ ಬೆಂಗಳೂರಿನಲ್ಲಿ ಘಟಿಸಿದೆ. ತನ್ನ ತಾಯಿ ಬೀವಾ ಪಾಲ್ (70) ಅವರಿಗೆ 20 ನಿದ್ರೆ ಮಾತ್ರೆಗಳನ್ನು ಕೊಟ್ಟುಮಲಗಿಸಿ, ನಂತರ ಶಾಲಿನಿಂದ ಕುತ್ತಿಗೆ ಬಿಗಿದು ಕೊಂದಿರುವ ಮಗಳು ಸೆನಾಲಿ ಸೇನ್ (39), ಮೃತದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿಕೊಂಡು ಬೆಂಗಳೂರಿನ ಮೈಕೊ ಲೇಔಟ್ ಠಾಣೆಗೆ ಶರಣಾಗಿದ್ದಾಳೆ.  ಆರೋಪಿ ಸೆನಾಲಿ ಸೇನ್, ತಾಯಿ ಬೀವಾ ಪಾಲ್ ಮತ್ತು ಅತ್ತೆ ಜೊತೆ ಬಿಳೇಕನಹಳ್ಳಿ ಅಪಾರ್ಟ್‌ಮೆಂಟ್‌ ಸಮುಚ್ಚಯದಲ್ಲಿ […]

ಅಪರಾಧ

ಗ್ಯಾಸ್ ಗೀಸರ್ ನಿಂದ ವಿಷ ಅನಿಲ ಸೋರಿಕೆ : ಇಬ್ಬರ ಮೃತ್ಯು

ಗ್ಯಾಸ್ ಗೀಸರ್ ನಿಂದ ವಿಷ ಅನಿಲ ಸೋರಿಕೆ : ಇಬ್ಬರ ಮೃತ್ಯು ಬೆಂಗಳೂರು: ಗ್ಯಾಸ್ ಗೀಸರ್ನಿಂದ ವಿಷ ಅನಿಲ ಸೋರಿಕೆ ಆಗಿ ಇನ್ನೇನು ಕೆಲವೇ ದಿನಗಳಲ್ಲಿ ಮದುವೆ ಆಗಲು ಸಿದ್ದರಾಗಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಚಂದ್ರಶೇಖರ್, ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ನಿವಾಸಿ ಸುಧಾರಾಣಿ ಎಂದು ಗುರುತಿಸಲಾಗಿದೆ. ಇಬ್ಬರಿಗೂ ಮದುವೆ ನಿಶ್ಚಯವಾಗಿತ್ತು, ಹೀಗಾಗಿ ಇಬ್ಬರೂ ಜೊತೆಯಲ್ಲಿ ಕಾಲ ಕಳೆಯುತ್ತಿದ್ದರು ಎನ್ನಲಾಗಿದೆ. ಈ ನಡುವೆ ಭಾನುವಾರ ಇಬ್ಬರು ಜೊತೆಯಾಗಿ ಸಾನ […]

ಪ್ರಚಲಿತ ರಾಜಕೀಯ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ ಅಂತಿಮವಲ್ಲ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ ಅಂತಿಮವಲ್ಲ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಕರಡು ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆ ಅರ್ಜಿ ಇನ್ನೂ ಅಂತಿಮವಾಗಿಲ್ಲ, ಅದರಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದ್ದು, ಅಂತಿಮ ಅರ್ಜಿಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, […]

ರಾಜಕೀಯ

ಗೃಹ ಲಕ್ಷ್ಮಿ ಯೋಜನೆಯಡಿ 1.3 ಕೋಟಿ ಅರ್ಜಿ ನಿರೀಕ್ಷೆ: ಕೃಷ್ಣ ಬೈರೇಗೌಡ

ಗೃಹ ಲಕ್ಷ್ಮಿ ಯೋಜನೆಯಡಿ 1.3 ಕೋಟಿ ಅರ್ಜಿ ನಿರೀಕ್ಷೆ: ಕೃಷ್ಣ ಬೈರೇಗೌಡ ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಯಡಿ 1.3 ಕೋಟಿ ಅರ್ಜಿಗಳು ಬರುವ ನಿರೀಕ್ಷೆ ಇದೆ. ಅವುಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕಂದಾಯ ಇಲಾಖೆ ಸಹಕಾರ ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸಭೆ ನಡೆಸಿದ ಬಳಿಕ ಅವರು […]

ರಾಜಕೀಯ

ಗೃಹಜ್ಯೋತಿ, ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿದ ಸಂಪೂರ್ಣ ಮಾಹಿತಿ ಇಲ್ಲಿದೆ.

 ಬೆಂಗಳೂರುರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಜನರಿಗೆ ಹಲವು ಗೊಂದಲಗಳು ಹುಟ್ಟಿಕೊಂಡಿದ್ದವು. ಆದರೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಸಿಎಂ ಆಫ್​ ಕರ್ನಾಟಕ ಟ್ವಿಟರ್​ ಖಾತೆಯಲ್ಲಿ ಸರಣಿ ಟ್ವೀಟ್ ಮೂಲಕ ಸಂಪೂರ್ಣ ಮಾಹಿತಿ ಹಂಚಿಕೊಂಡಿದ್ದಾರೆ.  ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾಗಿ ಟ್ವೀಟ್​ನಲ್ಲಿ […]

ರಾಜಕೀಯ

  ಹೇಡಿಗಳ ವಿಚಾರ ಪಠ್ಯದಲ್ಲಿರಲು ಬಿಡಲ್ಲ: ಬಿ.ಕೆ. ಹರಿಪ್ರಸಾದ್

ಶಿವಮೊಗ್ಗ: ಆರ್‌ ಎಸ್‌ ಎಸ್‌ ಸಂಸ್ಥಾಪಕರಲ್ಲೊಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸೇರಿದಂತೆ ಸರ್ಕಾರದ ಯಾವ ಇಲಾಖೆಯಲ್ಲೂ ಸಂಘ ಪರಿವಾರದ ಸಿದ್ಧಾಂತಗಳು ನುಸುಳಲು ಅವಕಾಶ ನೀಡುವುದಿಲ್ಲ. ಹೆಡಗೇವಾರ್ ತರಹದ ರಣಹೇಡಿಗಳ ವಿಚಾರ ಇನ್ನು ಮುಂದೆ ಪಠ್ಯದಲ್ಲಿ ಇರುವುದಿಲ್ಲ ಎಂದರು.  ಹೆಡಗೇವಾರ್ ಒಬ್ಬ ಸ್ವಾತಂತ್ರ್ಯ ಹೋರಾಟಗಾರ ಎಂಬುದನ್ನು ಬಿಜೆಪಿಯವರು ಸಾಬೀತು ಮಾಡಲಿ. ಬ್ರಿಟಿಷರ ಕ್ಷಮಾಪಣೆ […]

ರಾಜಕೀಯ

ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

  ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಪಠ್ಯಪುಸ್ತಕ ಪರಿಷ್ಕರಣೆ ಮಾಡಬೇಕು ಎಂದು ನಾಡಿನ ಪ್ರಜ್ಞಾವಂತರು ಮುಖ್ಯಮಂತ್ರಿಯವರು ಮನವಿ ಮಾಡಿದ್ದರು. ”ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ. ಮಕ್ಕಳಿಗೆ ಅವಶ್ಯಕತೆ ಇಲ್ಲದ್ದನ್ನು ತಜ್ಞರು ಪರಿಶೀಲಿಸಿ ತೀರ್ಮಾನಿಸುತ್ತಾರೆ. ಮುಂದಿನ ಸಂಪುಟದಲ್ಲೇ ಚರ್ಚೆ ಮಾಡಲಾಗುತ್ತದೆ” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.  ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”’ಆರಂಭದಲ್ಲಿ ಸೇತು ಬಂಧ ಇರಲಿದೆ. ಮಕ್ಕಳು ಪಠ್ಯಕ್ಕೆ ಹೋಗಲ್ಲ. ಮತ್ತು ಪಠ್ಯದಲ್ಲಿ ಏನು ಓದಿಸಬೇಕು, […]

ರಾಜಕೀಯ

13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸುದ್ದಿ ಹಬ್ಬಿಸುತ್ತಿದ್ದಾರೆ, ಸೋಲಿನ ನೆಪದಲ್ಲಿ ಮನೋಸ್ತೈರ್ಯ ಕುಗ್ಗಿಸುವ ಯತ್ನ ನಡೆದಿದೆ ; ಡಿವಿಎಸ್

ಬೆಂಗಳೂರು: ಬಿಜೆಪಿ  ಪಕ್ಷದ 13 ಮಂದಿ ಸಂಸದರ ವಿರುದ್ಧ ವ್ಯವಸ್ಥಿತ ರೀತಿಯ ಅಪಪ್ರಚಾರ ನಡೆದಿದೆ. ನಮಗೆಲ್ಲ ವಯಸ್ಸಾಗಿದೆ, ಅನಾರೋಗ್ಯದ ಕಾರಣ ನೀಡಿ ಟಿಕೆಟ್‌ ನಿರಾಕರಣೆಯ ಹಬ್ಬಿಸಲಾಗುತ್ತಿದೆ.  ಇದಕ್ಕೆಲ್ಲ ರಾಷ್ಟ್ರೀಯ ನಾಯಕರು ತೆರೆ ಎಳೆಯಬೇಕಾಗಿದೆ ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಬೆಂಗಳೂರಿನಲ್ಲಿ ಹೇಳಿದ್ದಾರೆ. ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿದೆ. ಇದರ ನಡುವಲ್ಲೇ ಚುನಾವಣೆ ಸೋಲಿನ ನೆಪದಲ್ಲಿ ನಾಯಕರ ಮನೋ ಸೈರ್ಯವನ್ನು ಕುಗ್ಗಿಸುವ ಯತ್ನ ನಡೆದಿದೆ. ಪಕ್ಷದ ನಾಯಕರನ್ನು ನಿರ್ವೀಯ್ರಗೊಳಿಸುವ ಪ್ರಯತ್ನ ನಡೆದಿದೆ. […]

eMedia Kannada  @2025. All Rights Reserved.