# Tags

ಪಲಿಮಾರು ಗ್ರಾಪಂ ಅಧ್ಯಕ್ಷರಾಗಿ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷರಾಗಿ ರಾಯೇಶ್ ಪೈ ಆಯ್ಕೆ

  ಪಲಿಮಾರು ಗ್ರಾಪಂ ಅಧ್ಯಕ್ಷರಾಗಿ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷರಾಗಿ ರಾಯೇಶ್ ಪೈ ಆಯ್ಕೆ ಉಡುಪಿ: ಪಲಿಮಾರು ಗ್ರಾಪಂನ ಎರಡನೇ ಅವಧಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಹಿಂದುಳಿದ ಬಿ ಮಹಿಳೆ ವರ್ಗದ ಬಿಜೆಪಿ ಬೆಂಬಲಿತ ಸದಸ್ಯರಾದ ಸೌಮ್ಯಲತಾ ಶೆಟ್ಟಿಯವರು ಅವಿರೋಧ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಸಾಮಾನ್ಯ ವರ್ಗದ ರಾಯೇಶ್ ಪೈಯವರು ಕಾಂಗ್ರೆಸ್ ಬೆಂಬಲಿತ ಸತೀಶ್ ದೇವಾಡಿಗರನ್ನು ೯-೭ ಮತಗಳ ಅಂತರದಿAದ ಸೋಲಿಸಿ ಅಯ್ಜೆಯಾದರು.  ೧೬ ಸದಸ್ಯ ಬಲದ ಗ್ರಾಪಂನಲ್ಲಿ ಬಿಜೆಪಿ ಬೆಂಬಲಿತರು ೯ ಮತ್ತು ಕಾಂಗ್ರೆಸ್ ಬೆಂಬಲಿತ ೭ ಸದಸ್ಯ ಬಲ […]

ಎಲ್ಲೂರು ಗ್ರಾ.ಪಂ. ಅಧ್ಯಕ್ಷರಾಗಿ ರವಿರಾಜ್ ರಾವ್, ಉಪಾಧ್ಯಕ್ಷರಾಗಿ ಉಷಾ ಎನ್. ಅವಿರೋಧ ಆಯ್ಕೆ

ಎಲ್ಲೂರು ಗ್ರಾ.ಪಂ. ಅಧ್ಯಕ್ಷರಾಗಿ ರವಿರಾಜ್ ರಾವ್, ಉಪಾಧ್ಯಕ್ಷರಾಗಿ ಉಷಾ ಎನ್. ಅವಿರೋಧ ಆಯ್ಕೆ  ಕಾಪು : ಎಲ್ಲೂರು ಗ್ರಾ.ಪಂ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ರವಿರಾಜ್ ರಾವ್ ಮತ್ತು ಉಪಾಧ್ಯಕ್ಷರಾಗಿ ಉಷಾ ಎನ್.  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  14 ಸದಸ್ಯ ಬಲದ ಗ್ರಾ.ಪಂ.ನಲ್ಲಿ ಬಿಜೆಪಿ ಬೆಂಬಲಿತ 9 ಹಾಗೂ ಕಾಂಗ್ರೆಸ್ ಬೆಂಬಲಿತ 5 ಸದಸ್ಯರಿದ್ದಾರೆ.  ಸಾಮಾನ್ಯ ಮೀಸಲಿನಡಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ರವಿರಾಜ್ ರಾವ್ ಮತ್ತು ಉಪಾಧ್ಯಕ್ಷ ಹುದ್ದೆಗೆ ಹಿಂದುಳಿದ ವರ್ಗ ಅ ಮಹಿಳೆ ಮೀಸಲಿನಡಿ ಉಷಾ ಎನ್. […]

ತೆಂಕ ಗ್ರಾ. ಪಂ.: ಕಾಂಗ್ರೆಸ್ ಬೆಂಬಲಿತರಿಗೆ ಒಲಿದ ಗ್ರಾ. ಪಂ. ಅಧಕ್ಷ, ಉಪಾಧ್ಯಕ್ಷಗಿರಿ

 ಪಡುಬಿದ್ರಿ, ಆ. ೨೪: ತೆಂಕ ಗ್ರಾ. ಪಂ. ನ ಎರಡನೇ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಸುರೇಖಾ ಹಾಗೂ ಉಪಾಧ್ಯಕ್ಷರಾಗಿ ಕಸ್ತೂರಿ ಪ್ರವೀಣ್ ಗುರುವಾರ ನಡೆದ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಕಳೆದ ಬಾರಿ ಬಿಜೆಪಿ ಬೆಂಬಲಿತರ ಮತಗಳಿಂದ ಅಧ್ಯಕ್ಷರಾಗಿದ್ದ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಕಸ್ತೂರಿ ಪ್ರವೀಣ್, ಈ ಬಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಧಿಕ್ಕಾರದ ಕೂಗಿನೊಂದಿಗೆ ಕೆಂಗಣ್ಣಿಗೆ ಗುರಿಯಾದರು. ತೆಂಕ ಗ್ರಾ. ಪಂ. ನಲ್ಲಿ ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ `ಅ’ಮಹಿಳೆ […]

ಮುದರಂಗಡಿ ಅಧ್ಯಕ್ಷರಾಗಿ ನಮಿತಾ, ಉಪಾಧ್ಯಕ್ಷರಾಗಿ ಮೋಹಿನಿ ಸಿ ಹೆಗಡೆ ಅವಿರೋಧ  ಆಯ್ಕೆ.

ಮುದರಂಗಡಿ ಅಧ್ಯಕ್ಷರಾಗಿ ನಮಿತಾ, ಉಪಾಧ್ಯಕ್ಷರಾಗಿ ಮೋಹಿನಿ ಸಿ ಹೆಗಡೆ ಅವಿರೋಧ  ಆಯ್ಕೆ.  ಮದರಂಗಡಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗಾಗಿ ಬುಧವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತೆ ನಮಿತಾರವರು ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಮೋಹಿನಿ ಸಿ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆ ಅಧಿಕಾರಿ ಗುರುಪ್ರಸಾದ್ ಕಾರ್ಯನಿರ್ವಹಿಸಿದರು.  ಮುದರಂಗಡಿಯಲ್ಲಿ 15 ಸದಸ್ಯರ ಬೆಂಬಲ ಇದ್ದು, 10 ಬಿಜೆಪಿ ಹಾಗೂ 5 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ . ಅಧ್ಯಕ್ಷ […]

ಶಿರ್ವ ಗ್ರಾ.ಪಂ.ಅಧ್ಯಕ್ಷರಾಗಿ ಸವಿತಾ ಪೂಜಾರಿ, ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆ

ಶಿರ್ವ ಗ್ರಾ.ಪಂ.ಅಧ್ಯಕ್ಷರಾಗಿ ಸವಿತಾ ಪೂಜಾರಿ, ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆ  ಉಡುಪಿ : ಕಾಪು ತಾಲೂಕಿನ ಶಿರ್ವ ಗ್ರಾ.ಪಂ. ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆಯಾಗಿದ್ದಾರೆ. ಇಬ್ಬರೂ ಕಾಂಗ್ರೆಸ್‌ ಬೆಂಬಲಿತರಾಗಿದ್ದಾರೆ.   ಅಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.  34 ಸದಸ್ಯಬಲದ ಶಿರ್ವ ಗ್ರಾ.ಪಂ. ನಲ್ಲಿ 20 ಮಂದಿ ಕಾಂಗ್ರೆಸ್‌ ಬೆಂಬಲಿತರು ಮತ್ತು 14 […]

ಕಟಪಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾಂಗ್ರೆಸ್‌ ಬೆಂಬಲಿತ  ಅಧ್ಯಕ್ಷರಾಗಿ ಪ್ರಭಾ ಶೆಟ್ಟಿ, ಉಪಾಧ್ಯಕ್ಷರಾಗಿ ಸುಗುಣ ಆಯ್ಕೆ

ಕಟಪಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾಂಗ್ರೆಸ್‌ ಬೆಂಬಲಿತ  ಅಧ್ಯಕ್ಷರಾಗಿ ಪ್ರಭಾ ಶೆಟ್ಟಿ, ಉಪಾಧ್ಯಕ್ಷರಾಗಿ ಸುಗುಣ ಆಯ್ಕೆ ಕಟಪಾಡಿ: ಕಟಪಾಡಿ ಗ್ರಾಮ ಪಂಚಾಯತಿಯ ಎರಡನೇ ಸಾಲಿನ  ಅಧ್ಯಕ್ಷ ಉಪಾಧ್ಯಕ್ಷರ  ಆಯ್ಕೆಗೆ ಮಂಗಳವಾರ ಚುನಾವಣೆ ನಡೆದಿದ್ದು, ಕಾಂಗ್ರೆಸ್‌ ಬೆಂಬಲಿತ ಪ್ರಭ ಶೆಟ್ಟಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸುಗುಣ  ಆಯ್ಕೆ ಆಗಿದ್ದಾರೆ. ಕಟಪಾಡಿ ಗ್ರಾಮ ಪಂಚಾಯತಿಯಲ್ಲಿ ೨೬ ಸದಸ್ಯರ ಬಲವಿದ್ದು, ಬಿಜೆಪಿ ಬೆಂಬಲಿತರಾಗಿ ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿ ಅಶೋಕ್‌ ರಾವ್‌ ಸ್ಪರ್ಧಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತೆ ಕವಿತಾ ಸುವರ್ಣ ಸ್ಫರ್ಧಿಸಿದ್ದರು. ೧೪ […]

ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶಶಿಕಲಾ, ಉಪಾಧ್ಯಕ್ಷರಾಗಿ ಹೇಮಚಂದ್ರ ಆಯ್ಕೆ

ಪಡುಬಿದ್ರಿ: ಪಡುಬಿದ್ರಿ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಶಶಿಕಲಾ ಹಾಗೂ ಉಪಾಧ್ಯಕ್ಷರಾಗಿ ಹೇಮಚಂದ್ರ ಆಯ್ಕೆಯಾಗಿದ್ದಾರೆ. ಶನಿವಾರ ಗ್ರಾಮ ಪಂಚಾಯತ್‌ ಸಭಾ ಭವನದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ೩೪ ಸದಸ್ಯ ಬಲದ ಪಡುಬಿದ್ರಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಶಶಿಕಲಾ ಹಾಗೂ ಕಾಂಗ್ರೆಸ್‌ ಬೆಂಬಲಿತೆ ಸುನಂದ ಸಾಲ್ಯಾನ್ ಅವರು ಸ್ಪರ್ಧಿಸಿದ್ದರು. ಶಶಿಕಲಾ ಅವರು ೨೩ ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಸುನಂದ ಸಾಲ್ಯಾನ್ ೧೧ ಮತಗಳು ಪಡೆದಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಹೇಮಚಂದ್ರ […]

ಬೆಳ್ಳೆ ಗ್ರಾ.ಪಂ. ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ, ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಆಯ್ಕೆ

ಬೆಳ್ಳೆ ಗ್ರಾ.ಪಂ. ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ, ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಆಯ್ಕೆ ಬೆಳ್ಳೆ: ಕಾಪು ತಾಲೂಕಿನ ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ ಮತ್ತು ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಬ್ಬರೂ ಬಿಜೆಪಿ ಬೆಂಬಲಿತರಾಗಿದ್ದಾರೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗಕ್ಕೆ ಮೀಸಲಾಗಿತ್ತು.  ಉಡುಪಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್‌ ಚುನಾವಣಾಧಿಕಾರಿಯಾಗಿದ್ದರು.  ಗ್ರಾ.ಪಂ. ಪಿಡಿಒ ಸುಧಾಕರ ಶೆಟ್ಟಿ,ಮಾಜಿ […]

ಕೋಟೆ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರಾಗಿ ಪ್ರಮೀಳಾ ಜತ್ತನ್ನ, ಉಪಾಧ್ಯಕ್ಷರಾಗಿ ಯೋಗೀಶ್  ಆಯ್ಕೆ

ಕೋಟೆ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರಾಗಿ ಪ್ರಮೀಳಾ ಜತ್ತನ್ನ, ಉಪಾಧ್ಯಕ್ಷರಾಗಿ ಯೋಗೀಶ್  ಆಯ್ಕೆ ಕೋಟೆ: ಕಾಪು ತಾಲೂಕು ಕೋಟೆ ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪ್ರಮೀಳಾ ಜತ್ತನ್ನ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯೋಗೀಶ್ ಆಯ್ಕೆಯಾಗಿದ್ದಾರೆ. ೧೫ ಸದಸ್ಯ ಬಲದ ಕೋಟೆ ಗ್ರಾ. ಪಂ. ನಲ್ಲಿ ೭ ಬಿಜೆಪಿ ಬೆಂಬಲಿತ, ೮ ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು, ಈ ಪೈಕಿ ಕಾಂಗ್ರೆಸ್ ಬೆಂಬಲಿತ ಸದಸ್ಯೆಯೋರ್ವರು ಈಗಾಗಲೇ ಬಿಜೆಪಿ ಸೇರ್ಪಡೆಗೊಂಡಿದ್ದ ಕಾರಣ ಅಧಿಕಾರ ಬಿಜೆಪಿಗೆ […]

ಇನ್ನಂಜೆ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಸುರೇಖಾ ಶೆಟ್ಟಿ ಅವಿರೋಧ ಆಯ್ಕೆ

ಇನ್ನಂಜೆ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಸುರೇಖಾ ಶೆಟ್ಟಿ ಅವಿರೋಧ ಆಯ್ಕೆ  ಕಾಪು, ಆ. 17 : ಇನ್ನಂಜೆ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಸುರೇಖಾ ಶೆಟ್ಟಿಯವರು ಗುರುವಾರ ಮದ್ಯಾಹ್ನ ಆಯ್ಕೆಯಾಗಿದ್ದಾರೆ.  13 ಸದಸ್ಯ ಬಲದ ಇನ್ನಂಜೆ ಗ್ರಾ.ಪಂ. ನಲ್ಲಿ 9 ಬಿಜೆಪಿ, 3 ಕಾಂಗ್ರೆಸ್, 1 ಪಕ್ಷೇತರ ಸದಸ್ಯರಿದ್ದಾರೆ.  ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನವು […]

  • 1
  • 2