ಪಡುಬಿದ್ರಿ ಕಾಡಿಪಟ್ಣ ಪ್ರದೇಶದಲ್ಲಿ ಕಡಲ್ಕೊರೆತ: ತೆಂಗಿನ ಮರಗಳು ಸಮುದ್ರ ಪಾಲು
ಭಾರೀ ಮಳೆ, ಗಾಳಿಗೆ ಕಡಲ ತಡಿಯ ಉಸುಕಿನಲ್ಲಿ ಉಂಟಾಗಿರುವ ಭಾರೀ ಗುಳಿಯ ಪರಿಣಾಮವಾಗಿ ಸೋಮವಾರ ಪಡುಬಿದ್ರಿ ಬೀಚ್ ಪಕ್ಕದ ಕಾಡಿಪಟ್ಣ ಶಂಕರ ಎಮ್.ಅಮೀನ್ ಮನೆ ಬಳಿ ಸುಮಾರು ೫೦ ಮೀ. ಭಾಗದಲ್ಲಿ ಕಡಲ್ಕೊರೆತವುಂಟಾಗಿದೆ. ಕಡಲಿನ ಅಬ್ಬರದ ತೆರೆಗಳಿಗೆ ಈಗಾಗಲೇ ಸುಮಾರು ೪ ತೆಂಗಿನ ಮರಗಳು, ಪಡುಬಿದ್ರಿ ಬೀಚ್ ಅಭಿವೃದ್ಧಿ ಕಾಮಗಾರಿಯ ಭಾಗವಾಗಿರುವ ಒಂದು ವಿದ್ಯುತ್ ಕಂಬವು ನೆಲಕಚ್ಚಿದೆ. ಇಲ್ಲಿನ ಅಭಿವೃದ್ಧಿ ಕಾಮಗಾರಿಯ ವೇಳೆ ಹಾಸಲಾಗಿದ್ದ ಹಾಲೋ ಬ್ಲಾಕ್ಸ್ ಅಂಗಳದ ಭಾಗ, ಹಲವು ತೆಂಗಿನ ಮರಗಳು ಹಾಗೂ ಕಾಡಿಪಟ್ಣ […]



