Tag: CEO PRATHIK BAYAL

ಧಾರ್ಮಿಕ

ಸೆ. 25 : ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ (Sep. 25 : Unveiling of bronze bust of Mogaveera Kulguru Shri Madhav Mangala Pujarya)

ಸೆ. 25 : ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ  ಹಾಸ್ಟೆಲ್ ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣಾ ಸಮಾರಂಭ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ, ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ […]

ರಾಜಕೀಯ

ಮಜೂರಿನಲ್ಲಿ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ (Kapu Taluk Prajaseva Andolan meeting at Mazur)

ಮಜೂರಿನಲ್ಲಿ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆ (Kaup) ಕಾಪು : ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಕಾಪು ವತಿಯಿಂದ ಶನಿವಾರ ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ ಜರಗಿತು.  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.   ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 76 ಅರ್ಜಿಗಳನ್ನು ಸ್ವೀಕರಿಸಲಾಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು […]

ಶಾಲಾ ಕಾಲೇಜು

ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ(Yermal Tenka Kinara Global School Anniversary)

ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಸಿಇಓ ಪ್ರತೀಕ್ ಬಾಯಲ್ (Yhenka Yermal) ತೆಂಕ ಎರ್ಮಾಳು:  ತೆಂಕ ಎರ್ಮಾಳು ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು.    ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರತೀಕ್ ಬಾಯಲ್ ರವರು  ಕಾರ್ಯಕ್ರಮ ಉದ್ಘಾಟಿಸಿದರು ಅವರು ಮಾತನಾಡಿ, ಶಿಕ್ಷಣವು ಕೇವಲ ಅಂಕಕ್ಕೆ ಸೀಮಿತವಾಗದೆ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರ ಬೇಕು ಎಂದರು.    ಇನ್ನೊರ್ವ ಮುಖ್ಯ ಅತಿಥಿ ಉಡುಪಿ ಜಿಲ್ಲಾ […]

ಅಪರಾಧ

ತೆಂಕ ಗ್ರಾ.ಪಂ ಪಿಡಿಓರವರ ಪೋರ್ಜರಿ ಸಹಿ ಪ್ರಕರಣ :  ಪೋಲಿಸರು, ತಾ.ಪಂ ತನಿಖೆ ನಿಧಾನ ಗತಿ (Tenka Gram Panchayat PDO’s forged signature case: Police, TP slow in investigation)

ತೆಂಕ ಗ್ರಾ.ಪಂ ಪಿಡಿಓರವರ ಪೋರ್ಜರಿ ಸಹಿ ಪ್ರಕರಣ :  ಪೋಲಿಸರು, ತಾ.ಪಂ ತನಿಖೆ ನಿಧಾನ ಗತಿ  ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಗ್ರಾಮಸ್ಥರ ಆಕ್ರೋಶ (Padubidri) ಪಡುಬಿದ್ರಿ : ಎರ್ಮಾಳು ತೆಂಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಸಿಬ್ಬಂದಿಗಳು ಪಿಡಿಒ ರಜನಿಯವರ ಸೀಲು ಮತ್ತು ಪೋರ್ಜರಿ ಸಹಿಯೊಂದಿಗೆ ಸ್ಥಿರಾಸ್ತಿಗಳ ನಿಯಮ ಬಾಹಿರ ಖರೀದಿ/ವರ್ಗಾವಣೆಗಾಗಿ ದೃಢಪತ್ರಗಳನ್ನು ನೀಡಿದ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತಿಂಗಳು ಕಳೆದರೂ ಇನ್ನೂ ಕ್ರಮ ವಹಿಸದ ಪೋಲಿಸ್ ಇಲಾಖೆಯ ಮತ್ತು ವಿವಿಧ ಇಲಾಖೆಗಳ ಬಗ್ಗೆ ತೆಂಕ […]

Uncategorised

ಜಿಲ್ಲಾ ಮಟ್ಟದ ‘ಕಡಲ ತೀರ ವಲಯ ನಿರ್ವಹಣಾ ಸಮಿತಿ’ ಸದಸ್ಯರಾಗಿ ಎ.ಕೆ. ಅನ್ಸಾಫ್ ನೇಮಕ (A.K. Ansaf appointed as member of district level ‘Coastal Zone Management Committee’)

ಜಿಲ್ಲಾ ಮಟ್ಟದ ‘ಕಡಲ ತೀರ ವಲಯ ನಿರ್ವಹಣಾ ಸಮಿತಿ‘ ಸದಸ್ಯರಾಗಿ ಎ.ಕೆ. ಅನ್ಸಾಫ್ ನೇಮಕ ಸಿ ಆರ್ ಝಡ್ ವ್ಯಾಪ್ತಿಯ ಸಂರಕ್ಷಣೆಗೆ ಸಂಬಂಧಪಟ್ಟಂತೆ ಕಾರ್ಯನಿರ್ವಹಿಸಲಿರುವ ಸಮಿತಿ (Mangaluru) ಮಂಗಳೂರು: ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಯಾದ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಕಡಲ ತೀರ ವಲಯ ನಿರ್ವಹಣಾ ಸಮಿತಿಯನ್ನು ಪುನರ್ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.     ಉಡುಪಿ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿರುವ 13 ಮಂದಿಯ ನೇತೃತ್ವದ ಈ ಸಮಿತಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಪ್ತ […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿಆವಿಷ್ಕಾರ್ 2025 ವಿಜ್ಞಾನ ಉತ್ಸವ (SMVITM Inaugurates AVISHKAR 2K25 – A Science Fest for Young Minds)

 ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿಆವಿಷ್ಕಾರ್ 2025 ವಿಜ್ಞಾನ ಉತ್ಸವ ವಿಜ್ಞಾನ ಉತ್ಸವ ಉದ್ಘಾಟಿಸಿದ ಜಿಲ್ಲಾ ಪಂಚಾಯತ್‌ನ ಸಿಇಓ ಪ್ರತೀಕ್ ಬಾಯಲ್‌ (Bantakal) ಬಂಟಕಲ್‌ : ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಪದವಿಪೂರ್ವ ಮತ್ತು ಫ್ರೌಡಶಾಲಾ ವಿದ್ಯಾರ್ಥಿಗಳಿಗಾಗಿ ಆವಿಷ್ಕಾರ್ 2025 ವಿಜ್ಞಾನ ಉತ್ಸವವನ್ನು ಶನಿವಾರ ಆಯೋಜಿಸಲಾಗಿತ್ತು.    ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್‌ ರವರು   ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.  ಅವರು ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ವಿಜ್ಞಾನ ಮತ್ತು […]

ಆಹಾರ

ಉಡುಪಿ ಉಸ್ತುವಾರಿ ಸಚಿವರಿಂದ ಕಾಪುವಿನಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ (Indira Canteen inaugurated in Kapu by Udupi in-charge Minister)

ಉಡುಪಿ ಉಸ್ತುವಾರಿ ಸಚಿವರಿಂದ ಕಾಪುವಿನಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ (Kaup) ಕಾಪು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು,ಕಾಪು ಪುರಸಭೆ ಎದುರು ನೂತನವಾಗಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದರು. ‌ ಈ ಸಂದರ್ಭ ಅವರು ಮಾತನಾಡಿ, ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಮಾಡಿದ ಬಗ್ಗೆ ಬಹಳಷ್ಟು ಹೆಮ್ಮೆ ಎನಿಸುತ್ತಿದೆ. ಬಡ ವರ್ಗದವರಿಗೆ ಮತ್ತು ಶ್ರಮಿಕ ವರ್ಗದವರಿಗಾಗಿ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಹಸಿದರಿಗೆ ಮಾತ್ರಾ ಅನ್ನದ […]

health

ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Yoga is the secret to my health: Minister Lakshmi Hebbalkar)

ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿಯಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭದಲ್ಲಿ ಹೇಳಿಕೆ (Udupi) ಉಡುಪಿ: ಇಡೀ‌ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ.  ಪ್ರತಿಯೊಬ್ಬರೂ  ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ 11ನೇ […]

ರಾಜಕೀಯ

ಉಡುಪಿಯ ರಜತಾದ್ರಿಯಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆ : ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಪಸ್ಥಿತಿ (Quarterly KDP meeting at Rajatadri, Udupi: In-charge Minister Lakshmi Hebbalkar present)

ಉಡುಪಿಯ ರಜತಾದ್ರಿಯಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆ : ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಪಸ್ಥಿತಿ (Udupi) ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ತ್ರೈಮಾಸಿಕ ಕೆ.ಡಿ.ಪಿ ಸಭೆ ನಡೆಸಲಾಯಿತು.  ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ,ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕಾಪು ಶಾಸಕ ಗುರ್ಮೆ ಸುರೇಶ್ […]

PROBLEMS

  ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ (Action of Cancelation of Kanchinadka Toll gate : Minister Laxmi Hebbalkar)

ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ   ಉಡುಪಿ ಜಿಲ್ಲೆಯ ಜನರೊಂದಿಗೆ ಸದಾ ಇರುವೆ : ಲಕ್ಷ್ಮೀ ಹೆಬ್ಬಾಳ್ಕರ್ ‌ (Padubidri) ಪಡುಬಿದ್ರಿ: ಪಡುಬಿದ್ರಿ-ಬೆಳ್ಳಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.  ಈ ವೇಳೆ ಮಾತನಾಡಿದ ಸಚಿವರು, ಸ್ಥಳೀಯರ […]

eMedia Kannada  @2025. All Rights Reserved.