ಎಲ್ಲೂರಿನಲ್ಲಿ ಗೋಶಾಲೆ, ಗೋ ರುದ್ರಭೂಮಿ ನಿರ್ಮಾಣಕ್ಕೆ ಅದಮಾರು ಮಠಾಧೀಶ ರಿಂದ ಚಾಲನೆ
ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನಿನಲ್ಲಿ ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣದ ಉದ್ದೇಶಕ್ಕೆ ಕಾಯ್ದಿರಿಸಲಾಗಿದ್ದು, ಶುಕ್ರವಾರ ಬೆಳಿಗ್ಗೆಅದಮಾರು ಮಠದ ಶ್ರೀ ಈಶಪ್ರಿಯ ಶ್ರೀಪಾದರು ಚಾಲನೆ ನೀಡಿದರು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗೋ ಪೂಜೆ ನೆರವೇರಿಸಿದರು. ಈ ಸಂದರ್ಭ ಅವರು ಮಾತನಾಡಿ, ಇದು ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು ಚುನಾವಣೆಯ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದ ಯೋಜನೆ ಇಂದು ನನಸಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಲಾಲಾಜಿ ಆರ್ ಮೆಂಡನ್, […]

