Tag: Karavali

ಕರಾವಳಿ

ಇನ್ನಾ ಗ್ರಾಮ ಪಂಚಾಯತನಲ್ಲಿ ವಿಶ್ವ ಪರಿಸರ ದಿನಾಚರಣೆ.

  ಇನ್ನಾ ಗ್ರಾಮ ಪಂಚಾಯತ್ ಮತ್ತು ಕಾರ್ಕಳ, ಮೂಡುಬಿದ್ರೆ ತಾಲೂಕು ಅರಣ್ಯ ಇಲಾಖೆಗಳ ವತಿಯಿಂದ  ವಿಶ್ವ ಪರಿಸರ ದಿನಾಚರಣೆಯು ಪಂಚಾಯತನ ಗೋಪಾಲ್ ಭಂಡಾರಿ ಸಭಾಂಗಣದಲ್ಲಿ ನಡೆಯಿತು. ಪಂಚಾಯತ್ ಅಧ್ಯಕ್ಷ ಕುಶ ಆರ್ ಮೂಲ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅರಣ್ಯಾಧಿಕಾರಿ ನಾಗೇಶ್ ಎನ್  ಬಿಲ್ಲವ, ಪರಿಸರ ಸರಕ್ಷಣೆ ನಮ್ಮೆಲ್ಲರ ಕರ್ತವ್ಯ. ಪರಿಸರದ ಪ್ರೀತಿ ಬಾಲ್ಯದಿಂದಲೂ ಇರಬೇಕು. ಹಸಿರು ಮನೆ, ಹಸಿರು ಶಾಲೆ, ಹಸಿರು ಗ್ರಾಮಗಳು ಇಂದು ನಮ್ಮ ಅಗತ್ಯವಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ […]

ಕರಾವಳಿ

ಕುಲಾಲ ಸಂಘ(ರಿ.) ಬೋಳ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ-ವಾರ್ಷಿಕ ಮಹಾಸಭೆ

  ಕಾರ್ಕಳ: ನೂರಾರು ಕುಟುಂಬಗಳ ಸದಸ್ಯರು ಒಂದೆಡೆ ಸೇರಿ ವಿಚಾರ ವಿನಿಮಯ ಮಾಡುವಾಗ ಒಮ್ಮತವೇರ್ಪಡದಿರುವುದು ಸಹಜ. ಆದರೆ, ಉತ್ತಮ ಕಾರ್ಯ ಸಿದ್ಧಿಯಾಗಬೇಕಾದರೆ, ಇಂತಹ ಭಿನ್ನಾಭಿಪ್ರಾಯಗಳನ್ನು ಮೂಲದಲ್ಲಿಯೇ ಸರಿಪಡಿಸಿಕೊಂಡು ಏಕತೆಯಿಂದಿದ್ದಲ್ಲಿ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೊಸ್ಮಾರು ಕುಲಾಲ ಸಮಾಜ ಕಲ್ಯಾಣ ಸಂಘದ ಅಧ್ಯಕ್ಷ  ಶ್ರೀ ಪ್ರಮೋದ್ ಕುಲಾಲ್ ಅಭಿಪ್ರಾಯಪಟ್ಟರು‌.  ಅವರು ಕುಲಾಲ ಸಂಘ(ರಿ.) ಬೋಳದ ವತಿಯಿಂದ   ನಡೆದ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಂಭತ್ತನೇ ವರ್ಷದ ವಾರ್ಷಿಕ ಮಹಾಸಭೆಯ ಮುಖ್ಯ ಅತಿಥಿಯಾಗಿ ಮಾತನಾಡಿದರು. ದೈವ ದೇವರ ಆರಾಧನೆ […]

ರಾಜಕೀಯ

ಮಂಗಳವಾರ ಗೃಹಸಚಿವ ಡಾ.ಜಿ.ಪರಮೇಶ್ವರ್ ಉಡುಪಿ, ದ.ಕ ಭೇಟಿ

ಮಂಗಳೂರು : ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಜೂ.6 ಮಂಗಳವಾರದಂದು ಮಂಗಳೂರಿಗೆ ಆಗಮಿಸಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.  ಬೆಳಗ್ಗೆ 8.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ 8.45 ಕ್ಕೆ ಸರ್ಕಿಟ್ ಹೌಸ್‌ಗೆ ತೆರಳುತ್ತಾರೆ.  10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿಗೆ ಭೇಟಿ ನೀಡಿ ವಲಯ ಪರಿಶೀಲನಾ ಸಭೆ ನಡೆಸುವರು.ಮಧ್ಯಾಹ್ನ 12ರಿಂದ 12.30 ರವರೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. 12.30 ಕ್ಕೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸುತ್ತಾರೆ. ಮಧ್ಯಾಹ್ನ […]

ದೇಶ-ವಿದೇಶ ಪ್ರಯಾಣ ರಾಜಕೀಯ

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಮುಂಬಯಿಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಭೇಟಿ

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಮುಂಬಯಿಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಭೇಟಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ  ಗುರ್ಮೆ ಸುರೇಶ್ ಶೆಟ್ಟಿಯವರು ಸೋಮವಾರ ಬೆಳಿಗ್ಗೆ ೧೧ ಗಂಟೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆಯವರನ್ನು   ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು.  ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು ಕ್ಷೇತ್ರಕ್ಕೆ ಗುರ್ಮೆ ಸುರೇಶ್‌ ಶೆಟ್ಟಿಯವರ  ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಗುರ್ಮೆ ಕೃತಜ್ಞತೆ ಸಲ್ಲಿಸಿದರು.  ಕಾಪು ಕ್ಷೇತ್ರ ಸರ್ವಾಂಗೀಣ ರೀತಿಯಲ್ಲಿ ಅಭಿವೃದ್ಧಿ ಹೊಂದುವಂತಾಗಲಿ ಎಂದು […]

ಕರಾವಳಿ

ಪಡು ಕುತ್ಯಾರಿನಲ್ಲಿ ಜುಲೈ 3 ರಿಂದ ಸೆಪ್ಟಂಬರ್ 29 ರ ವರೆಗೆ ಆನೆಗುಂದಿ ಕಾಳಹಸ್ತೇಂದ್ರ ಸ್ವಾಮಿಯವರ 19ನೇ ವರ್ಷದ ಚಾತುರ್ಮಾಸ್ಯ  ವೃತಾಚರಣೆ

  ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರರಾದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 19ನೇ ವರ್ಷದ ಶೋಭಕ್ಕೃತ್ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆಯು 2023 ಜುಲೈ 3 ರಿಂದ ಸೆಪ್ಟಂಬರ್ 29 ರ ವರೇಗೆ ಪಡು ಕುತ್ಯಾರಿನಲ್ಲಿ ನಡೆಯಲಿದೆ. ವರ್ಷಂಪ್ರತಿ ನಡೆಯುವ ಚಾತುರ್ಮಾಸ್ಯ ಪೂರ್ವಭಾವೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇಗುಲಗಳಲ್ಲಿ 2023 ಜೂನ್ 8 ರಿಂದ 29 ರವರೆಗೆ ಅಂಕೋಲಾ, ಕೊಲಕಾಡಿ, ಪಡುಪಣಂಬೂರು, ಹಳೆಯಂಗಡಿ, ಮಂಗಳೂರು, ಮಧೂರು, ಆರಿಕ್ಕಾಡಿ ಕಾರ್ಳೆ,ಬಂಗ್ರ ಮಂಜೇಶ್ವರ, […]

ಕರಾವಳಿ ಕ್ರೀಡೆ

 ಮಾಸ್ಟರ್ ಅಥ್ಲೆಟಿಕ್ ಪಟುಗೆ ಅಮೃತೇಶ್ವರಿ ದೇವಸ್ಥಾನದಲ್ಲಿ ಗೌರವ

 ಕೋಟ: ಮಲೇಷಿಯಾದಲ್ಲಿ  ನಡೆದ ಜೋಹಾರ್ ಸಿಂಗಾಪುರ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕೋಟದ ದಿನೇಶ್ ಗಾಣಿಗ ಒಂದು ಬೆಳ್ಳಿ, ಕಂಚಿನ ಪದಕ ವಿಜೇತರಾಗಿ ಹುಟ್ಟೂರಿಗೆ ಮರಳಿದ್ದಾರೆ. ಈ ಹಿನ್ನಲ್ಲೆಯಲ್ಲಿ ಕೋಟ ಅಮೃತೇಶ್ವರಿ ದೇವಸ್ಥಾನದ ವತಿಯಿಂದ ಸ್ವಾಗತಿಸಿ ಶಾಲು ಹೊದಿಸಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಟ್ರಸ್ಟಿ ಚಂದ್ರ ಪೂಜಾರಿ, ಮಾಜಿ ಟ್ರಸ್ಟಿ ಚಂದ್ರ ಆಚಾರ್ಯ, ಪ್ರದಾನ ಅರ್ಚಕ ಪ್ರಕಾಶ್ ಜೋಗಿ, ಪಂಚವರ್ಣ ಸಂಸ್ಥೆಯ ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ, ಕೋಟ ಹಿಂದು ಜಾಗರಣಾ ವೇದಿಕೆಯ ಮಾಜಿ ಅಧ್ಯಕ್ಷ ಸುರೇಶ್ ಸಮತಾ, […]

ಕರಾವಳಿ ರಾಜಕೀಯ

ಶೋಭಾ ಕರಂದ್ಲಾಜೆಯವರ ಹೇಳಿಕೆ ಕೀಳು ಮಟ್ಟದ್ದಾಗಿದೆ- ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ

ಉಡುಪಿ: ಭಾರತವನ್ನು ಅಸ್ಥಿರಗೊಳಿಸಲು ಬಯಸುತ್ತಿರುವ ವಿದೇಶಿ ಶಕ್ತಿಗಳು ದೆಹಲಿಯಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆಗೆ ಆರ್ಥಿಕ ನೆರವು ನೀಡುತ್ತಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಹೇಳಿಕೆ ಕೀಳು ಮಟ್ಟದ್ದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದೆಯವರು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಬರುವ ವಿಚಾರವನ್ನು ಜನರ ಮುಂದೆ ಹೇಳಿಕೆಯಾಗಿ ನೀಡಬಾರದು. ಮೊದಲು ಕೂಲಂಕಷವಾಗಿ ಚರ್ಚೆ ಮಾಡಿ ನಂತರ ಹೇಳಿಕೆಯನ್ನು ಕೊಡಬೇಕು.    ಕೇಂದ್ರದ ಎಲ್ಲ ತನಿಖಾ ಸಂಸ್ಥೆಗಳು ಇವರ […]

ಕರಾವಳಿ ಜೀವನಶೈಲಿ

ಪರಿಸರ ಉಳಿದರೆ ಮಾತ್ರ ಮನುಕುಲದ ಶ್ರೀರಕ್ಷೆ ಸಾಧ್ಯ- ಅಜಿತ್ ದೇವಾಡಿಗ

ಕೋಟ: ಪ್ರಕೃತಿ ಉಳಿದರೆ ಮಾತ್ರ ಮನುಕುಲ ಉಳಿಯಬಹುದು, ಆದರೆ ಅದೇ ಪ್ರಕೃತಿಯ ಮೇಲೆ ನಿರಂತರ ಅತ್ಯಾಚಾರ ಎಸೆದರೆ ಮನುಕುಲದ ಶ್ರೀರಕ್ಷೆ ಹೇಗೆ ಸಾಧ್ಯ ಎಂದು ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಪ್ರಶ್ನಿಸಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಂಗಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ 166ನೇ ವಾರದ ಪರಿಸರಸ್ನೇಹಿ ಅಭಿಯಾನದ ಹಿನ್ನಲ್ಲೆಯಲ್ಲಿ ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಗೀತಾನಂದ ಫೌಂಡೇಶನ್ ಮಣೂರು, ಕೋಟ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್, ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್, […]

ಕರಾವಳಿ ಫ್ಯಾಷನ್

ಮಿಸೆಸ್ ಇಂಡಿಯಾ-2023: ಅಂತಿಮ ಸುತ್ತಿಗೆ ಆಯ್ಕೆಯಾದ ಉಡುಪಿಯ ದೀಪ್ತಿ ಹೆಗ್ಡೆ

ಕಾರ್ಕಳ – ಉಡುಪಿ:  2023ರ ಹೌಟ್ ಮೊಂಡೆ ಮಿಸಸ್ ಇಂಡಿಯಾ ಅಂತಿಮ ಸುತ್ತಿಗೆ ಉಡುಪಿ ನಿವಾಸಿ ಶ್ರೀಮತಿ ದೀಪ್ತಿ ಹೆಗ್ಡೆ ಆಯ್ಕೆಯಾಗಿದ್ದಾರೆ. ಈ ಮೂಲಕ ತುಳುನಾಡಿಗೆ ಹೊಸ ಗರಿ ಮೂಡಿಸಿದಂತಾಗಿದೆ. ಯುವತಿಯರಿಗೆ ಮಿಸ್ ಯೂನಿವರ್ಸ್ ಇದ್ದಂತೆಯೇ ಮಹಿಳೆಯರಿಗೆ ಮಿಸಸ್ ಯೂನಿವರ್ಸ್ ಆಯೋಜನೆ ಮಾಡಲಾಗುತ್ತದೆ. ಕಾರ್ಕಳದ ಕಡ್ತಲ ಕಂಟೆಬೆಟ್ಟು ಸಂತೋಷ್ ಹೆಗ್ಡೆಯವರ ಪತ್ನಿ ದೀಪ್ತಿ ಹೆಗ್ಡೆರವರು ತಮ್ಮ 6 ವರ್ಷದ ಮಗಳು ಸಂಸ್ಕೃತಿ ಹೆಗ್ಡೆಯೊಂದಿಗೆ ಈ ತಿಂಗಳಲ್ಲಿ ವಿದೇಶದಲ್ಲಿ ನಡೆಯುವ ಸ್ಪರ್ಧೆಯಲ್ಲಿ ದಕ್ಷಿಣ ಭಾರತ ವಲಯವನ್ನು ಪ್ರತಿನಿಧಿಸಲಿದ್ದಾರೆ. ಇವರು […]

ಕರಾವಳಿ ವ್ಯವಹಾರ

ಇಂದಿನಿಂದ  ಎರಡು ತಿಂಗಳು ಮರಳುಗಾರಿಕೆ ನಿಷೇಧ

ಉಡುಪಿ: ಜಿಲ್ಲೆಯಲ್ಲಿ ಮಳೆಗಾಲ ಅವಧಿ ಮೀನು ಮರಿ ಉತ್ಪಾದನೆ ಕಾರಣಕ್ಕೆ ನಾನ್‌ ಸಿಆರ್‌ಝಡ್‌ ಮರಳುಗಾರಿಕೆಗೆ ಜೂ. 5ರಿಂದ ಅಕ್ಟೋಬರ್‌ 15ರ ವರೆಗೆ ನಿಷೇಧ ಇರಲಿದೆ. ಸಿಆರ್‌ಝಡ್‌ ವಲಯದ ಮರಳುಗಾರಿಕೆ ಜೂನ್‌, ಜುಲೈ ಎರಡು ತಿಂಗಳು ನಿರ್ಬಂಧ ಇರಲಿದೆ. ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಪದ್ಧತಿಯಲ್ಲಿ ಮರಳು ತೆಗೆಯಲು ಸುಪ್ರೀಂ ಕೋರ್ಟ್‌ ಆದೇಶವಾದರೂ ಮಳೆಗಾಲ ಮುಗಿಯುವವರೆಗೆ ಕಾಯಬೇಕಿದೆ. ಸಿಆರ್‌ಝಡ್‌ ಮರಳು ದಿಬ್ಬ ತೆರವಿಗೆ ನಿಷೇಧ ಹೇರಿದ್ದ ರಾಷ್ಟ್ರೀಯ ಹಸುರು ಪ್ರಾಧಿಕಾರದ (ಎನ್‌ಜಿಟಿ) ಆದೇಶದ ವಿರುದ್ಧ ರಾಜ್ಯ ಸರಕಾರ ಸುಪ್ರೀಂಕೋರ್ಟ್‌ಗೆ ಮೊರೆ […]

eMedia Kannada  @2025. All Rights Reserved.