ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ (Govt cannot turn a blind eye if there is a problem for the public : CM Siddaramaiah)
ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ (Vijayapura) ವಿಜಯಪುರ, ಡಿಸೆಂಬರ್ 13: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು. […]