Tag: Karavali

ಕರಾವಳಿ ಮಂಗಳೂರು

ಗಣೇಶ ಚತುರ್ಥಿ ಸಂದರ್ಭ ಕೊಂಕಣ ರೈಲ್ವೇಯಿಂದ ಹೆಚ್ಚಿನ ರೈಲು

ಮಂಗಳೂರು: ಗಣೇಶ ಚತುರ್ಥಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಮುಂಬೈ ಲೋಕಮಾನ್ಯ ತಿಲಕ್ ಮತ್ತು ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.  ರೈಲು ಸಂಖ್ಯೆ 01165 ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ವಿಶೇಷ ಸೇವೆಯು ಮುಂಬೈ ಲೋಕಮಾನ್ಯ ತಿಲಕ್‌ನಿಂದ ರಾತ್ರಿ 10.15 ಗಂಟೆಗೆ ಹೊರಡಲಿದೆ. ಮರುದಿನ ಸಂಜೆ 5.20 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. (8 ಸೇವೆಗಳು)  ಸೆ. 15, 16, 17, […]

ಅಪರಾಧ

ಬಂಟ್ವಾಳ; ತುಂಬೆ ಬಳಿ ಕಾರು ಅಪಘಾತ; ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಬಂಟ್ವಾಳ: ಚಾಲಕ‌ನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ತುಂಬೆಯಲ್ಲಿ ನಡೆದಿದೆ. ಮಂಗಳೂರು ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ, ಪುತ್ತೂರಿನ ಕೂರ್ನಡ್ಕ ನಿವಾಸಿ ಹನಾ (19) ಮೃತಪಟ್ಟ ವಿದ್ಯಾರ್ಥಿನಿ. ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂ ಶಮೀಮಾ ದಂಪತಿಯ ಪುತ್ರಿಯಾಗಿರುವ ಹನಾ ಅಲೋಶಿಯಸ್ ಕಾಲೇಜಿನ ಬಿಬಿಎಂ ವಿದ್ಯಾರ್ಥಿನಿ. ಹನಾ ಪುತ್ತೂರಿನಿಂದ ಮಂಗಳೂರು ಕಡೆಗೆ ಐ20 ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು, ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದೆ.

ಕರಾವಳಿ

*ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷಾಶ್ರಯ ಯೋಜನೆಯಡಿ ಆರ್ಥಿಕ ಕೊಡುಗೆ*

ಮಂಗಳೂರು: ಯಕ್ಷಗಾನ ಕಲಾವಿದರಿಗೆ ಯಕ್ಷಧ್ರುವ  ಪಟ್ಲ ಫೌಂಡೇಶನ್ ಟ್ರಸ್ಟಿನ ಯೋಜನೆಗಳಲ್ಲಿ ಒಂದಾದ ಯಕ್ಷಾಶ್ರಯದಡಿ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯವನ್ನು ಟ್ರಸ್ಟ್ ಕಚೇರಿಯಲ್ಲಿ ವಿತರಿಸಲಾಯಿತು. ಸುಂಕದಕಟ್ಟೆ ಮೇಳದ ಜಯೇಂದ್ರ  ಕಿದೂರ್, ಸಸಿಹಿತ್ಲು ಮೇಳದ ಗುಡ್ಡಪ್ಪ ಸುವರ್ಣ ಇವರುಗಳಿಗೆ 2ನೇ ಕಂತು ಮತ್ತು ಬಪ್ಪನಾಡು ಮೇಳದ ನಾಗಪ್ಪ ಪಡುಮಲೆ ಇವರಿಗೆ ಕೊನೆಯ ಕಂತಿನ ಮೊತ್ತದ ಚಕ್ಕನ್ನು ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು  ವಿತರಿಸಿದರು. ಈ ಸಂದರ್ಭದಲ್ಲಿ ಫೌಂಡೇಶನಿನ ಪ್ರಧಾನ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ […]

Uncategorised

ಕಾಪು ತಾಲೂಕಿನಾದ್ಯಂತ ನೆರೆ ಹಾವಳಿ: ಪಡುಬಿದ್ರಿ, ಕುಂಜೂರು ದೇಗುಲ ಸಹಿತ ತಗ್ಗು ಪ್ರದೇಶ ಜಲಾವೃತ,

 ಕಾಪು ತಾಲೂಕಿನಾದ್ಯಂತ ಸುರಿಯುತ್ತಿರುವ ಜಡಿ ಮಳೆಗೆ ಗುರುವಾರ ಬೆಳಗ್ಗಿನ ಜಾವ ಪಡುಬಿದ್ರಿ ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಪ್ರಾಂಗಣ ಮತ್ತು ಗರ್ಭಗುಡಿಯ ಸುತ್ತಲೂ ಮೊಣಕಾಲಿನ ತನಕ ಮಳೆನೀರು ನುಗ್ಗಿದೆ.   ಇಂದು ಸಂಕಷ್ಟಿ ಆಚರಿಸುವ ಶ್ರದ್ಧಾಳುಗಳು ದೇವರ ಪ್ರದಕ್ಷಿಣೆ ಬರಲು ಕಷ್ಟಪಡುವಂತಾಯಿತು. ಎರ್ಮಾಳು ತೆಂಕ ಎಲ್ಲದಡಿಯಿಂದ ಅದಮಾರು ಕಡೆಗೆ ಸಾಗುವ ಹಾದಿಯಲ್ಲಿ ನೆರೆ ನೀರು ತುಂಬಿದ್ದರಿಂದ ಸಂಚಾರ ವ್ಯತ್ಯಯ ಉಂಟಾಗಿದೆ. ತಡವಾಗಿ ಪ್ರರಂಭ ಆದಮಳೆಯಿಂದಾಗಿ ಸಹಜವಾಗಿಯೇ ಭತ್ತದ ಬೆಳೆಗೆ ತಡವಾಗಿ ಪ್ರಾರಂಭಗೊಂಡಿದೆ. ಧಾರಾಕಾರ […]

ಕರಾವಳಿ ಶಾಲಾ ಕಾಲೇಜು

ಉಡುಪಿ ಜಿಲ್ಲೆಯಲ್ಲಿ ಜುಲೈ 6 ರಂದು ಶಾಲೆಗಳಿಗೆ ರಜೆ : ರೆಡ್‌ ಅಲರ್ಟ್‌ ಘೋಷಣೆ

ಉಡುಪಿ :  ಕೃಷ್ಣನಗರಿ ಉಡುಪಿಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಜಿಲ್ಲೆಯಾದ್ಯಂತ ಗುರುವಾರವೂ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಅವರು ಆದೇಶ ಹೊರಡಿಸಿದ್ದಾರೆ.   ಉಡುಪಿ ಜಿಲ್ಲೆಯ ಬ್ರಹ್ಮಾವರ, ಉಡುಪಿ, ಕಾಪು, ಕಾರ್ಕಳ, ಕುಂದಾಪುರ, ಬೈಂದೂರು, ಹೆಬ್ರಿ ತಾಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಅಲ್ಲದೇ ಗುರುವಾರವೂ ಮಳೆ ಮುಂದುವರಿಕೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿನ […]

ಕರಾವಳಿ ಪ್ರಚಲಿತ

 ಉಳ್ಳಾಲದಲ್ಲ ಮಳೆಗೆ ಮೊದಲ ಬಲಿ; ಮೋರಿ ದಾಟುತ್ತಿದ್ದ ವ್ಯಕ್ತಿ ನೀರಿಗೆ ಬಿದ್ದು ಸಾವು

ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ ಉಳ್ಳಾಲ: ಮೋರಿ‌ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯ ತಪ್ಪಿ ಮೋರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ನಡೆದಿದೆ. ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ‌(52)ಮೃತರು. ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಕೆಲಸ ಮುಗಿಸಿ ಮನೆಗೆ ಬರುವಾಗ ಮೋರಿ ದಾಟುತ್ತಿದ್ದ ವೇಳೆ ಕಾಲು ಜಾರಿ ಮೋರಿಗೆ ಬಿದ್ದು ಧಾರಾಕಾರ ಸುರಿಯುತ್ತಿದ್ದ ಮಳೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. […]

Uncategorised

ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ – ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್

ವ್ಯಾಪಕ ಮಳೆ: ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ – ಜಿಲ್ಲಾಧಿಕಾರಿ ಕೂರ್ಮ ರಾವ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಮತ್ತು ಮುಂಜಾಗರೂಕತಾ ಕ್ರಮವಾಗಿ ಸ್ಥಳೀಯವಾಗಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯು ಮುಂದುವರಿಯುವ ಮುನ್ಸೂಚನೆ ಹವಮಾನ ಇಲಾಖೆಯಿಂದ ನೀಡಿರುವುದರಿಂದ ಸ್ಥಳೀಯ ಮಳೆಯ ಪ್ರಮಾಣ, ವಿಪತ್ತು […]

ಶಾಲಾ ಕಾಲೇಜು

ಕಸಾಪ ತಾಲೂಕು ಕಚೇರಿ ಉದ್ಘಾಟನೆ ಮತ್ತು  ‘ರಂಗಸ್ಥಳದ ರಾಜ ಅರುವ’ಕೃತಿ ಬಿಡುಗಡೆ

ಓದುವ ಆಸಕ್ತಿ ಬೆಳೆಸಲು ಕ್ರಮ: ಡಾ ಶ್ರೀನಾಥ್ ಮೂಡುಬಿದಿರೆ:  ಜನರಲ್ಲಿ ಓದುವ ಆಸಕ್ತಿ ಕುಂಠಿತಗೊಳ್ಳುತ್ತಿದ್ದು, ವಿದ್ಯಾರ್ಥಿಗಳಲ್ಲಿ  ಸಾಹಿತ್ಯದ ಆಸಕ್ತಿ ಬೆಳಸುವ ಜವಾಬ್ದಾರಿಯನ್ನು ‘ಕಸಾಪ’ಹೊತ್ತುಕೊಂಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ಸಹಯೋಗದಲ್ಲಿ ಇಲ್ಲಿನ ಕನ್ನಡ ಭವನದಲ್ಲಿ ಮಂಗಳವಾರ ನಡೆದ ‘ಕಚೇರಿ ಉದ್ಘಾಟನೆ’ ಮತ್ತು ಕೊರಗಪ್ಪ ಶೆಟ್ಟಿ ಅವರ ಅಭಿನಂದನಾ ಗ್ರಂಥ ‘ರಂಗಸ್ಥಳದ ರಾಜ ಅರುವʼ […]

ಅಪರಾಧ

ಬೆಳ್ತಂಗಡಿಯ ಸೌಜನ್ಯ ಕೊಲೆ ಪ್ರಕರಣ:  ಮೈಸೂರಿನ ಒಡನಾಡಿ ಸಂಸ್ಥೆ ಎಂಟ್ರಿ

ಮಂಗಳೂರು: ಸೌಜನ್ಯ ಹೋರಾಟಕ್ಕೆ ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ಎಂಟ್ರಿ ಕೊಟ್ಟಿದೆ. ಚಿತ್ರದುರ್ಗದ ಮುರುಘಾಶ್ರೀ ಪ್ರಕರಣ ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸಂಸ್ಥೆ ಇದೀಗ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಹೋರಾಟಕ್ಕೆ ಮುಂದಾಗಿದೆ. ಈ ಹಿಂದೆ ಮುರುಘಾ ಶ್ರೀ ಪ್ರಕರಣದಲ್ಲಿ ಒಡನಾಡಿ ಸಂಸ್ಥೆ ಹೋರಾಟಕ್ಕಿಳಿದಿತ್ತು. ಇದೀಗ ಸೌಜನ್ಯ ಪರವಾದ ನ್ಯಾಯದ ಹೋರಾಟಕ್ಕೆ ಒಡನಾಡಿ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ದಿವಂಗತ ಸೌಜನ್ಯ ಪರವಾಗಿ ಒಡನಾಡಿ ಸಂಸ್ಥೆ ರಾಜ್ಯಾದ್ಯಾಂತ ಹೋರಾಟ ನಡೆಸಲು ಮುಂದಾಗಿದೆ. ಸೋಮವಾರದಂದು ಸೌಜನ್ಯ […]

ಕರಾವಳಿ

ಪಡುಬಿದ್ರಿ ಕಾಡಿಪಟ್ಣ ಪ್ರದೇಶದಲ್ಲಿ ಕಡಲ್ಕೊರೆತ: ತೆಂಗಿನ ಮರಗಳು  ಸಮುದ್ರ ಪಾಲು

  ಭಾರೀ ಮಳೆ, ಗಾಳಿಗೆ ಕಡಲ ತಡಿಯ ಉಸುಕಿನಲ್ಲಿ ಉಂಟಾಗಿರುವ ಭಾರೀ ಗುಳಿಯ ಪರಿಣಾಮವಾಗಿ ಸೋಮವಾರ ಪಡುಬಿದ್ರಿ ಬೀಚ್ ಪಕ್ಕದ ಕಾಡಿಪಟ್ಣ ಶಂಕರ ಎಮ್.ಅಮೀನ್ ಮನೆ ಬಳಿ ಸುಮಾರು ೫೦ ಮೀ. ಭಾಗದಲ್ಲಿ ಕಡಲ್ಕೊರೆತವುಂಟಾಗಿದೆ.  ಕಡಲಿನ ಅಬ್ಬರದ ತೆರೆಗಳಿಗೆ ಈಗಾಗಲೇ ಸುಮಾರು ೪ ತೆಂಗಿನ ಮರಗಳು, ಪಡುಬಿದ್ರಿ ಬೀಚ್ ಅಭಿವೃದ್ಧಿ ಕಾಮಗಾರಿಯ ಭಾಗವಾಗಿರುವ ಒಂದು ವಿದ್ಯುತ್ ಕಂಬವು ನೆಲಕಚ್ಚಿದೆ. ಇಲ್ಲಿನ ಅಭಿವೃದ್ಧಿ ಕಾಮಗಾರಿಯ ವೇಳೆ ಹಾಸಲಾಗಿದ್ದ ಹಾಲೋ ಬ್ಲಾಕ್ಸ್ ಅಂಗಳದ ಭಾಗ, ಹಲವು ತೆಂಗಿನ ಮರಗಳು ಹಾಗೂ ಕಾಡಿಪಟ್ಣ […]

eMedia Kannada  @2025. All Rights Reserved.