ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ನಿಧನ (Former CM, Former Foreign Minister SM Krishna Passes away)
ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ನಿಧನ (Bengaluru) ಬೆಂಗಳೂರು: ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಮಂಗಳವಾರ) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. […]








