Tag: Karavali

ಅಪರಾಧ

ಸುಳ್ಯ;ಕಾರು & ಲಾರಿ ನಡುವೆ ಭೀಕರ ಅಪಘಾತ:ಓರ್ವ ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ಸುಳ್ಯ:ಸ್ವಿಫ್ಟ್ ಕಾರಿಗೆ ನಿಯಂತ್ರಣ ಕಳೆದುಕೊಂಡ ಕಂಟೈನರ್ ಲಾರಿ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಡು, ನಾಲ್ವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ದೇವರ ಕೊಲ್ಲಿ ತಿರುವಿನಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಮಂಗಳೂರಿನ ಕುಳಾಯಿ ನಿವಾಸಿ ಈಶ್ವರ (42), ಕಾರಿನಲ್ಲಿದ್ದ ಪ್ರಯಾಣಿಕರಾದ ಚಂದ್ರಶೇಖರ, ನಿತಿನ್, ಜಗದೀಶ್ ಹಾಗೂ ಹರ್ಷ ಎಂಬವರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಈಶ್ವರ, ಚಂದ್ರಶೇಖರ ಮತ್ತು ನಿತಿನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು […]

ಅಪರಾಧ

ಪುತ್ತೂರು; ಹೆರಿಗೆ ವೇಳೆ ತೀವ್ರ ರಕ್ತಸ್ರಾವವಾಗಿ ಆಶಾ ಕಾರ್ಯಕರ್ತೆ ಮೃತ್ಯು

ಪುತ್ತೂರು; ಹೆರಿಗೆ ವೇಳೆ ತೀವ್ರ ರಕ್ತ ಸ್ರಾವವಾಗಿ ಆಶಾ ಕಾರ್ಯಕರ್ತೆಯೋರ್ವರು ಮೃತಪಟ್ಟ ಘಟನೆ‌ ನಡೆದಿದೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ನಿವಾಸಿ ಬಾಲಕೃಷ್ಣ ಗೌಡ ಎಂಬವರ ಪತ್ನಿ ಭವ್ಯ (28)ಮೃತರು. ಇವರು ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು. ಹೆರಿಗೆ ವೇಳೆ ಭವ್ಯ ಮೃತಪಟ್ಟಿದ್ದು, ಗಂಡು ಮಗು ಆರೋಗ್ಯವಾಗಿದೆ. ಭವ್ಯ ಅವರಿಗೆ 3ನೇ ಹೆರಿಗೆಯಾಗಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ನಿನ್ನೆ ರಾತ್ರಿ ಅವರು ಗಂಡು ಮಗುವಿಗೆ ಜನ್ಮ […]

ಅಪರಾಧ

ಬೆಳ್ತಂಗಡಿ; ಬೈಕ್ ಗೆ ಬಸ್ ಢಿಕ್ಕಿ; ಹುಟ್ಟು ಹಬ್ಬದ ದಿನವೇ ಯುವಕ ಮೃತ್ಯು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಬಳಿ ನಡೆದಿದೆ. ಓಡೀಲು ನಿವಾಸಿ ದೀಕ್ಷಿತ್ ಮೃತ ಯುವಕ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ನ ಹುಟ್ಟುಹಬ್ಬವಾಗಿದ್ದು, ಈ ಹಿನ್ನಲೆಯಲ್ಲಿ ಬೆಳಿಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ವೇಣೂರು ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಅಪರಾಧ

ಉದ್ಯಾವರ ಎಸ್.ಡಿ.ಎಂ. ಆಟೋ ಚಾಲಕರ ಮಾಲಕರ ಸಂಘ ಕುತ್ಪಾಡಿ ಇದರ ಮಾಜಿ ಅಧ್ಯಕ್ಷ ರಾಮ ಪೂಜಾರಿ ಕುತ್ಪಾಡಿ ನಿಧನ

  ಉಡುಪಿ  : ಉದ್ಯಾವರ ಎಸ್.ಡಿ.ಎಂ. ಆಟೋ ಚಾಲಕರ ಮಾಲಕರ ಸಂಘ ಕುತ್ಪಾಡಿ  ಇದರ ಮಾಜಿ ಅಧ್ಯಕ್ಷ ರಾಮ ಪೂಜಾರಿ ಕುತ್ಪಾಡಿ (55) ಅಲ್ಪಕಾಲದ ಅಸೌಖ್ಯದಿಂದ  ನಿಧನ ಹೊಂದಿದರು.  32ಕ್ಕೂ ಅಧಿಕ ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು, ಎಸ್.ಡಿ.ಎಂ. ಆಟೋ ಚಾಲಕರ ಮತ್ತು ಮಾಲಕರ ಸಂಘದಲ್ಲಿ ಸಕ್ರಿಯರಾಗಿದ್ದು, ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದು ನಾಲ್ಕು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಉಡುಪಿಯ ಪ್ರತಿಷ್ಠಿತ ಯಶೋಧ ಆಟೋ ಯೂನಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಅತ್ಯಂತ ಶ್ರಮಜೀವಿಯಾಗಿದ್ದರು. ಎಸ್ […]

ಪ್ರಚಲಿತ

ಮುಂಡ್ಕೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆಯಾಗಿ ಶ್ರೀಮತಿ ಯಶೋಧ ಸಂಕಲಕರಿಯ, ಕಾರ್ಯದರ್ಶಿಯಾಗಿ ಶ್ರೀಮತಿ ಲೀಲಾ ಪಡುದಡ್ಡು ಹಾಗೂ ಕೋಶಾಧಿಕಾರಿಯಾಗಿ ಶ್ರೀಮತಿ ರಂಜನಿ ಕಲ್ಲಿಮಾರು ಆಯ್ಕೆ

ಮುಂಡ್ಕೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆಯಾಗಿ ಶ್ರೀಮತಿ ಯಶೋಧ ಸಂಕಲಕರಿಯ, ಕಾರ್ಯದರ್ಶಿಯಾಗಿ ಶ್ರೀಮತಿ ಲೀಲಾ ಪಡುದಡ್ಡು ಹಾಗೂ ಕೋಶಾಧಿಕಾರಿಯಾಗಿ ಶ್ರೀಮತಿ ರಂಜನಿ ಕಲ್ಲಿಮಾರು ಆಯ್ಕೆ ಮುಂಡ್ಕೂರು, ಬೆಳ್ಮಣ್: ಬಿಲ್ಲವ ಯುವ ವೇದಿಕೆ ಹಾಗೂ ಬಿಲ್ಲವ ಮಹಿಳಾ ವೇದಿಕೆ ಮುಂಡ್ಕೂರು ಮುಲ್ಲಡ್ಕ ಇನ್ನಾ ಇದರ ಮಾಸಿಕ ಸಭೆ ಮುಂಡ್ಕೂರು ಸಮುದಾಯ ಭವನದಲ್ಲಿ ನಡೆಯಿತು. ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಹರೀಶ್ ಪೂಜಾರಿ ಸಚ್ಚೇರಿಪೇಟೆ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2023-2025ನೇ ಸಾಲಿನ ಮಹಿಳಾ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ […]

ಕರಾವಳಿ

ಮಲ್ಪೆ ಕಡಲ ಕಿನಾರೆಯಲ್ಲಿ ಗಂಗೆಯ ಕೂದಲ ರಾಶಿ: ಸಾರ್ವಜನಿಕ ಆಕರ್ಷಣೆ

ಮಲ್ಪೆ ಕಡಲ ಕಿನಾರೆಯಲ್ಲಿ ಗಂಗೆಯ ಕೂದಲ ರಾಶಿ: ಸಾರ್ವಜನಿಕ ಆಕರ್ಷಣೆ ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಅಪರೂಪದ ಪ್ರಾಕೃತಿಕ ವಿದ್ಯಮಾನ ಸಂಭವಿಸಿದೆ. ಕಡಲ ತೀರದ ಉದ್ದಕ್ಕೂ ರಾಶಿ ರಾಶಿ ನಾರು ಬೇರುಗಳು ಬಂದು ಬಿದ್ದಿವೆ. ರಾತ್ರಿ ಬೆಳಗಾಗುವುದರೊಳಗಾಗಿ ಕಡಲು ಈ ಕಸದ ರಾಶಿಯನ್ನು ತಂದು ಗುಡ್ಡೆ ಹಾಕಿದೆ.  ಹಾಗಂತ ಇದನ್ನು ಕಲ್ಮಶ ಅಥವಾ ಕಸ ಎನ್ನಲು ಸಾಧ್ಯವಿಲ್ಲ. ಸ್ಥಳೀಯ ಆಡು ಭಾಷೆಯಲ್ಲಿ ಈ ವಿಶಿಷ್ಟ ಸಸ್ಯ ಜನ್ಯ ನಾರುಗಳನ್ನು ಗಂಗೆಯ ಕೂದಲು ಎಂದು ಕರೆಯುತ್ತಾರೆ. ಸಮುದ್ರ ತೀರದ […]

ಕರಾವಳಿ

ಕಡಲಿಗಿಳಿದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು

ಮಲ್ಪೆ: ಬಿಪರ್ ಜಾಯ್ ಚಂಡಮಾರುತದ ಅಬ್ಬರ ತಣ್ಣಗಾಗಿದೆ.ಮುಂಗಾರು ಮಳೆ ಕ್ಷೀಣಗೊಂಡಿದ್ದು ಪ್ರಕ್ಷುಬ್ಧಗೊಂಡ ಕಡಲು ಶಾಂತವಾಗಿದೆ. ಹೀಗಾಗಿ ನಾಡದೋಣಿ ಮೀನುಗಾರರು ಸಮುದ್ರದತ್ತ ಮುಖ ಮಾಡಿದ್ದಾರೆ. ರಾಜ್ಯದ ಕರಾವಳಿಯಲ್ಲಿ ಜೂನ್ ಹಾಗೂ ಜುಲೈ ತಿಂಗಳಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ಮಳೆಗಾಲದ ನಿಷೇಧ ಇದೆ. ಮೀನುಗಳ ಸಂತಾನೋತ್ಪತ್ತಿ ಮಳೆಗಾಲದಲ್ಲಿ ಆಗುವುದರಿಂದ ಈ ಅವಧಿಯಲ್ಲಿ ಆಳಸಮುದ್ರ ಮೀನುಗಾರಿಕೆಗೆ ಅವಕಾಶ ಇಲ್ಲ. ಈ ಸಮಯದಲ್ಲಿ ಸಾಂಪ್ರದಾಯಿಕ ನಾಡದೋಣಿ  ಮೀನುಗಾರರು ಸಂಪ್ರದಾಯಿಕವಾಗಿ, ಸಮುದ್ರ ತೀರದಲ್ಲಿ ಮೀನುಗಾರಿಕೆ ನಡೆಸುತ್ತಾರೆ.   ಈ ಬಾರಿ ಜೂನ್‌ನಲ್ಲಿ ಚಂಡಮಾರುತದ ಎಫೆಕ್ಟ್ ‌ನಿಂದ […]

ರಾಜಕೀಯ

ತಂದೆ-ತಾಯಂದಿರಿಲ್ಲದ ಅನಾಥ ಮಕ್ಕಳಿಗೂ ಶೇ.1ರಷ್ಟು ಮೀಸಲಾತಿ: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ

ಉಡುಪಿ: ತಂದೆ-ತಾಯಂದಿರಿಲ್ಲದ ಅನಾಥ ಮಕ್ಕಳಿಗೂ ಶೇ.1ರಷ್ಟು ಮೀಸಲಾತಿ ಒದಗಿಸುವ ಆಯೋಗದ ಶಿಫಾರಸ್ಸನ್ನು ಹಿಂದಿನ ಸರಕಾರ ಒಪ್ಪಿಕೊಂಡಿದ್ದು, ಅದನ್ನು ಅನುಷ್ಠಾನಗೊಳಿಸಲು ಸರಕಾರ ಮುಂದಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.  ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಆಯೋಗದ ಸಭೆಯಲ್ಲಿ ಉಡುಪಿ ಜಿಲ್ಲೆ ಯಲ್ಲಿ ಹಿಂದುಳಿದ ಜಾತಿ ಮತ್ತು ಸಮುದಾಯದ ಪ್ರಗತಿ ಪರಿಶೀಲನೆ, ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ ಬಳಿಕ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು.  ನನ್ನ ನೇತೃತ್ವದ ಆಯೋಗ […]

ಪ್ರಚಲಿತ

ಪಡುಬಿದ್ರಿ ಬಂಟರ ಭವನದಲ್ಲಿ ವಿಶ್ವಯೋಗ ದಿನಾಚರಣೆ ಅಂಗವಾಗಿ ಯೋಗಾಭ್ಯಾಸ

ವಿಶ್ವಯೋಗ ದಿನಾಚರಣೆಯ ಅಂಗವಾಗಿ ಹಟ ಯೋಗ ಶಿಕ್ಷಣ ಸಮಿತಿ ಪಡುಬಿದ್ರಿ, ಜೆ.ಸಿ.ಐ ಪಡುಬಿದ್ರಿ, ಆಯುಷ್ ಫೆಡರೇಶನ್ ಆಫ್ ಇಂಡಿಯಾ ಇದರ  ಸಂಯುಕ್ತ ಆಶ್ರಯದಲ್ಲಿ ಪಡುಬಿದ್ರಿ ಬಂಟರ ಭವನದಲ್ಲಿ ಬುಧವಾರ ಬೆಳಿಗ್ಗೆ ವಿಶ್ವಯೋಗ ದಿನಾಚರಣೆಯನ್ನು ಉಡುಪಿ ಆಯುಷ್ ಫೆಡರೇಶನ್ ಅಧ್ಯಕ್ಷ      ಡಾ.ಎನ್.ಟಿ. ಅಂಚನ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಬೆಳೆಯಲು ಅನುಕೂಲವಾಗುತ್ತದೆ. ಭಾರತೀಯ ಪರಂಪರೆಯಲ್ಲಿ ಯೋಗ ಅಮೂಲ್ಯವಾದ ಕೊಡುಗೆ. ಇದನ್ನು ಇಂದು ವಿಶ್ವದಾದ್ಯಂತ ಆಚರಿಸುತ್ತಾರೆ. ಇಂದಿನ […]

Uncategorised

ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಶ್ರೀ ರವಿಶಂಕರ್ ಗುರೂಜಿ ಭೇಟಿ

ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಶಾಸಕರಾದ   ಗುರ್ಮೆ ಸುರೇಶ್ ಶೆಟ್ಟಿ ಅವರು   ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆಶ್ರಮಕ್ಕೆ ಮಂಗಳವಾರ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದರು. ಈ ಸಂದರ್ಭ ಸರೇಶ್‌ ಶೆಟ್ಟಿಯವರ ಸಹೋದರ ಹರೀಶ್‌ ಶೆಟ್ಟಿ, ಸಂಬಂಧಿಕಾದ ಶ್ರೀಮತಿ ಆಶಾ ಶೆಟ್ಟಿ, ಬೆಂಗಳೂರು ಹೋಟೆ ಉಧ್ಯಮಿ ಉದಯ ಶೆಟ್ಟಿಯವರು ಉಪಸ್ಥಿತರಿದ್ದರು.

eMedia Kannada  @2025. All Rights Reserved.