Tag: Karavali

ಜೀವನಶೈಲಿ

ಭರತನಾಟ್ಯ ಎಂಎ ಪರೀಕ್ಷೆಯಲ್ಲಿ ವಿದುಷಿ ವಿದ್ಯಾ ಮನೋಜ್ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ

ಭರತನಾಟ್ಯ ಎಂಎ ಪರೀಕ್ಷೆಯಲ್ಲಿ ವಿದುಷಿ ವಿದ್ಯಾ ಮನೋಜ್ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ ದ.ಕ\ಬಂಟ್ವಾಳ:  ಅಣ್ಣಾಮಲೈ ವಿಶ್ವವಿದ್ಯಾಲಯ ಚಿದಂಬರಂ ತಮಿಳುನಾಡು, ನಡೆಸಿದ ಭರತನಾಟ್ಯ ಸ್ನಾತಕೋತರ ಪದವಿ ಪರೀಕ್ಷೆಯಲ್ಲಿ ಕಲ್ಲಡ್ಕದ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ ನ ನೃತ್ಯ ಗುರುಗಳಾದ  ವಿದುಷಿ ಶ್ರೀಮತಿ ವಿದ್ಯಾ ಮಾನೋಜ್ ಅವರು ಶೇ 80% ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.ಕಳೆದ ಎರಡು ವರ್ಷಗಳಿಂದ ಅಣ್ಣಾಮಲೈ ವಿಶ್ವವಿದ್ಯಾಲಯದ ದೂರ ಶಿಕ್ಷಣ ವಿಭಾಗದ ಮೂಲಕ ಮಾಸ್ಟರ್ ಆಫ್ ಸೈನ್ ಆರ್ಟ್ಸ್ (ಭರತನಾಟ್ಯ) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಇವರು […]

ಕರಾವಳಿ ವಿಡಿಯೋ

ಶನಿವಾರ (ಸೆ.೩೦) ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ಪ್ರಧಾನ ಕಚೇರಿ ನೂತನ ಕಟ್ಟಡ ಉದ್ಘಾಟನೆ.

ಶನಿವಾರ (ಸೆ.೩೦) ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ಪ್ರಧಾನ ಕಚೇರಿ ನೂತನ ಕಟ್ಟಡ ಉದ್ಘಾಟನೆ. ಉಡುಪಿ\ಶಿರ್ವ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ನೂತನ ಹವಾನಿಯಂತ್ರಿತ ಪ್ರಧಾನ ಕಛೇರಿ ಹಾಗೂ ಗೋಧಾಮು ಕಟ್ಟಡ, ಪಡಿತರ ಮತ್ತು ರಸಗೊಬ್ಬರ ವಿತರಣೆ ಕೇಂದ್ರದ ಉದ್ಘಾಟನೆ ಸೆಪ್ಟೆಂಬರ್ ಶನಿವಾರ ಬೆಳಿಗ್ಗೆ 9:30ಕ್ಕೆ ಜರಗಲಿದೆ.  ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಪ್ರಧಾನ ಕಛೇರಿ ಉದ್ಘಾಟಿಸಲಿದ್ದು, ಶಿರ್ವ […]

ಶಾಲಾ ಕಾಲೇಜು

ಕರ್ನಾಟಕ ಬಂದ್‌ – ಶಾಲಾ, ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಡಿಸಿಗಳಿಗೆ ಕೊಟ್ಟ ಶಿಕ್ಷಣ ಇಲಾಖೆ

ಕರ್ನಾಟಕ ಬಂದ್‌ – ಶಾಲಾ, ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಡಿಸಿಗಳಿಗೆ ಕೊಟ್ಟ ಶಿಕ್ಷಣ ಇಲಾಖೆ ಬೆಂಗಳೂರು, ಸೆ 28 : ಸೆಪ್ಟಂಬರ್ 29ರಂದು ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದೆ. ಈ ಕುರಿತು ಸೂಚನೆ ನೀಡಿರುವ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದಿದೆ. ಇನ್ನು ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳುವಂತೆ ಖಾಸಗಿ ಶಾಲೆ ಸಂಘಟನೆಗಳು ಮನವಿ ಮಾಡಿವೆ. ಖಾಸಗಿ ಶಾಲೆಗಳ […]

ಅಪರಾಧ

ಕೋಟ- ಲಾರಿ ಮಾಲಕ, ಚಾಲಕ ಸಂಘದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ

ಕೋಟ- ಲಾರಿ ಮಾಲಕ, ಚಾಲಕ ಸಂಘದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಉಡುಪಿ\ ಕೋಟ: ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್. ಕೆ ಯವರು ಲಾರಿ ಮಾಲಕರು ಕಾನೂನು ಬದ್ಧವಾಗಿ ಮಣ್ಣು ಇನ್ನಿತರ ಕಟ್ಟಡ ಸಲಕರಣೆ ಸಾಗಿಸಬೇಕು ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಿದೆ ಎಂಬ ಆದೇಶದ ಹಿನ್ನಲೆಯಲ್ಲಿ ಕಳೆದೊಂದು ವಾರದಿಂದ ಲಾರಿ ಮಾಲಕರು ತಮ್ಮ ವಾಹನಗಳನ್ನು ರಸ್ತೆಗೆ ಇಳಿಸದೆ ಪ್ರತಿಭಟನೆ ಕಡೆ ಮುಖ ಮಾಡುವಂತಾಗಿದೆ. ಮಂಗಳವಾರ ಕೋಟ ವಲಯದ ವತಿಯಿಂದ ಕೋಟ ಮೂರ್‌ಕೈ ಬಳಿ ಸಭೆ ಸೇರಿ […]

ಫ್ಯಾಷನ್

ಪೆರಂಪಳ್ಳಿಯ ಶರೀನಾ ರವರಿಗೆ ‘ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್’ ಟೈಟಲ್ ಪ್ರಶಸ್ತಿ

ಪೆರಂಪಳ್ಳಿಯ ಶರೀನಾ ರವರಿಗೆ ‘ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್‘ ಟೈಟಲ್ ಪ್ರಶಸ್ತಿ  ಉಡುಪಿ : ಪ್ರತಿಷ್ಠಿತ ಎಂಬಿ ಗ್ರೂಪ್ ಇವರು ಬೆಂಗಳೂರಿನ ಹೋಟೆಲ್ ಫೊಕ್ಸ್ ಗ್ಲೋವ್ ಇಂಟರ್ನ್ಯಾಷನಲ್ ವೈಟ್ ಫೀಲ್ಡ್ ಇಲ್ಲಿ ಸೆ.24 ರಂದು ಆಯೋಜಿಸಿದ್ದ  ‘ಮಿಸ್ಟರ್ & ಮಿಸ್ ಟೀನ್ ಕರ್ನಾಟಕ’ ಇದರ ಸೀಸನ್ 4 ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಪೆರಂಪಳ್ಳಿಯ ಶರೀನಾ ಮತಾಯಸ್ ರವರಿಗೆ ‘ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್’ ಟೈಟಲ್ ಪ್ರಶಸ್ತಿ ದೊರಕಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 14 ಸ್ಪರ್ಧಿಗಳಲ್ಲಿ, ಪೆರಂಪಳ್ಳಿಯ […]

ಅಪರಾಧ

ಬಂಟ್ವಾಳ ಕಳವು ಪ್ರಕರಣ : 9 ವರ್ಷದಿಂದ ತಲೆಮರೆಸಿದ್ದ ಆರೋಪಿಯ ಬಂಧನ 

ಬಂಟ್ವಾಳ ಕಳವು ಪ್ರಕರಣ : 9 ವರ್ಷದಿಂದ ತಲೆಮರೆಸಿದ್ದ ಆರೋಪಿಯ ಬಂಧನ  ಬಂಟ್ವಾಳ: ಕಳವು ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ  ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಸುರತ್ಕಲ್ ಕೃಷ್ಣಾಪುರ ಚೊಕ್ಕಬೆಟ್ಟು ನಿವಾಸಿ ಮಹಮ್ಮದ್ ಎಂಬವರ ಪುತ್ರ ಮಹಮ್ಮದ್ ಶಾಫಿ ಬಂಧಿತ ಆರೋಪಿಯಾಗಿದ್ದಾನೆ. 2017 ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಜಿಲ್ಲೆಯ ವಿವಿಧ ಠಾಣೆಯಲ್ಲಿ ಈತನ ಮೇಲೆ ಕಳವು ಪ್ರಕರಣಗಳಿದ್ದು, ಅ […]

ಅಪರಾಧ

ಟಿಕೇಟ್‌ ಹಗರಣದ ರುವಾರಿ ಚೈತ್ರಾ ಮತ್ತು ತಂಡಕ್ಕೆ ಜೈಲಾಧಿಕಾರಿಯಿಂದ ವಿಚಾರಣಾಧೀನ ಕೈದಿ ನಂಬರ್   

ಟಿಕೇಟ್‌ ಹಗರಣದ ರುವಾರಿ ಚೈತ್ರಾ ಮತ್ತು ತಂಡಕ್ಕೆ ಜೈಲಾಧಿಕಾರಿಯಿಂದ ವಿಚಾರಣಾಧೀನ ಕೈದಿ ನಂಬರ್    ಬೆಂಗಳೂರು :  ಬೈಂದೂರಿನ  ಉದ್ಯಮಿಯೋರ್ವರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹು ಕೋಟಿ  ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ  ಮತ್ತು ತಂಡ ಇದೀಗ ಪರಪ್ಪನ ಅಗ್ರಹಾರದಲ್ಲಿದ್ದು, ಆರೋಪಿಗಳಿಗೆ  ಜೈಲಾಧಿಕಾರಿಗಳು ಕೈದಿ ನಂಬರ್ ನೀಡಿದ್ದಾರೆ.  ಪ್ರಕರಣದ ಎ1 ಆರೋಪಿ ಚೈತ್ರಾಗೆ ನಂಬರ್ 9737 ಆದರೆ ಇನ್ನುಳಿದ ಆರೋಪಿಗಳಾದ ಮೋಹನ್ ಕುಮಾರ್ ಕೈದಿ ನಂಬರ್  9738, ರಮೇಶ್-9739 ಚೆನ್ನಾ ನಾಯ್ಕ-9740, ಧನರಾಜ್-9741 ಎಂಬ ವಿಚಾರಣಾಧೀನ ಕೈದಿ ನಂಬರನ್ನು […]

ಕರಾವಳಿ ರಾಜಕೀಯ

ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ಸಮಾಜದಲ್ಲಿ ಶಕ್ತಿ ಸಂಸ್ಕಾರವನ್ನು ಕೊಡುವ ಮೂಲಕ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸುತ್ತಿದ್ದಾರೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ಸಮಾಜದಲ್ಲಿ ಶಕ್ತಿ ಸಂಸ್ಕಾರವನ್ನು ಕೊಡುವ ಮೂಲಕ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸುತ್ತಿದ್ದಾರೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ\ ಕಾಪು : ಪರಮಪೂಜ್ಯ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ಸಮಾಜದಲ್ಲಿ ಶಕ್ತಿ ಸಂಸ್ಕಾರವನ್ನು ಕೊಡುವ ಮೂಲಕ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ಆ ಕಾರಣದಿಂದಾಗಿ ನಮ್ಮ ಮಠ ಮಂದಿರಗಳು, ನಮ್ಮ ಧರ್ಮ, ನಮ್ಮ ಸಂಸ್ಕೃತಿ, ನಮ್ಮ ಗುರುಗಳು, ನಮ್ಮ ಸಂಸ್ಕಾರದ ಕಾರಣದಿಂದ ಉನ್ನತಿಯನ್ನು ಸಾಸುತ್ತಿರುವ ನಮ್ಮ ದೇಶಕ್ಕೆ ಪ್ರಾಪಂಚಿಕವಾಗಿ ಗೌರವ ಸಲ್ಲುತ್ತಿದೆ. ಹಾಗಾಗಿ […]

ಅಪರಾಧ

ಚೈತ್ರಾ ವಂಚನೆ ಪ್ರಕರಣ: ಕುಂದಾಪುರ ಹೆಸರು ಬಳಸದಂತೆ ಗಣೇಶ್‌ ಎಂಬವರಿಂದ ಕೋರ್ಟ್‌ಗೆ​​ ಮೊರೆ

ಚೈತ್ರಾ ವಂಚನೆ ಪ್ರಕರಣ: ಕುಂದಾಪುರ ಹೆಸರು ಬಳಸದಂತೆ ಗಣೇಶ್‌ ಎಂಬವರಿಂದ ಕೋರ್ಟ್‌ಗೆ​​ ಮೊರೆ ಬೆಂಗಳೂರು  : ವಿಧಾನಸಭಾ ಚುನಾವಣೆಗೆ ಟಿಕೆಟ್​ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಹೆಸರನ್ನು ಬಳಸದಂತೆ ವ್ಯಕ್ತಿಯೊಬ್ಬರು ಕೋರ್ಟ್​ ಮೊರೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣ ಹಾಗೂ ಮಾದ್ಯಮಗಳಲ್ಲಿ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನಗರದ ಸಿಟಿ ಸಿವಿಲ್​ ಕೋರ್ಟ್​ಗೆ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರದ ನಿವಾಸಿ […]

ಪ್ರಚಲಿತ

ಬೆಂಗಳೂರು ಗಾಂಧಿ ಭವನದಲ್ಲಿ “ಮಹಿಳಾ ಮೀಸಲಾತಿ” ವಿಚಾರ ಸಂಕಿರಣ

ಬೆಂಗಳೂರು ಗಾಂಧಿ ಭವನದಲ್ಲಿ “ಮಹಿಳಾ ಮೀಸಲಾತಿ” ವಿಚಾರ ಸಂಕಿರಣ  ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಾ. ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ “ಮಹಿಳಾ ಮೀಸಲಾತಿ” ವಿಚಾರ ಸಂಕಿರಣವನ್ನು ಉದ್ಘಾಟಿಸಿದರು.  ಶಿಕ್ಷಣ ತಜ್ಞ, ರಾಜಕೀಯ ವಿಶ್ಲೇಷಕರಾದ ಪ್ರೊ.ಮುಜಫರ್ ಅಸಾದಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ಪ್ರೊ. ರವಿವರ್ಮ ಕುಮಾರ್ ವಿಷಯ ಮಂಡಿಸಿದರು. ಶಾಸಕಿ ನಯನ ಮೋಟಮ್ಮ, […]

eMedia Kannada  @2025. All Rights Reserved.