ರಾಜಕೀಯ
ರಾಜ್ಯ ಗೃಹ ಮಂತ್ರಿ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ವರರಿಗೆ ಹೆಜಮಾಡಿಯ ಗಡಿಭಾಗದಲ್ಲಿ ಅದ್ದೂರಿ ಸ್ವಾಗತ
ನೂತನ ಗೃಹ ಮಂತ್ರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಉಡುಪಿ ಜಿಲ್ಲೆಗೆ ಪ್ರಥಮ ಬಾರಿಗೆ ಅಗಮಿಸಿದ ಡಾ.ಜಿ.ಪರಮೇಶ್ವರ್‌ರವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಜಿಲ್ಲಾ ಗಡಿ ಭಾಗವಾದ ಹೆಜಮಾಡಿಯಲ್ಲಿ ಮಂಗಳವಾರ ಸಂಜೆ ೪ ಗಂಟೆಯ ಸುಮಾರಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಹೆಜಮಾಡಿ ಟೋಲ್‌ಗೇಟ್ ಬಳಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ನವೀನ್‌ಚಂದ್ರ ಸುವರ್ಣ ಹಾಗೂ ಸಂತೋಷ್ […]

