Tag: Karavali

ಕರಾವಳಿ

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಚುನಾವಣೆ:  ಅಧ್ಯಕ್ಷ ರಾಗಿ ಮೊಹಮ್ಮದ್ ಶರೀಫ್, ಪ್ರ. ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ  ಆಯ್ಕೆ

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಚುನಾವಣೆ:  ಅಧ್ಯಕ್ಷ ರಾಗಿ ಮೊಹಮ್ಮದ್ ಶರೀಫ್ , ಪ್ರ. ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ  ಆಯ್ಕೆ  ಕಾರ್ಕಳ:  ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಅಧ್ಯಕ್ಷರಾಗಿ   ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ  ಬೈಲೂರು ಹರೀಶ್ ಅಚಾರ್ಯ ಆಯ್ಕೆಯಾಗಿದ್ದಾರೆ.  ಕೋಶಾಧಿಕಾರಿ ಸ್ಥಾನಕ್ಕೆ  ಕೆ.ಎಂ ಖಲೀಲ್  ಆಯ್ಕೆ ನಡೆಯಿತು.   ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ  ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ  […]

ಅಪರಾಧ

ಮರವಂತೆ: ಸೆಲ್ಫೀ ತೆಗೆದುಕೊಳ್ಳುತ್ತಿದ್ದ ವೇಳೆ ಕಾಲು ಜಾರಿ ಯುವಕ ಸಮುದ್ರ ಪಾಲು

ಮರವಂತೆ: ಸೆಲ್ಫೀ ತೆಗೆದುಕೊಳ್ಳುತ್ತಿದ್ದ ವೇಳೆ ಕಾಲು ಜಾರಿ ಯುವಕ ಸಮುದ್ರ ಪಾಲು ಕುಂದಾಪುರ: ಮೊಬೈಲ್ ನಲ್ಲಿ ಸೆಲ್ಫೀ ತೆಗೆದುಕೊಳ್ಳುತ್ತಿದ್ದ ವೇಳೆ ಯುವಕನೋರ್ವ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾದ ಘಟನೆ ಮರವಂತೆ ಬೀಚ್ ನಲ್ಲಿ ಮಂಗಳವಾರ ಸಂಭವಿಸಿದೆ. ನಾಪತ್ತೆಯಾದ ಯುವಕನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕು ನಿವಾಸಿ ಫೀರ್ ಸಾಬ್ ನದಾಫ್ (21) ಎಂದು ಗುರುತಿಸಲಾಗಿದೆ. ಫೀರ್ ಸಾಬ್ ಸುಮಾರು 2 ತಿಂಗಳ ಹಿಂದೆ ಗಾರೆ ಕೆಲಸಕ್ಕಾಗಿ ಕಾಪುವಿಗೆ ಆಗಮಿಸಿದ್ದು, ಮಂಗಳವಾರ ತನ್ನ […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಬಹುಮಾನ

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಬಹುಮಾನ  ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ದಿನಾಂಕ ೧೨ ಜುಲೈ ೨೦೨೩ ರಂದು ಮಂಗಳೂರಿನ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ದ್ವಿತೀಯ ಬಹುಮಾನ ಗಳಿಸಿರುತ್ತಾರೆ.  ಅಲ್ಲದೆ ದಿನಾಂಕ ೧೫ ಮತ್ತು ೧೬ ಜುಲೈ ೨೦೨೩ರಂದು ತಿಪಟೂರಿನ ಕಲ್ಪತರು ತಾಂತ್ರಿಕ ವಿದ್ಯಾಲಯದಲ್ಲಿ ನಡೆದ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತರ ಕಾಲೇಜು […]

ಅಪರಾಧ

ಯಕ್ಷಗಾನ ಕಲಾವಿದ ಗಣಪತಿ ಬೈಲಗದ್ದೆ ನಿಧನ

 ಉಡುಪಿ : ಹೊನ್ನಾವರ ತಾಲೂಕಿನ ಬೈಲುಗದ್ದೆಯ ನಿವಾಸಿ ಬಡಗುತಿಟ್ಟಿನ ಯಕ್ಷಗಾನ ಕಲಾವಿದ ಗಣಪತಿ ಬೈಲಗದ್ದೆ (39 ವರ್ಷ) ನಿನ್ನೆ (16-07-2023) ನಿಧನ ಹೊಂದಿದರು.  ಗುಣವಂತೆಯ ಶ್ರೀಮಯ ಯಕ್ಷಗಾನ ಕಲಾಕೇಂದ್ರದಲ್ಲಿ ಕೆರೆಮನೆ ಶಂಭು ಹೆಗಡೆ ಹಾಗೂ ಹೆರಂಜಾಲು ಗೋಪಾಲ ಗಾಣಿಗರ ಶಿಷ್ಯರಾಗಿದ್ದ ಇವರು ಗುಂಡುಬಾಳ, ಮಡಾಮಕ್ಕಿ, ಪೆರ್ಡೂರು, ಸಾಲಿಗ್ರಾಮ‌ ಹಾಗೂ ಸಿಗಂದೂರು ಮೇಳಗಳಲ್ಲಿ ಎರಡು ದಶಕಗಳ ಕಾಲ ವಿವಿಧ ಪೋಷಕ ಪಾತ್ರಗಳ ನಿರ್ವಹಣೆಯಿಂದ ಕಲಾರಸಿಕರ ಮನಗೆದ್ದಿದ್ದರು.  ಅನಾರೋಗ್ಯದ ಕಾರಣದಿಂದ ಕಳೆದ ವರ್ಷ ಮೇಳದ ತಿರುಗಾಟ ಮಾಡಿರಲಿಲ್ಲ. ಅವಿವಾಹಿತರಾಗಿದ್ದ ಇವರು […]

ಅಪರಾಧ

ಮಂಗಳೂರು; 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು;9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನ ಕಣ್ಣೂರು ಅಡ್ಯಾರ್‌ ನಿವಾಸಿ ಹಸೈನಾರ್‌ ಆಲಿಯಾಸ್‌ ಹಸೈನ್‌(35) ಬಂಧಿತ ಆರೋಪಿ. ಈತ 2012ರಲ್ಲಿ ಯುವತಿಯೋರ್ವಳು ಲೇಡಿಹಿಲ್‌ ಸಮೀಪ ಫ್ಲ್ಯಾಟ್‌ ಕಡೆಗೆ ಹೋಗುತ್ತಿದ್ದಾಗ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಉರ್ವ ಠಾಣೆಗೆ ಯುವತಿ ದೂರು ನೀಡಿದ್ದಳು. ಈ ವೇಳೆ ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಈತನಿಗೆ 2014ರ ಅ.18ರಂದು 4 ತಿಂಗಳ ಕಾರಾಗೃಹ ಶಿಕ್ಷೆ […]

Uncategorised ಕರಾವಳಿ ಪ್ರಚಲಿತ ಶಾಲಾ ಕಾಲೇಜು

ಅಧ್ಯಾತ್ಮದ ಕಡೆಗೆ ಮನಸ್ಸು ಕೇಂದ್ರೀಕರಿಸಿ: ಸ್ವಾಮಿನಿ ಮಂಗಳಾಮೃತ ಪ್ರಾಣ

ಉಚ್ಚಿಲ ದಲ್ಲಿ ಗುರು ಪೂರ್ಣಿಮ ಆಚರಣೆ ಉಚ್ಚಿಲ: ನಮ್ಮೊಳಗಿನ ನಮ್ಮನ್ನು ಅರಿತುಕೊಳ್ಳಲು, ಲೌಕಿಕ ಸಮಸ್ಯೆಗಳನ್ನು ನಿವಾರಿಸಲು ಆಧ್ಯಾತ್ಮವು ಸಕಾರಾತ್ಮಕ ದಾರಿಯಾಗಿದ್ದು, ನಾವೆಲ್ಲರೂ ಆಧ್ಯಾತ್ಮದ ಕಡೆಗೆ ಮನಸ್ಸನ್ನು ಕೇಂದ್ರೀಕರಿಸಬೇಕು ಎಂದು ಮಂಗಳೂರಿನ ಮಾತಾ ಅಮೃತಾನಂದಮಯಿ ಮಠಾಧಿಪತಿ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಹೇಳಿದರು.ದ.ಕ, ಉಡುಪಿ ಮತ್ತು ಉ.ಕ ವ್ಯಾಪ್ತಿಯ ಮಾತಾ ಅಮೃತಾನಂದಮಯಿ ಸೇವಾ ಸಮಿತಿ ವತಿಯಿಂದ ಉಚ್ಚಿಲ ಮಹಾಲಕ್ಷ್ಮೀ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗುರು ಪೂರ್ಣಿಮಾ ಆಚರಣೆಯ ನೇತೃತ್ವ ವಹಿಸಿ ಅವರು ಆಶೀರ್ವಚನ ನೀಡಿದರು. ಸಾವಿರಾರು ಭಕ್ತರು ಭಾಗಿ:ಗ್ರಹಚಾರಾಧಿ ಸಂಕಷ್ಟ […]

ಶಾಲಾ ಕಾಲೇಜು

ಗಂಗೂಬಾಯಿ ಹಾನಗಲ್‌ ವಿವಿ, ರಾಜ್ಯವ್ಯಾಪ್ತಿ ಕೋರ್ಸ್ ಆರಂಭ : ನಾಗೇಶ್ ಬೆಟ್ಟಕೋಟೆ

ಗಂಗೂಬಾಯಿ ಹಾನಗಲ್‌ ವಿವಿ, ರಾಜ್ಯವ್ಯಾಪ್ತಿ ಕೋರ್ಸ್ ಆರಂಭ : ನಾಗೇಶ್ ಬೆಟ್ಟಕೋಟೆ ಮಂಗಳೂರು: ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಐತಿಹಾಸಿಕ ಚಟುವಟಿಕೆಗಳಿಗೆ ನಾಂದಿ ಹಾಡಿದೆ. ಕೇಂದ್ರ ಸ್ಥಾನ ಮೈಸೂರಿನಲ್ಲಿ ನಡೆಸುತ್ತಿದ್ದ ಕೋರ್ಸ್‍ಗಳನ್ನು ರಾಜ್ಯವ್ಯಾಪಿ ನಡೆಸುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ ಎಂದು  ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿವಿ ಉಪಕುಲಪತಿ ನಾಗೇಶ್ ವಿ. ಬೆಟ್ಟಕೋಟೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.  ವಿಶ್ವವಿದ್ಯಾಲಯದೊಡನೆ ರಾಜ್ಯದ ಯಾವುದೇ ನೋಂದಾಯಿತ ಶಿಕ್ಷಣ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಂಡು […]

ಕರಾವಳಿ

 ಸಾಲಿಗ್ರಾಮ- ಚರ್ಮ ರೋಗ ತಪಾಸಣೆ ಶಿಬಿರ

ಸಾಲಿಗ್ರಾಮ- ಚರ್ಮ ರೋಗ ತಪಾಸಣೆ ಶಿಬಿರ ಕೋಟ: ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ವಠಾರದಲ್ಲಿ ಜು. ೯ರಂದು  ಚರ್ಮ ರೋಗ ತಪಾಸಣೆ ಶಿಬಿರವನ್ನು  ಪ್ರಸಿದ್ದ ತಜ್ಞರಾದ ಡಾ. ಕೆ. ಎಸ್. ಉಪಾಧ್ಯ ಯಶಸ್ವಿಯಾಗಿ ನಡೆಸಿಕೊಟ್ಟರಲ್ಲದೆ  ಲಭ್ಯವಿರುವ ಔಷಧಗಳನ್ನು ಉಚಿತವಾಗಿ ವಿತರಿಸಿದರು. ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ ಕೆ. ಎಸ್ ಕಾರಂತರು ಶಿಬಿರವನ್ನು ದೀಪ ಬೆಳಗಿಸಿ ಚಾಲನೆ ನೀಡಿದರು.  ೭೦ಕ್ಕೂ ಮಿಕ್ಕಿ ಸ್ಥಳೀಯ ಫಲಾನುಭವಿಗಳು ಈ ಶಿಬಿರದ ಪ್ರಯೋಜನವನ್ನು ಪಡೆದರು. ಈ ಸಂದರ್ಭದಲ್ಲಿ […]

ಶಾಲಾ ಕಾಲೇಜು

ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿ ಜ್ಯೋತಿ ಟೀಚರ್‌ಗೆ ಸನ್ಮಾನ

ಕೋಟ : ಇತ್ತಿಚಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿ ಇಲ್ಲಿಂದ  ಹಂಗಾರಕಟ್ಟೆ ಶಾಲೆಗೆ ವರ್ಗಾವಣೆಗೊಂಡ ಮಖ್ಯ ಶಿಕ್ಷಕಿ ಜ್ಯೋತಿ ಟೀಚರ್ ಇವರನ್ನು ಚಿತ್ರಪಾಡಿ  ಶಾಲಾ ಅಭಿವೃದ್ಧಿ ಮತ್ತು  ಮೇಲುಸ್ತುವಾರಿ ಸಮಿತಿ ವತಿಯಿಂದ ಆತ್ಮೀಯವಾಗಿ ಬಿಳ್ಕೋಡುಗೆ ನೀಡಿ ಸನ್ಮಾನಿಸಲಾಯಿತು.  ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಶಂಕರ್ ದೇವಾಡಿಗ, ಅಕ್ಷರ ರಥ ಸಮಿತಿ ಅಧ್ಯಕ್ಷ ನಾಗರಾಜ್ ಗಾಣಿಗ , ಶಾಲಾ ಶಿಕ್ಷಕ ವೃಂದ, ಪಾಂಚಜನ್ಯ ಸಂಘ ಪಾರಂಪಳ್ಳಿ ಅಧ್ಯಕ್ಷ ಕೃಷ್ಣಮೂರ್ತಿ ಮರಕಾಲ ಮತ್ತಿತರರು ಉಪಸ್ಥಿತರಿದ್ದರು.

ಆಹಾರ

ಸಾಲಿಗ್ರಾಮ- ವಿಪ್ರ ಮಹಿಳಾ ಬಳಗದಿಂದ ಆಷಾಡ ತಿನಿಸುಗಳ ಸ್ಪರ್ಧಾ ಕಾರ್ಯಕ್ರಮ.

ಗಮನ ಸೆಳೆದ ವಿವಿಧ ತಿನಿಸುಗಳು ಕೋಟ: ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರ ಆಶ್ರಯದಲ್ಲಿ ಆಷಾಡ ಮಾಸದ ಅಂಗವಾಗಿ ಗ್ರಾಮೀಣ ತಿನಿಸುಗಳ ಸ್ಫರ್ಧಾ ಕಾರ್ಯಕ್ರಮ ಶುಕ್ರವಾರ ಚಿತ್ರಪಾಡಿ ವನೀತಾ ಉಪಾಧ್ಯಾಯರ ಮನೆಯಂಗಳದಲ್ಲಿ ನಡೆಯಿತು. ಸಾಮಾನ್ಯವಾಗಿ ಪ್ರಸ್ತುತ ಕಾಲಘಟ್ಟದಲ್ಲಿಆಧುನಿಕತೆ ನವ ನವೀನವಾದ  ತಿಂಡಿ ತಿನಿಸುಗಳ ಸ್ಪರ್ಧಾ ಜಗತ್ತಿನಲ್ಲಿ ಮರೆಯಾಗುತ್ತಿರುವ ಗ್ರಾಮೀಣ ತಿಂಡಿ ತಿನಿಸುಗಳನ್ನು ವಿಪ್ರ ಮಹಿಳೆಯರನ್ನು ಒಗ್ಗೂಡಿಸಿ ಅವರ ಮನೆಯಿಂದಲೇ ತಿಂಡಿ ತಯಾರಿಸಿ ಕಾರ್ಯಕ್ರಮದಲ್ಲಿ ಪ್ರದರ್ಶನಕ್ಕೆ ಇರಿಸಲಾಯಿತು. ಪ್ರದರ್ಶನವನ್ನು  ವಿಪ್ರ ಮಹಿಳಾ ಬಳಗದ ಪ್ರಮುಖರಾದ ವಾಗ್ದೇವಿ ಉಪಾಧ್ಯಾಯ ತಿನಿಸುಗಳನ್ನು […]

eMedia Kannada  @2025. All Rights Reserved.