ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದ ಶ್ರೀಮನ್ಮಹಾರಥೋತ್ಸವ (Uchila Mahalaxmi Temple Rathothsava)
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದ ಶ್ರೀಮನ್ಮಹಾರಥೋತ್ಸವ (Uchila) ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೆ ಒಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಶ್ರೀಮನ್ಮಹಾರಥೋತ್ಸವವು ಇಂದು ವಿವಿಧ ಪೂಜಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿದ್ಯುಕ್ತವಾಗಿ ಶ್ರೀ ಸನ್ನಿದಿಯಲ್ಲಿ ಸಂಪನ್ನಗೊಂಡಿತು. ದೇವಳದ ರಥೋತ್ಸವ ಕಾರ್ಯಕ್ರಮ ಮುಂದಿನ ಶುಕ್ರವಾರದವರೆಗೆ ನೆರವೇರಲಿದೆ. ದೇವಸ್ಥಾನದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಯವರ ಪೌರೋಹಿತ್ಯದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆವಿ ರಾಘವೇಂದ್ರ ಉಪಾಧ್ಯಾಯ ಮತ್ತು ಕೆವಿ ವಿಷ್ಣುಮೂರ್ತಿ ಉಪಾಧ್ಯಾಯರವರ […]



