ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಕಲ್ಬುರ್ಗಿಯವರನ್ನೂ ಕೊಂದಿದೆ: ಸಿಎಂ
ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಎಂ.ಎಂ.ಕಲ್ಬುರ್ಗಿಯವರನ್ನೂ ಕೊಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಸೆ 5 : ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಭೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಗೌರಿ ಮೆಮೋರಿಯಲ್ ಟ್ರಸ್ಟ್ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣಾರ್ಥ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ “ಸರ್ವಾಧಿಕಾಲದ ಹೊತ್ತಲ್ಲಿ ದೇಶವನ್ನು ಮರುಕಟ್ಟುವ ಕಲ್ಪನೆ” ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಾತ್ಮಗಾಂಧಿ ಅತ್ಯಂತ ಧರ್ಮನಿರಪೇಕ್ಷತೆಯಿಂದ ಬದುಕನ್ನು ಆಚರಿಸುತ್ತಿದ್ದರು. […]

