ಕರಾವಳಿ
a special story…. ಉಚ್ಚಿಲದಲ್ಲಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ನಡೆಸುವ “ದಾರ” ಸಂಪನ್ನ
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ನಡೆಸುವ ಮೋಗವೀರರು ಮೀನುಗಾರಿಕೆಗಾಗಿ ಬಳಸುವ ಬಲೆಗಳನ್ನು ಜೋಡಿಸುವ ಕಾರ್ಯ “ದಾರ” ಭಾನುವಾರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಿತು. ವರ್ಷಂಪ್ರತಿಯಂತೆ ಉಡುಪಿ ಜಿಲ್ಲೆಯ ಉಚ್ಚಿಲ ಕೇಂದ್ರವಾಗಿಟ್ಟುಕೊಂಡು ಉಚ್ಚಿಲ- ಎರ್ಮಾಳು ವಲಯದ ನಾಡದೋಣಿ ಮೀನುಗಾರರು ಸಾಂಪ್ರ‍್ರದಾಯಿಕ ನಾಡದೋಣಿ ಮೀನುಗಾರಿಕೆಗಾಗಿ “ದಾರ” ಮುಹೂರ್ತ ನಡೆಸಿದ್ದಾರೆ. ಕಳೆದ ವರ್ಷ ಆಗಸ್ಟ್ ೧೫ ರಂದು ನಾಡದೋಣಿ ಮೀನುಗಾರಿಕೆ ಋತು ಕೊನೆಗೊಂಡ ಬಳಿಕ ಮೀನುಗಾರಿಕೆಗೆ ಬಳಸಿದ ಮಾಟುಬಲೆಯನ್ನು ಬಿಡಿಬಿಡಿಯಾಗಿಸಿ ಸಂಗ್ರಹಿಸಿಡುತ್ತಾರೆ. ಹರಿದ […]

