Tag: Karavali

ಪ್ರಚಲಿತ

ಉಚ್ಚಿಲ ಶ್ರೀ  ಮಹಾಲಕ್ಷ್ಮಿ ದೇವಸ್ಥಾನಕ್ಕೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭೇಟಿ

  ಇತ್ತೀಚೆಗೆ ಸಮಗ್ರ ಜೀರ್ಣೋದ್ಧಾರಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭಾನುವಾರ ಭೇಟಿ ನೀಡಿದರು.  ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯ ಮತ್ತು ವಿಷ್ಣುಮೂರ್ತಿ ಉಪಾಧ್ಯಾಯರವರು ಶ್ರೀ ಮಹಾಲಕ್ಷ್ಮಿಗೆ ಪೂಜೆ ಸಲ್ಲಿಸಿ ಪ್ರಸಾದ ವಿಕರಿಸಿದರು. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿಕೋಟಿಯನ್ ಬೆಳ್ಳಂಪಳ್ಳಿ ಯವರು ದೇವಸ್ಥಾನದ ವತಿಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರಿಗೆ ಸ್ಮರಣಿಕೆ  ನೀಡಿ […]

ಕರಾವಳಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಭೇಟಿ ಶ್ರೀಕೃಷ್ಣಮಠಕ್ಕೆ,ಉಡುಪಿ ಜಿಲ್ಲಾ ಉಸ್ತುವಾರಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಶ್ರೀಮತಿ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ರವರು ಭಾನುವಾರ ಬೆಳಿಗ್ಗೆ ಆಗಮಿಸಿ ಶ್ರೀ ಕೃಷ್ಣನ  ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೃಷ್ಣಮೂರ್ತಿ ಭಟ್, ಉದಯಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕರಾವಳಿ

ಉಚ್ಚಿಲದಲ್ಲಿ ಉಡುಪಿ ಶಾಸಕರಾಗಿ ಆಯ್ಕೆಯಾದ ಯಶ್ಪಾಲ್‌ ಸುವರ್ಣರಿಗೆ ಸನ್ಮಾನ

ಮೊಗವೀರ ಮಹಾಜನ ಸಂಘ ದ ವತಿಯಿಂದ  ನೂತನವಾಗಿ ಉಡುಪಿ ಶಾಸಕರಾಗಿ ಆಯ್ಕೆಯಾದ ಯಶ್ವಂತ್ ಸುವರ್ಣ ರವರನ್ನು ದೇವಸ್ಥಾನದಲ್ಲಿ ಸನ್ಮಾನಿಸಲಾಯಿತು.  ಈ ಸಂದರ್ಭ ಮೊಗವೀರ  ಮುಖಂಡ ಡಾಕ್ಟರ್ ಜಿ ಶಂಕರ್ ಮಾತನಾಡಿ, ಮೊಗವೀರ  ಜನಾಂಗದ ಯಶ್ ಪಾಲ್ ಸುವರ್ಣರು ಶಾಸಕರಾಗಿ ಆಯ್ಕೆಯಾದದ್ದು ಸಂತಸ ತಂದಿದೆ.  ಯಶ್ಪಾಲ್‌  ಸುವರ್ಣ ರಿಂದ ಸಮಾಜಕ್ಕೆ ಹೆಚ್ಚಿನ ಸೇವೆ ಲಭಿಸಲಿ ಎಂದು ಹಾರೈಸಿದರು.  ಈ ಸಂದರ್ಭ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟಿಯನ್ ಬೆಳ್ಳಂಪಳ್ಳಿ, ಜೀರ್ಣೋದರ ಸಮಿತಿಯ ಅಧ್ಯಕ್ಷ ಗುಂಡು ಬಿ. […]

ಅಪರಾಧ

ಉಚ್ವಿಲದಲ್ಲಿ ಮಧ್ಯ ವಯಸ್ಕ ಆತ್ಮಹತ್ಯೆ

ಉಚ್ವಿಲದಲ್ಲಿ ಮಧ್ಯ ವಯದ್ಕನೋರ್ವ ತನ್ನ ಮನೆಯ ಚಾವಡಿಯಲ್ಲಿ ನೇಣಿಗೆ ಶರಣಾದ ಘಟನೆ ಶನಿವಾರ ಘಟಿಸಿದೆ. ಮೃತರನ್ನು ಉಚ್ವಿಲ ಪೊಲ್ಯ ನಿವಾಸಿ ಅವಿನಾಶ್ (40) ಎಂದು ಗುರುತಿಸಲಾಗಿದೆ. ಮೃತ ಅವಿನಾಶ್ ಮನೆಯಲ್ಲಿಯೇ ಇದ್ದು, ಮನೆಯಲ್ಲಿ ಮನಸ್ತಾಪ ಉಂಟಾಗಿತ್ತು. ಹೆಂಡತಿ ಮತ್ತು ಮಕ್ಕಳು ಮತ್ತೊಂದು ಕೋಣೆಯಲ್ಲಿದ್ದಾಗ , ಚಾವಡಿಯ ಚಿಲಕ ಹಾಕಿ ಮನೆ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಕೊಂಡಿದ್ದಾನೆ. ಮೃತ ಅವಿನಾಶ್ ಖಾಸಗಿ ಬಸ್ಸು ಚಾಲಕನಾಗಿದ್ದ. ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತ ದೇಹವನ್ನು ಮರಣೋತ್ತರ […]

ಕರಾವಳಿ

ಪಿ.ಕೆ.ಎಸ್ ಪ್ರೌಢಶಾಲೆ ಕಳತ್ತೂರು ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನೆ

ಪೈಯ್ಯಾರು ಕರಿಯಣ್ಣ ಶೆಟ್ಟಿ (ಪಿ.ಕೆ.ಎಸ್) ಪ್ರೌಢಶಾಲೆ, ಕಳತ್ತೂರು ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಇಂದು ದಿನಾಂಕ 10-06-2023 ರಂದು ಅಭಿನಂದನಾ ಕಾರ್ಯಕ್ರಮ ನೆರವೇರಿತು. ಅಭಿನಂದನೆ ಸ್ವೀಕರಿಸಿ ಶಾಸಕರು ಮಾತನಾಡಿ ವಿದ್ಯಾರ್ಥಿಗಳಿಗೆ ನಾನು ಕನ್ನಡ ಮೀಡಿಯಂ ಎಂಬ ಕೀಳರಿಮೆ ಬೇಡ. ಮನುಷ್ಯ ಪ್ರಯತ್ನ ಪಟ್ಟರೆ ಏನನ್ನು ಸಾಧಿಸಬಹುದು ಪ್ರತಿ ವಿದ್ಯಾರ್ಥಿಯಲ್ಲೂ ಅವರದ್ದೇ ಆದ ಪ್ರತಿಭೆ ಇದ್ದೇ ಇರುತ್ತದೆ. ಆತ್ಮವಿಶ್ವಾಸದಿಂದ ಮುಂದೆ ಸಾಗಿ ಎಂದರು. ಈ ಸಂದರ್ಭದಲ್ಲಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ […]

ಕರಾವಳಿ

ಜೂ. 11-12 ರಂದು ಕಾಪು ಶ್ರೀ ಹೊಸಮಾರಿಗುಡಿ ಮಾರಿಯಮ್ಮ ಮತ್ತು ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಾಲನೆ

ಕಾಪು, : ಸುಮಾರು ಮೂವತ್ತೈದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಶ್ರೀ ಮಾರಿಯಮ್ಮ ಮತ್ತು ಶ್ರೀ ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ ಧಾರ್ಮಿಕ ಕಾರ್ಯಕ್ರಮವು ಜೂ. 11 ಮತ್ತು 12 ರಂದು ನಡೆಯಲಿದೆ ಎಂದು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ತಿಳಿಸಿದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶುಕ್ರವಾರ ಜರಗಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, […]

ಕರಾವಳಿ

ಪಡುಬಿದ್ರಿಯಲ್ಲಿ ನಿವೃತ್ತ ಬಿಎಸ್‌ಎಫ್ ಕಮಾಂಡೆಂಟ್  ಪಿ.ಎ. ಮೊಹಿದ್ದೀನ್ ರವರಿಗೆ ಸನ್ಮಾನ

ಪಡುಬಿದ್ರಿ: ಗಡಿ ಭದ್ರತಾ ಪಡೆಯಲ್ಲಿ ಸುಮಾರು ೩೫ವರ್ಷಗಳ ಕಾಲ ಸೇವೆ ಸಲ್ಲಿಸಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ನಿವೃತ್ತ ಹೊಂದಿದ ಪಡುಬಿದ್ರಿ ಜಮಾಅತ್ ಸದಸ್ಯರಾದ ಪಿ.ಎ. ಮೊಹಿದ್ದೀನ್ ಅವರನ್ನು ಪಡುಬಿದ್ರಿ ಜಮಾಅತ್ ಸಮಿತಿಯ ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು. ಬಿಎಸ್‌ಎಫ್‌ನಲ್ಲಿ ೩೫ ವರ್ಷಗಳ ಕಾಲ ದೇಶದ ಹಲವು ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಅಸಿಸ್ಟೆಂಟ್ ಕಮಾಂಡೆಂಟ್ ಇತ್ತೀಚೆಗೆ ನಿವೃತ್ತರಾದ ಪಿ.ಎ. ಮೊಹಿದ್ದೀನ್ ಅವರನ್ನು ಪಡುಬಿದ್ರಿ ಜುಮ್ಮಾ ಮಸೀದಿಯಲ್ಲಿ ನಡೆದ ಸಮಾರಂಭದಲ್ಲಿ ಜುಮ್ಮಾ ಮಸೀದಿ ಖತೀಬ್ ಎಸ್.ಎಮ್. ಅಬ್ದುಲ್ […]

ಅಪರಾಧ ಕರಾವಳಿ

 ದ.ಕ.ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ನೇಣಿಗೆ ಶರಣು

 ಮಂಗಳೂರು; ದ.ಕ.ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಾಲಕೃಷ್ಣ (58) ಎಂಬವರು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮಾಲಾಡಿ ಕೋರ್ಟ್‌ ಬಳಿಯ ರಾಘವೇಂದ್ರ ನಿಲಯ ಎಂಬಲ್ಲಿ ವಾಸಿಸುತ್ತಿದ್ದ ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು.   ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಾಲಕೃಷ್ಣ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಅವರು ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. […]

ರಾಜಕೀಯ

ಸಚಿವೆ ಶೋಭಾ ರಾಜೀನಾಮೆಗೆ ಮಂಜುನಾಥಭಂಡಾರಿ ಆಗ್ರಹ

ಉಡುಪಿ: ದೆಹಲಿಯಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆ ಹಿಂದೆ ವಿದೇಶಿ ಕೈವಾಡ ಇದೆ ಹಾಗೂ ಫಂಡಿಂಗ್ ಮಾಡಲಾಗುತ್ತಿದೆ ಎಂಬ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಸಚಿವೆ ಕರಂದ್ಲಾಜೆ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶವನ್ನು ಅಸ್ಥಿರಗೊಳಿಸುವಲ್ಲಿ ವಿದೇಶಿ ಕೈವಾಡ ಇದೆ ಎಂಬುದು ಸಚಿವೆ ಶೋಭಾ ಅವರ ಅಲ್ಪ ತಿಳುವಳಿಕೆ. ಆ ಕುರಿತು ತನಿಖೆ ನಡೆಸಬೇಕಾದ ಇಲಾಖೆಗಳು ಕೇಂದ್ರ ಸರಕಾರದ ಸುಪರ್ದಿಯಲ್ಲಿದೆ. ಕೇಂದ್ರ ಸಚಿವೆಯಾಗಿ ಅವರು ಈ […]

ರಾಜಕೀಯ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ – ದ.ಕ. ಜಿಲ್ಲೆಗೆ ಸಚಿವ ದಿನೇಶ್ ಗುಂಡೂರಾವ್ , ಉಡುಪಿ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆಗೆ ಡಾ. ಜಿ ಪರಮೇಶ್ವರ್, ಗದಗ ಜಿಲ್ಲೆಗೆ ಹೆಚ್.ಕೆ ಪಾಟೀಲ್, ಬೆಂಗಳೂರು ಗ್ರಾಮಾಂತರಕ್ಕೆ ಕೆ.ಹೆಚ್ ಮುನಿಯಪ್ಪ, ರಾಮನಗರಕ್ಕೆ ರಾಮಲಿಂಗಾರೆಡ್ಡಿ, ಚಿಕ್ಕಮಗಳೂರಿಗೆ ಕೆಜೆ ಜಾರ್ಜ್, ವಿಜಯಪುರಕ್ಕೆ ಎಂ.ಬಿ ಪಾಟೀಲ್, ಮೈಸೂರಿಗೆ ಹೆಚ್.ಸಿ ಮಹದೇವಪ್ಪ, ಬೆಳಗಾವಿಗೆ ಸತೀಶ್ ಜಾರಕಿಹೊಳಿ, ಕಲಬುರ್ಗಿಗೆ ಪ್ರಿಯಾಂಕಾ ಖರ್ಗೆ, ಹಾವೇರಿಗೆ ಶಿವಾನಂದ ಪಾಟೀಲ್, […]

eMedia Kannada  @2025. All Rights Reserved.