ರಾಜಕೀಯ
ಕನಕದಾಸರು ವಿಶ್ವಮಾನವರಾಗಿದ್ದರು: ಸಿಎಂ ಸಿದ್ದರಾಮಯ್ಯ (Kanakadasa was Cosmopolitian : CM Siddaramaiah)
ಕನಕದಾಸರು ವಿಶ್ವಮಾನವರಾಗಿದ್ದರು: ಸಿಎಂ ಸಿದ್ದರಾಮಯ್ಯ (Bengaluru) ಬೆಂಗಳೂರು, ನವೆಂಬರ್ 18: ಕನಕದಾಸರು ಸಂತರಷ್ಟೇ ಅಲ್ಲದೇ ದಾರ್ಶನಿಕರೂ, ಸಮಾಜ ಸುಧಾರಕರೂ ಆಗಿದ್ದರು. ವಿಶ್ವಮಾನವರೂ ಆಗಿದ್ದ ಅವರ ಜಯಂತ್ಯೋತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನಕದಾಸ ಜಯಂತಿ ಅಂಗವಾಗಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಭಕ್ತ ಕನಕದಾಸ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ ಜನಿಸಿದರು. ಕಾಗಿನೆಲೆ ಅವರ ಕರ್ಮಭೂಮಿ. ಕಾವ್ಯ, ಕೀರ್ತನೆಗಳನ್ನು ರಚನೆ […]

