Tag: katapadi

ಅಪರಾಧ

ಕಟಪಾಡಿ ಕಟ್ಟಡ ಕಾರ್ಮಿಕನ ಕೊಲೆ ಪ್ರಕರಣದ ಆರೋಪಿಯ ಬಂಧನ

ಕಟಪಾಡಿ ಕಟ್ಟಡ ಕಾರ್ಮಿಕನ ಕೊಲೆ ಪ್ರಕರಣದ ಆರೋಪಿಯ ಬಂಧನ ಉಡುಪಿ: ಕಟಪಾಡಿಯಲ್ಲಿ ನಡೆದ ಕಟ್ಟಡ ಕಾರ್ಮಿಕ ಗಣೇಶ್ ಕೊಲೆ ಪ್ರಕರಣದ ಆರೋಪಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಓಡಿಸ್ಸಾ ಮೂಲದ ಕಾರ್ಮಿಕರಾದ ಅಕನ್ ಎಂದು ಗುರುತಿಸಲಾಗಿದೆ. ಜುಲೈ 17 ರಂದು ಕಾಪು ಠಾಣಾ ವ್ಯಾಪ್ತಿಯ ಕಟಪಾಡಿ ಹಳೇ ಸಂತೆ ಮಾರ್ಕೆಟ್ ಬಳಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಓಡಿಸ್ಸಾ ಮೂಲದ ಕಾರ್ಮಿಕರಾದ ಅಕನ್ ಮತ್ತು ಗಣೇಶ್ ಎಂಬವರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದು, ಅಕನ್ ಗಣೇಶ್ ಸೇತಿಗೆ […]

ಅಪರಾಧ

ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹುಲ್ಲು ಕಟ್ಟು ಮಾಡುತ್ತಿರುವವರಿಗೆ ಪಿಕಪ್ ವಾಹನ ಡಿಕ್ಕಿ ಮೂವರಿಗೆ ಗಾಯ.

ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹುಲ್ಲು ಕಟ್ಟು ಮಾಡುತ್ತಿರುವವರಿಗೆ ಪಿಕಪ್ ವಾಹನ ಡಿಕ್ಕಿ ಮೂವರಿಗೆ ಗಾಯ. ಕಟಪಾಢಿ: ನವಯುಗ ಕಂಪನಿಯ ಹುಲ್ಲು ಕಟ್ಟಿಂಗ್ ಮಾಡುವವರಿಗೆ ಮಹೇಂದ್ರ ಪಿಕಪ್ ವಾಹನ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಸರ್ವಿಸ್ ತಿರುವಿನಲ್ಲಿ ಮಂಗಳವಾರ ಮಧ್ಯಾಹ್ನ ಘಟಿಸಿದೆ.  ಗಾಯಗೊಂಡವರು ರಾಯಚೂರು ಜಿಲ್ಲೆಯವರೆಂದು ತಿಳಿದು ಬಂದಿದೆ. ಅವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಪಿಕಪ್ ಚಾಲಕನೂ ಗಾಯಗೊಂಡಿದ್ದಾಗಿ ತಿಳಿದುಬಂದಿದೆ.  ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ […]

ಅಪರಾಧ

ಕಟಪಾಡಿ: ಕಾರ್ಮಿಕರಿಬ್ಬರ ನಡುವಿನ ಗಲಾಟೆ – ಒರ್ವನ ಕೊಲೆಯಲ್ಲಿ ಅಂತ್ಯ

ಕಟಪಾಡಿ: ಕಾರ್ಮಿಕರಿಬ್ಬರ ನಡುವಿನ ಗಲಾಟೆ – ಒರ್ವನ ಕೊಲೆಯಲ್ಲಿ ಅಂತ್ಯಉಡುಪಿ: ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಸೋಮವಾರ ಸಂಜೆ ಕಟಪಾಡಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನುಕಟಪಾಡಿ-ಶಿರ್ವ ರಸ್ತೆಯ ಬಳಿಯಲ್ಲಿ ಕಟ್ಟಡ ಕಾಮಗಾರಿ ನಿರ್ವಹಿಸುತ್ತಿದ್ದ ಓರಿಸ್ಸಾ ಮೂಲದ ಗಣೇಶ್ (50) ಎಂದು ಗುರುತಿಸಲಾಗಿದೆ. ಹತ್ಯೆಗೆ ಕಾರಣನಾದ ಕಾರ್ಮಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ ಕೆಲಸದ ವಿಷಯದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದ್ದು, ಇಬ್ಬರೂ ಹೊಡೆದಾಟ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ […]

ಮನೋರಂಜನೆ

ಕಟಪಾಡಿಯ ಪೇಟೆಬೆಟ್ಟು ಕೊರಗಜ್ಜ ಸನ್ನಿಧಿಯಲ್ಲಿ  ಬಂದರ್ ಕನ್ನಡ ಚಲನಚಿತ್ರದ ಚಿತ್ರೀಕರಣಕ್ಕೆ  ಚಾಲನೆ

ಕಟಪಾಡಿಯ ಪೇಟೆಬೆಟ್ಟು ಭಗವಾನ್ ಶ್ರೀ ಬಬ್ಬುಸ್ವಾಮಿ, ಶ್ರೀ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ  ಬಂದರ್ ಕನ್ನಡ ಚಲನಚಿತ್ರದ ಚಿತ್ರೀಕರಣಕ್ಕೆ ಸೋಮವಾರ ಬೆಳಿಗ್ಗೆ   ಮಾಜಿ ಜಿ.ಪಂ. ಸದಸ್ಯೆ ಗೀತಾಂಜಲಿ ಸುವರ್ಣ ಕ್ಲಾಪ್ ಮಾಡುವ ಮೂಲಕ ಚಾಲನೆಯನ್ನು ನೀಡಿ ಶುಭವನ್ನು ಹಾರೈಸಿದರು.  ಶ್ರೀ ಸ್ವಾಮಿ ಕೊರಗಜ್ಜ ಸನ್ನಿಧಿಯ ಮುಖ್ಯಸ್ಥ ತುಕಾರಾಮ ಎಸ್ ಉರ್ವ ಪೂಜೆಯನ್ನು ನಡೆಸಿದ್ದು, ಸ್ವರ್ಣೋದ್ಯಮಿ, ವಿಶ್ವಕರ್ಮ ಒಕ್ಕೂಟದ ಮಾಜಿ ಅಧ್ಯಕ್ಷ ಅಲೆವೂರು ಯೋಗೀಶ್ ಆಚಾರ್ಯ ಬ್ಯಾನರ್ ಅನಾವರಣಗೊಳಿಸಿದರು.  ಈ ಸಂದರ್ಭ ಗೀತಾಂಜಲಿ ಸುವರ್ಣ ಮಾತನಾಡಿ, ಚಿತ್ರ ನಿರ್ಮಾಣ ತಂಡದಲ್ಲಿ […]

ಕರಾವಳಿ

ಕಟಪಾಡಿಯ ತ್ರಿಶಾ ವಿದ್ಯಾ ಪಿ.ಯು ಕಾಲೇಜು: ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮ.

ಕಟಪಾಡಿಯ ತ್ರಿಶಾ ವಿದ್ಯಾ ಪಿ.ಯು ಕಾಲೇಜು: ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮ. ಉಡುಪಿ: “ಸತತ ಪರಿಶ್ರಮ ಇದ್ದಾಗ ಮಾತ್ರ ಗೆಲುವು ಸಾಧ್ಯ. ಪ್ರಸ್ತುತ ಜಗತ್ತಿನಲ್ಲಿ ಯಾವುದೇ ಕ್ಷೇತ್ರದಲ್ಲಾದರೂ ಅವಕಾಶಗಳು ಬಹಳಷ್ಟಿವೆ. ಅದನ್ನು ಸಾಧಿಸಲು ಛಲ ಹಾಗೂ ಪ್ರಯತ್ನ ಬೇಕು. ಶಿಕ್ಷಣ ಮಾತ್ರ ವಿದ್ಯಾರ್ಥಿಯ ಜೀವನವನ್ನು ಬೆಳಗಿಸುವಂತದ್ದು. ಜೊತೆಗೆ ಬದಲಾವಣೆಗಳಿಗೆ ಹೊಂದಿಕೊಂಡು ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತೇವೆ ಅನ್ನುವುದು ನಿರ್ಣಾಯಕ. ದೈಹಿಕ ಹಾಗೂ ಮಾನಾಸಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ವಿದ್ಯಾರ್ಥಿಯು ಪ್ರಬುದ್ಧನಾಗಲು ಸಾಧ್ಯ” ಎಂದು ತ್ರಿಶಾ ಸಂಸ್ಥೆಯ ಸಂಸ್ಥಾಪಕ ಸಿ. ಎ  […]

ಪ್ರಚಲಿತ ರಾಜಕೀಯ

ಕಾಪು ಶಾಸಕ  ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಕಟಪಾಡಿ ಗ್ರಾಮ ಪಂಚಾಯತಿಯಲ್ಲಿ ವಿವಿಧ ಸವಲತ್ತು ವಿತರಣೆ

ಕಾಪು ಶಾಸಕ ಗುರ್ಮೆ ಸುರೇಶ್ ಯವರು ಕಟಪಾಡಿ ಗ್ರಾಮ ಪಂಚಾಯತಿಯ ಅಬ್ಬಕ್ಕ ಹೆಗ್ಗಡ್ತಿ ಸಭಾ ಭವನದಲ್ಲಿ ಇಂದು   ಸಾರ್ವಜನಿಕರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಸಭೆಯಲ್ಲಿ ಶಾಸಕರು ಕೇರಾ ಸುರಕ್ಷಾ ವಿಮಾ ಪತ್ರ,   ಸಾಮಾಜಿಕ ಭದ್ರತಾ ಸೌಲಭ್ಯಗಳಾದ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಆದೇಶ ಪತ್ರವನ್ನು ವಿತರಿಸಿ ಸಾರ್ವಜನಿಕರಿಂದ  ಅಹವಾಲುಗಳನ್ನು ಸ್ವೀಕರಿಸಿದರು.  ಕಾಪು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಕಟಪಾಡಿ ಗ್ರಾಮ ಪಂಚಾಯತ್ ವತಿಯಿಂದ  ಅಭಿನಂದನೆ ಸಲ್ಲಿಸಲಾಯಿತು.   ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ […]

ಅಪರಾಧ

ಕಟಪಾಡಿಯಲ್ಲಿ ಬಸ್ಸು – ಬೈಕ್ ನಡುವೆ ಅಫಘಾತ: ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಬೈಕ್ ಮತ್ತು ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನ ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಎಂದು ಗುರುತಿಸಲಾಗಿದೆ. ಇವರು ಮಲ್ಲಿಗೆ ಹೂವಿನ ವ್ಯಾಪಾರವನ್ನು ಮಾಡುತ್ತಿದ್ದರು. ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರ ಸರ್ವಿಸ್ ರಸ್ತೆಯಲ್ಲಿ ಉಡುಪಿಯಿಂದ ಮಂಗಳೂರು ಬಸ್ಸು ಇಕ್ಬಾಲ್ ಅವರು ಬೈಕಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ […]

eMedia Kannada  @2025. All Rights Reserved.