ಸಂವಿಧಾನಕ್ಕೆ ವಿರುದ್ಧ ಸಲ್ಲದು : ಮುಖ್ಯಮಂತ್ರಿ ಸಿದ್ದರಾಮಯ್ಯ (No one should tolerate defamation against the Constitution CM)
ಸಂವಿಧಾನಕ್ಕೆ ವಿರುದ್ಧ ಸಲ್ಲದು : ಮುಖ್ಯಮಂತ್ರಿ ಸಿದ್ದರಾಮಯ್ಯ (Bengaluru) ಬೆಂಗಳೂರು, ಫೆಬ್ರವರಿ 24: ನಾವು ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ, ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು ಎಂಬ ಅಬ್ರಹಾಂ ಲಿಂಕನ್ ಅವರ ಮಾತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಉಲ್ಲೇಖಿಸಿದರು. ನಗರದ ಅರಮನೆ ಮೈದಾನದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿದೆ. […]