Tag: Karavali

ಕರಾವಳಿ

ಕಟೀಲು ಕ್ಷೇತ್ರದಲ್ಲಿ ೩೧ ವರ್ಷಗಳ ಬಳಿಕ ಜಲಕ್ಷಾಮ,ಶಾಲಾ ಮಕ್ಕಳ ಬಿಸಿಯೂಟ ನಿಲುಗಡೆ:ಗೋವುಗಳಿಗೆ ನೀರಿನ ಬರ

 ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದವಾದ ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೊಳಪಟ್ಟ ರಾಜ್ಯದಲ್ಲಿ ಕೋಟಿಗೂ ಮಿಕ್ಕಿ ಆದಾಯವನ್ನು ಒಳಗೊಂಡಿರುವ ಎ ಗ್ರೇಡ್ ದೇವಲವಾಗಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಈ ಬಾರಿ  ಜಲ ಕ್ಷಾಮ ಕಂಡು ಬಂದಿದೆ.   ಇದರಿಂದ ಪ್ರತಿದಿನ ಸುಮಾರು ೧೫೦೦೦ ಕ್ಕೂ ಮಿಕ್ಕಿ ಆಗಮಿಸುವ ಭಕ್ತರಿಗೆ ಹಾಗೂ ದೇವಳದಿಂದ ನಡೆಸಲ್ಪಡುತ್ತಿರುವ ಶಿಕ್ಷಣ ಸಂಸ್ತೆಗೆ ಸಮಸ್ಯೆ ಉಂಟಾಗಿದೆ.   ಶಿಕ್ಷಣ ಸಂಸ್ಥೆಗೆ ಮಧ್ಯಾಹ್ನದ ಬಳಿಕ ರಜೆಯನ್ನು ನಿಡಲಾಗುತ್ತಿದೆ.  ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ೧೯೯೨ರಲ್ಲಿ ಈ ರೀತಿ […]

ವ್ಯವಹಾರ

ಶ್ರೀಮಾ ರೈಗೆ ರಾಜೀವ್ ಗಾಂಧಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್

ಉಡುಪಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸ್ಮರಣಾರ್ಥವಾಗಿ ಕೊಡಲ್ಪಡುವ ‘ರಾಜೀವ್ ಗಾಂಧಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್ -2023’ಕ್ಕೆ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಶ್ರೀಮಾ ರೈ ಭಾಜನರಾಗಿದ್ದಾರೆ. ಪುತ್ತೂರಿನ ಬೆಳ್ಳಿಪ್ಪಾಡಿ ಕುಟುಂಬ ಟ್ರಸ್ಟ್‌ನ ಅಧ್ಯಕ್ಷ ನೇಮಿರಾಜ್ ರೈ ಮತ್ತು ನಿಟ್ಟೆಗುತ್ತು ವಿಶಾಲಿ ಎನ್. ರೈ ದಂಪತಿ ಪುತ್ರಿಯಾಗಿರುವ ಇವರು, ಮೆರೈನ್ ಇಂಜಿನಿಯರಿಂಗ್ ಕನ್ಸಲ್ವೆನ್ಸಿ ಕಂಪನಿಯನ್ನು ಮುನ್ನಡೆಸುತ್ತಿರುವ ಆದಿತ್ಯ ರೈ ಅವರ ಪತ್ನಿ. ಇವರಿಗೆ ಇಬ್ಬರು ಪುತ್ರರು ಇದ್ದಾರೆ. ಮಿಸೆಸ್ ಇಂಡಿಯಾ ಗ್ಲೋಬ್ 2009 ಕಿರೀಟವನ್ನು ಮುಡಿಗೇರಿಸಿರುವ ಶ್ರೀಮಾ […]

ಅಪರಾಧ ಕರಾವಳಿ

ಕುಂದಾಪುರ: ಯುವಕನಿಂದ ಅಸಭ್ಯ ವರ್ತನೆ, ಯುವತಿಯಿಂದ ದೂರು ದಾಖಲು

ಕುಂದಾಪುರ: ಹಾಸ್ಟೆಲ್​ನಿಂದ ಕಾಲೇಜಿಗೆ ತೆರಳುತ್ತಿದ್ದಾಗ ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ರೋಡ್ ರೋಮಿಯೋ ಯುವಕನಿಗೆ ವಿದ್ಯಾರ್ಥಿನಿ ಚಪ್ಪಲಿ ಏಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕುಂದಾಪುರ ತಾಲೂಕಿನ ವಕ್ವಾಡಿ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಬಾರ್ಕೂರು ಮೂಲದ ಸದ್ಯ ಈ ಭಾಗದಲ್ಲಿ ಶ್ಯಾಮಿಯಾನ ಮೊದಲಾದ ಕೂಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿರುವ ನಜೀರ್ (35) ಆರೋಪಿ. ಘಟನೆ ವಿವರ: ವಿದ್ಯಾರ್ಥಿನಿಯೋರ್ವಳು ಬೀಜಾಡಿ-ವಕ್ವಾಡಿ ರಸ್ತೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿನಿಲಯದಿಂದ ಬೆಳಿಗ್ಗೆ ಕಾಲೇಜಿಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ […]

ಅಪರಾಧ ಮಂಗಳೂರು

ಜೀರ್ಣೋದ್ಧಾರ ಹೆಸರಿನಲ್ಲಿ ನಾಗಬನಕ್ಕೆ ಹಾನಿ ಮಾಡಬೇಡಿ’ ಉರಗ ತಜ್ಞ ಗುರುರಾಜ್ ಸನಿಲ್ ಮನವಿ

ವಿದ್ಯಾಗಿರಿ (ಮೂಡುಬಿದಿರೆ): ‘ಜೀರ್ಣೋದ್ಧಾರ ಹೆಸರಿನಲ್ಲಿ ನಾಗಬನಕ್ಕೆ ಹಾನಿ ಮಾಡಬೇಡಿ’ ಎಂದು ಉರಗ ತಜ್ಞ ಗುರುರಾಜ್ ಸನಿಲ್ ರವರು ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ‘ಅಭಿವ್ಯಕ್ತಿ ವೇದಿಕೆ’ಯ ವತಿಯಿಂದ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.  ನಾಗಬನ ಹಾಗೂ ದೇವರಕಾಡುಗಳು ಅದ್ಭುತ ಪರಿಕಲ್ಪನೆಗಳು ಮಾತ್ರವಲ್ಲ, ಪರಿಸರ ಹಾಗೂ ನಮ್ಮನ್ನು ಉಳಿಸಿ-ಬೆಳೆಸುವ ಸ್ಥಾನಗಳು. ನಾಗಬನಗಳು ೧೫೦ರಷ್ಟು ಸಸ್ಯಪ್ರಭೇದ, ಹಲವಾರು ಪ್ರಾಣಿ, ಪಕ್ಷಿ ಪ್ರಭೇದ, ಪರಿಸರದ ಅಂತರ್ಜಲ, ತಾಪಮಾನ ನಿಯಂತ್ರಣ, ಆಮ್ಲಜನಕ ಸೇರಿದಂತೆ ಹಲವಾರು ಜೀವಪರ ಅಂಶಗಳನ್ನು ಹೊಂದಿವೆ. […]

ಕರಾವಳಿ

ಮೂಡುಬಿದಿರೆ, ವಿದ್ಯಾಗಿರಿಯಲ್ಲಿ ‘ಪರಿಸರ ಮತ್ತು ಸಾಹಿತ್ಯ’ ವಿಚಾರಗೋಷ್ಠಿ

ಮೂಡುಬಿದಿರೆ, ವಿದ್ಯಾಗಿರಿ ‘ಪರಿಸರ ಮತ್ತು ಸಾಹಿತ್ಯ’ ವಿಚಾರಗೋಷ್ಠಿ ವಿದ್ಯಾಗಿರಿ ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಕನ್ನಡ ವಿಭಾಗ ಆಯೋಜಿಸಿದ ‘ಪರಿಸರ ಮತ್ತು ಸಾಹಿತ್ಯ’ ವಿಚಾರಗೋಷ್ಠಿಯಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ. ಬಿ. ಪಿ. ಸಂಪತ್ ಕುಮಾರ್ ಭಾಗವಹಿಸಿದರು. ಅವರು ಈ ಸಂದರ್ಭ ಮಾತನಾಡಿ, ಪ್ರಕೃತಿ ಅತ್ಯಮೂಲ್ಯ ಸಂಪತ್ತು. ನಮ್ಮ ಒಳನೋಟದಿಂದ ಪ್ರಕೃತಿಯ ಸಾಕಷ್ಟು ವಿಚಾರಗಳನ್ನು ತಿಳಿಯಬಹುದು. ಆದರೆ, ನಾವು ಪ್ರಕೃತಿಯನ್ನು ಅಧ್ಯಯನ ಮಾಡದೇ ಕಲಿಕೆಯಿಂದ ವಂಚಿತರಾಗುತ್ತಿದ್ದೇವೆ ಎಂದರು. ಈಚಿನ […]

ಅಪರಾಧ ಕರಾವಳಿ

ಉಡುಪಿ: ತಾಲೂಕು ಪಂಚಾಯತ್ ಮಾಜಿ ಸದಸ್ಯ ಭಾಸ್ಕರ್ ಕೋಟ್ಯಾನ್ ನಿಧನ

 ಉಡುಪಿ: ಹಿರಿಯ ಕಾಂಗ್ರೆಸಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಭಾಸ್ಕರ್ ಕೋಟ್ಯಾನ್ (67) ಹೃದಯಾಘಾತದಿಂದ ನಿಧನ ಹೊಂದಿದರು.  ಉಡುಪಿ ತಾಲೂಕು ಪಂಚಾಯತಿಗೆ ಉದ್ಯಾವರ ಕ್ಷೇತ್ರದಿಂದ ಒಂದು ಬಾರಿ ಆಯ್ಕೆಯಾಗಿದ್ದ ಇವರು, ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.  ಉದ್ಯಾವರ ಬಿಲ್ಲವ ಮಹಾಜನ ಸಂಘ ಇದರ ಮಾಜಿ ಅಧ್ಯಕ್ಷರಾಗಿದ್ದ ಇವರು, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ಇದ್ದುದನ್ನು ನೇರವಾಗಿ ಹೇಳುತ್ತಿದ್ದ ಇವರು ಉದ್ಯಾವರದಲ್ಲಿ ಹಲವು ವರ್ಷಗಳ ಹಿಂದೆ ನಡೆದ ಫಿಶ್ ಮಿಲ್ […]

ಕರಾವಳಿ ವ್ಯವಹಾರ

ಬ್ರಹ್ಮಾವರ: 2 ದಿನಗಳ ಕಾಲ ಹಣ್ಣು ಮೇಳ

ಬ್ರಹ್ಮಾವರ: ರೋಟರಿ ಕ್ಲಬ್ ಬ್ರಹ್ಮಾವರ ಮತ್ತು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಇರುವಕ್ಕಿ ಶಿವಮೊಗ್ಗ , ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಮತ್ತು ನಾನಾ ಸಂಘಟನೆಗಳ ಸಹಭಾಗಿತ್ವದಲ್ಲಿ ಜೂನ್ 10 ಮತ್ತು 11 ರಂದು ಎಸ್ ಎಂ ಎಸ್ ಸಮುದಾಯ ಭವನದಲ್ಲಿ ಹಣ್ಣು ಮೇಳ 2023 ಜರುಗಲಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಧನಂಜಯ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೌಲ್ಯವರ್ಧಕ ಹಣ್ಣು ಜನರಿಂದ ನಿರ್ಲಕ್ಷಿತವಾದ ಹಲಸು ಹಣ್ಣಿಗೆ […]

ಕರಾವಳಿ ಜೀವನಶೈಲಿ ವ್ಯವಹಾರ

ಉಡುಪಿ: ಜೂ. 11- ಮಿನಿ ಉದ್ಯೋಗ ಮೇಳ

ಉಡುಪಿ: ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ಹಾಗೂ ರಾಷ್ಟ್ರೀಯ ಪದವಿ ಪೂರ್ವ ವಿದ್ಯಾರ್ಥಿಗಳ, ಪೋಷಕರ ಮತ್ತು ಶಿಕ್ಷಕರ ಸಂಘ ಇವರ ಜಂಟಿ ಆಶ್ರಯದಲ್ಲಿ ಜೂನ್ 11ರಂದು ಬೆಳಿಗ್ಗೆ 10 ಗಂಟೆಯಿಂದ ಕೊಡವೂರು ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಮಿನಿ ಉದ್ಯೋಗ ಮೇಳವನ್ನು ನಡೆಸಲಾಗುವುದು ಎಂದು ಮಿತೇಶ್ ಕುಮಾರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9137386752 ಸಂಖ್ಯೆಯನ್ನು ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಪರಾಧ ಕರಾವಳಿ

ಉಡುಪಿ:  ಎಸೆಸೆಲ್ಸಿ ಪೂರಕ ಪರೀಕ್ಷೆ- ನಿಷೇಧಾಜ್ಞೆ

ಉಡುಪಿ: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪೂರಕ ಪರೀಕ್ಷೆಗಳು ಜೂನ್ 12ರಿಂದ 17ರವರೆಗೆ ಜಿಲ್ಲೆಯ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

ಅಪರಾಧ ಕರಾವಳಿ

ಕಾರ್ಕಳ: ಬಸ್ -ಬೈಕ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಲೂರು: ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದ ಬೈಕ್ ಹಾಗೂ ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್ 23 ವರ್ಷ ಮೃತಪಟ್ಟ ದುರ್ದೈವಿ ಕಾರ್ತಿಕ್ ಬೈಲೂರಿನಿಂದ  ಜಾರ್ಕಳದ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದದ್ದಾರೆ.  ಬೈಕು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಮೃತ ಕಾರ್ತಿಕ್ ಪತ್ನಿ ಹಾಗೂ 10 ತಿಂಗಳ ಮಗುವನ್ನು ಅಗಲಿದ್ದಾರೆ. […]

eMedia Kannada  @2025. All Rights Reserved.