ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಬಳಿಕ ನಾಲ್ವರ ಬಂಧನ
ಮಣಿಪುರದ ಕಾಂಗ್‌ಪೋಕ್ಷಿ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲು ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆದ ಬಳಿಕ ಗುರುವಾರ ದೇಶಾದ್ಯಂತ ಆಕ್ರೋಶ ವ್ಯಕ್ತವಾಯಿತ. ಆಬಳಿಕವಷ್ಟೇ ಅಲ್ಲಿಯ ಬಿಜೆಪಿ ಸರ್ಕಾರ ಆರೋಪಿಗಳ ಬಂಧನಕ್ಕೆ ಮುಂದಾಯಿತು. ಸಧ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೆ ಚಾನೆಲ್ ಜೊತೆ ದೂರವಾಣಿ ಕರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು, ಗುರುವಾರ ಸಂಜೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು […]


