Tag: Karavali

ಕರಾವಳಿ ಶಾಲಾ ಕಾಲೇಜು

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ವೇದಾಂಗ-೨೦೨೩’

ವೇದಾಂಗಗಳಿಲ್ಲದೇ ವೇದ ಅಪೂರ್ಣ: ಜಿತಕಾಮಾನಂದ ಸ್ವಾಮೀಜಿ ವಿದ್ಯಾಗಿರಿ (ಮೂಡುಬಿದಿರೆ): ‘ವೇದಾಂಗಗಳಿಲ್ಲದೆ ವೇದ ಅಪೂರ್ಣ’ ಎಂದು ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಜಿತಕಾಮಾನಂದ ಸ್ವಾಮೀಜಿ ಹೇಳಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಆಯುರ್ವೇದ ಸಂಹಿತಾ ಮತ್ತು ಸಿದ್ಧಾಂತ ವಿಭಾಗದ ವತಿಯಿಂದ ಶನಿವಾರ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ‘ವೇದಾಂಗ ೨೦೨೩’ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.  ಶಿಕ್ಷಾ, ಕಲ್ಪ, ನಿರುಕ್ತಾ, ವ್ಯಾಕರಣ, ಛಂದಸ್ಸು, ಜ್ಯೋತಿಷ್ಯ ಎಂಬ ಆರು ವೇದಾಂಗಗಳಿವೆ. ನಿರಂತರ ಅಭ್ಯಾಸದ ಮೂಲಕ ವೇದಗಳನ್ನು ಅರ್ಥೈಸಿಕೊಳ್ಳಲು ಸಾಧ್ಯ […]

ಕರಾವಳಿ

ವನಸುಮ ವೇದಿಕೆ ಯೋಧನಿಗೆ ಸನ್ಮಾನ

ಕಾಪು: ಜೂನ್ ೨೪, ವನಸುಮ ವೇದಿಕೆ ಕಟಪಾಡಿ ವತಿಯಿಂದ ಇತ್ತೀಚೆಗೆ ವಾರಂಟ್ ಆಫೀಸರ್ ಆಗಿ ಭಡ್ತಿ ಹೊಂದಿರುವ ರವೀಂದ್ರ ಸುವರ್ಣ ಬೆಳ್ಳೆ ಇವರಿಗೆ ಅವರ ಮನೆಯಲ್ಲೇ ಸಮ್ಮಾನ ಮಾಡಲಾಯಿತು.  ವೇದಿಕೆಯ ಅಧ್ಯಕ್ಷ ಬಾಸುಮ ಕೊಡಗು, ಖಜಾಂಜಿ ಕಾವ್ಯವಾಣಿ ಕೊಡಗು, ಸದಸ್ಯರಾದ ಭಾಸ್ಕರ್ ಉದ್ಯಾವರ, ರಾಕೇಶ್ ಆಚಾರ್ಯ, ಮಧುಸೂದನ್ ಹಾಗೂ ವಕೀಲರಾದ ಸಂತೋಷ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರವೀಂದ್ರ ಸುವರ್ಣ ಕುಟುಂಬಸ್ಥರು ಮತ್ತು ಗೆಳೆಯರು ಭಾಗಿಯಾಗಿದ್ದರು.

ಕರಾವಳಿ

ಉಚ್ಚಿಲ ಸರಸ್ವತಿ ಮಂದಿರ ಪ್ರಾಂಗಣದಲ್ಲಿ ಜಿಲ್ಲಾ ಗೃಹ ರಕ್ಷಕ ದಳದಿಂದ ವನ ಮಹೋತ್ಸವ ಆಚರಣೆ.

ಕಾಪು ಮತ್ತು ಪಡುಬಿದ್ರಿ ವಲಯ ಗೃಹ ರಕ್ಷಕ ದಳದ ವತಿಯಿಂದ ಶನಿವಾರ ಬೆಳಗ್ಗೆ ಶ್ರೀ ಸರಸ್ವತಿ ಮಂದಿರ ಶಾಲಾ ಆವರಣದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಗೃಹ ರಕ್ಷಕ ದಳವು ಸರಕಾರಿ ಇಲಾಖೆಗಳ ಆಪತ್ಬಾಂಧವರಾಗಿ ಕೆಲಸ ಮಾಡುವವರು. ಯಾವುದೇ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಆದರೂ ಅಲ್ಲಿಗೆ ಹೋಗಿ ಸೇವೆ ಮಾಡುತ್ತಾರೆ. ಪೊಲೀಸ್ ಇಲಾಖೆಯಲ್ಲಿ ಅವರ ಸೇವೆ […]

ತಂತ್ರಜ್ಞಾನ

ಹೆಜಮಾಡಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ: ಕಾಮಗಾರಿ ಪರಿಶೀಲನೆ

ಹೆಜಮಾಡಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ: ಕಾಮಗಾರಿ ಪರಿಶೀಲನೆ ಅನುದಾನ ಕೊರತೆಯಿಂದ ನಿಧಾನವಾಗಿ ಸಾಗುತ್ತಿರುವ ಹೆಜಮಾಡಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಇಲಾಖಾಧಿಕಾರಿಗಳು, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಜತೆಗೂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು, ರಾಜ್ಯ ಸರಕಾರದಿಂದ ಬಾಕಿ ಇರುವ ರೂ.೫೪ ಕೋಟಿ ಅನುದಾನ ಬಿಡುಗಡೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಮೀನುಗಾರಿಕಾ ಸಚಿವರ ಜತೆಗೆ ಮಾತುಕತೆ ನಡೆಸಿ […]

ಅಪರಾಧ

ವಿದ್ಯಾರ್ಥಿನಿಯ ಸಂಶಯಾಸ್ಪದ ಸಾವು – ಎಬಿವಿಪಿಯಿಂದ ಉಡುಪಿಯಲ್ಲಿ ಪ್ರತಿಭಟನೆ

ಕಾಪು ತಾಲೂಕಿನ ಎಲ್ಲೂರು ಕೆಮ್ಮುಂಡೇಲು ನಿವಾಸಿ ನಿಕಿತಾ ಎಂಬ ವಿದ್ಯಾರ್ಥಿನಿಯು ಆಸ್ಪತ್ರೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಎಬಿವಿಪಿ ಸಂಘಟನೆ ಇಂದು ಉಡುಪಿಯಲ್ಲಿ ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿತು. ನಿಕಿತಾ ಸಾವಿಗೀಡಾದ ಉಡುಪಿಯ ಸಿಟಿ ಹಾಸ್ಪಿಟಲ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ , ಸೂಕ್ತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ಆಸ್ಪತ್ರೆ ಮುಂದೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸಾಕಷ್ಟು ಸಂಖ್ಯೆಯಲ್ಲಿ ಬಂದ ವಿದ್ಯಾರ್ಥಿಗಳನ್ನು ಪೊಲೀಸರು ರಸ್ತೆಯಲ್ಲೇ ತಡೆದು ನಿಲ್ಲಿಸಿದರು. ಈ ವೇಳೆ […]

ಕರಾವಳಿ

ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು  ಪ್ರತಿಯೊಬ್ಬರ ಕರ್ತವ್ಯ : ಡಾ. ತಿಪ್ಪೇಸ್ವಾಮಿ

 ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಸೇರಿದಂತೆ ಅವುಗಳ ಅನುಷ್ಠಾನ ಮಾಡುವುದು ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು.      ಅವರು  ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡುತ್ತಿದ್ದರು.      ಶಾಲಾ-ಕಾಲೇಜುಗಳು ಸೇರಿದಂತೆ ಹಾಸ್ಟೆಲ್‌ಗಳಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ತಪ್ಪದೇ ಜಾರಿಗೊಳಿಸುವುದರೊಂದಿಗೆ, ಮಕ್ಕಳಿಗೆ ಯಾವುದೇ ರೀತಿಯ ಸಮಸ್ಯೆಗಳು […]

ತಂತ್ರಜ್ಞಾನ

ಆಳ್ವಾಸ್‌ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಮತ್ತು ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಜೊತೆ ಒಡಂಬಡಿಕೆ

 ಮೂಡಬಿದ್ರಿ : ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು (ಎಐಇಟಿ) ಈಚೆಗೆ ಒಡಂಬಡಿಕೆಗೆ ಸಹಿ ಮಾಡಿದೆ. ವಿವಿಧ ತರಬೇತಿ ಕಾರ್ಯಕ್ರಮಗಳ ಅಡಿಯಲ್ಲಿ ಕೌಶಲ ಅಭಿವೃದ್ಧಿ ತರಬೇತಿಯನ್ನು ನೀಡಲು ಈ ಒಪ್ಪಂದವನ್ನು ಮಾಡಲಾಗಿದೆ.  ಯುವಕರ ಎಂಜಿನಿಯರಿಂಗ್ ಕೌಶಲಗಳ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಿಸುವ ಆಶಯವನ್ನು ಈ ಒಪ್ಪಂದ ಒಳಗೊಂಡಿದೆ. ಕೆಜಿಟಿಟಿಐ ಮಂಗಳೂರಿನ ನಿರ್ದೇಶಕ ಗಿರಿಧರ್ ಸಾಲಿಯಾನ್ ಅವರ ಸಮ್ಮುಖದಲ್ಲಿ ಈ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಆಳ್ವಾಸ್ ಕಾಲೇಜಿನ ವ್ಯವಸ್ಥಾಪಕ […]

ಅಪರಾಧ

ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸಾವು: ಎಲ್ಲೂರಿನಲ್ಲಿ ಪಾಲಕರ ಆಕ್ರೋಶ

ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದು, ಯುವತಿಯ ಸಾವಿಗೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಹೆತ್ತವರು ಗುರುವಾರ ಸಂಜೆ ತಮ್ಮ ಮನೆಯಲ್ಲಿ ಮಾಧ್ಯಮದೊಂದಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಎಲ್ಲೂರಿನ ಕೇಮುಂಡೇಲು ನಿವಾಸಿ ಅದಮಾರು ಜನಾರ್ಧನ ಶೋಭಾ ದಂಪತಿಗಳ ಏಕೈಕ ಪುತ್ರಿ ನಿಖಿತಾ ಕುಲಾಲ್‌ ಸಾವನ್ನಪ್ಪಿದ ಯುವತಿ. ನಿಖಿತಾ ಮನೆಯಲ್ಲಿ ನೀರವ ಮೌನ ಮತ್ತು ದುಖ: ಮುಗಿಲು ಮುಟ್ಟಿದ್ದು, ಹೆತ್ತವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.   ಸಾಮಾಜಿಕ ಜಾಲತಾಣಗಳಲ್ಲಿ ನಿಖಿತಾ ಸಾವಿಗೆ ಆಕ್ರೋಶ ವ್ಯಕ್ತವಾಗಿದ್ದು,ಪ್ರತಿಭಟನೆಗೆ […]

ಪ್ರಚಲಿತ

  ಆಳ್ವಾಸ್‌ನಲ್ಲಿ ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ವಿದ್ಯಾಗಿರಿ: ವಿಶ್ವ ಯೋಗ ದಿನವಾದ ಬುಧವಾರ ಬೆಳಿಗ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಹಾಗೂ ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ ಸಭಾಂಗಣದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಸಿದರು. ಯೋಗಾಭ್ಯಾಸಕ್ಕೆ ಮೂಡುಬಿದಿರೆ ಜೈನ ಮಠದ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಪುರಸಭಾ ಸದಸ್ಯ ಪ್ರಸಾದ್ ಕುಮಾರ್ ಇದ್ದರು. ಆಳ್ವಾಸ್ ಶಿಕ್ಷಣ […]

ದೇಶ-ವಿದೇಶ

ಬಂಟಕಲ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ  ಯೋಗ ದಿನ ಆಚರಣೆ

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ  ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ, ಎನ್ ಸಿ ಸಿ ಘಟಕ ಮತ್ತು ಯೋಗ ಮತ್ತು ಫಿಟ್‌ನೆಸ್  ಘಟಕ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ   “ವಸುಧೈವ ಕುಟುಂಬಕಮ್” ಎಂಬ ವಿಷಯದಡಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ. ಎಂ ವೆಂಕಟೇಶ ಮೆಹಂದಳೆ ಮತ್ತು ಶ್ರೀ. ಕೆ ರಾಘವೇಂದ್ರ ಭಟ್, ಜಿಲ್ಲಾ ಪ್ರಭಾರಿ, ಭಾರತ್ ಸ್ವಾಭಿಮಾನ್ ಟ್ರಸ್ಟ್, ಉಡುಪಿ ಇವರು ಮುಖ್ಯ ಅತಿಥಿಗಳಾಗಿ […]

eMedia Kannada  @2025. All Rights Reserved.