ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಸಂಪನ್ನ(Brahmakalashabhishekam at Karandadi Sri Vishnumurthy Brahmalingeshwara Temple)
ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಸಂಪನ್ನ (Kaup) ಕಾಪು: 4.5 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ಕಾಪು ಬಳಿಯ ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೇವರಿಗೆ ಸಹಸ್ರ ಪರಿ ಕಲಶ ಸಹಿತ ಬ್ರಹ್ಮಕಲಶಾಭಿಷೇಕ ಗುರುವಾರ ನೆರವೇರಿಸಲಾಯಿತು. ದೇವಳದ ಪ್ರಧಾನ ತಂತ್ರಿಗಳಾದ ಕಳತ್ತೂರು ಉದಯ ತಂತ್ರಿಗಳ ನೇತೃತ್ವದಲ್ಲಿ, ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯ ಮಂಜಿತ್ತಾಯರವರ ಸಹಭಾಗಿತ್ವದಲ್ಲಿ ಬ್ರಹ್ಮಕಲಶ ಮಹೋತ್ಸವ ಧಾರ್ಮಿಕ ವಿಧಿಗಳು ಸಂಪನ್ನಗೊಂಡವು. ಉತ್ಸವ ಬಲಿ, ಶ್ರೀ ಬ್ರಹಲಿಂಗೇಶ್ವರ, ನಾಗದೇವರಿಗೆ ಪೂಜೆ, ಪಲ್ಲಪೂಜೆ ನಡೆಯಿತು. […]