Tag: ex cm bommayi

ರಾಜಕೀಯ

ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿಮಾತ್ರ ಬರುತ್ತದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನವರು ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಅಕ್ಕಿಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಈಗ ಐದು ಕೆಜಿ ಕೊಡುವುದಾಗಿ ಹೇಳುತ್ತಿದ್ದಾರೆ. ಅವರು ಮಾತಿಗೆ ತಪ್ಪುತ್ತಿದ್ದಾರೆ. ಎಷ್ಟಾದರೂ ಆಗಲಿ ನಾವು ಅಕ್ಕಿಯನ್ನೇ ಕೊಡುತ್ತೇವೆ ಅಂತ […]

ರಾಜಕೀಯ

ಕಾಂಗ್ರೆಸ್‌ನಿಂದ ಸೇಡಿನ ರಾಜಕಾರಣ ; ಬಸವರಾಜ ಬೊಮ್ಮಾಯಿ ಆರೋಪ

ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಪೂರೈಸುವುದು ಸಚಿವರಿಗೇ ಅನುಮಾನ: ಬಸವರಾಜ ಬೊಮ್ಮಾಯಿ  ಬಾಗಲಕೋಟೆ : ರಾಜ್ಯದ ಜನತೆಗೆ ಸುಳ್ಳು ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್  ಸೇಡಿನ ರಾಜಕಾರಣ ಆರಂಭಿಸಿದೆ ಎಂದು ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಹೇಳಿದರು. ಸೋಮವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮಾತ್ರಕ್ಕೆ ಏನೆಲ್ಲ ಮಾಡಲು ಆಗಲ್ಲ. ಅಧಿಕಾರದಲ್ಲಿ ಇರುವ ಪಕ್ಷದ ನಿರ್ದೇಶನದಂತೆ ಪೊಲೀಸರು ನಡೆದುಕೊಳ್ಳಬಹುದು. […]

ರಾಜಕೀಯ

ಸೋಲನ್ನು ಮರೆತು ಮತ್ತೆ ಮೋದಿಯವರನ್ನು ಪ್ರಧಾನಿ ಮಾಡಲು ಶ್ರಮಿಸೋಣ: ಬಸವರಾಜ ಬೊಮ್ಮಾಯಿ

ಒಂದೇ ತಿಂಗಳಲ್ಲಿ ಜನಪ್ರಿಯತೆ ಕಳೆದುಕೊಂಡ ಸರ್ಕಾರ: ಬಸವರಾಜ ಬೊಮ್ಮಾಯಿ ಬೆಳಗಾವಿ: ವಿಧಾನಸಭೆ ಚುನಾವಣೆ ‌ಸೋಲನ್ನು ಮರೆತು ಎಲ್ಲ ನಾಯಕರು ಒಂದಾಗಿ ದೇಶದಲ್ಲಿ ‌ಪ್ರಧಾನಿ ನರೇಂದ್ರ ‌ಮೋದಿ ಅವರನ್ನು ‌ಇನ್ನೊಂದು ಅವಧಿಗೆ ಪ್ರಧಾನಿ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರಲು  ಎಲ್ಲ ನಾಯಕರು,‌ ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡೋಣ […]

ರಾಜಕೀಯ

ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿಯೂ ಕಮಿಷನ್ ನಿಗಧಿಯಾಗಿದೆ ಎಂಬ ಆರೋಪ ಬಂದಿದೆ ಎಂಬ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತಿರಿಸಿದ ಅವರು, “ಈ ಸರ್ಕಾರದಲ್ಲಿ ಇದುವರೆಗೂ ನಮ್ಮನ್ನು ಯಾರೂ ಕಮಿಷನ್ ಕೇಳಿಲ್ಲ. ಒಂದು ವೇಳೆ ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ” ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಬಿಲ್ ಪಾವತಿ ಬಗ್ಗೆ ಮನವಿ ಮಾಡಿದ ನಂತರ ಅವರು ಮಾತನಾಡಿದ್ದಾರೆ. ಕಮಿಷನ್ […]

ರಾಜಕೀಯ

ಕೈಗಾರಿಕೋದ್ಯಮಿಗಳ ಪ್ರತಿಭಟನೆ, ವಿದ್ಯುತ್ ನೀತಿ ಹಳಿ ತಪ್ಪಿರುವುದಕ್ಕೆ ಸಾಕ್ಷಿ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು  ರಾಜ್ಯದ ವಿದ್ಯುಶ್ಚಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕೈಗಾರಿಕೆಯಲ್ಲಿ ಅತ್ಯಂತ ಮುಂದುವರೆದ ರಾಜ್ಯವಾಗಿದೆ. ಇಲ್ಲಿ ಸಣ್ಣ ಉದ್ಯಮಗಳಿಂದ ಹಿಡಿದು ‌ಬೃಹತ್ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ನೀತಿ ಗ್ರಾಹಕರು ಹಾಗೂ ಕೈಗಾರಿಕೋದ್ಯಮಿಗಳಿಗೆ ಮಾರಕವಾಗಿರುವುದು ದುರ್ದೈವ ಮತ್ತು ಖಂಡನೀಯ. ಮುಂದಿನ […]

eMedia Kannada  @2025. All Rights Reserved.