ಮಜೂರು ಗ್ರಾಮ ಪಂಚಾಯತಿಯ ತ್ರೈಮಾಸಿಕ ಕೆಡಿಪಿ ಸಭೆ (KDP Meeting at Majooru Grama Panchayath)
ಮಜೂರು ಗ್ರಾಮ ಪಂಚಾಯತಿಯ ತ್ರೈಮಾಸಿಕ ಕೆಡಿಪಿ ಸಭೆ (Majooru) ಮಜೂರು: ಮಜೂರು ಗ್ರಾಮ ಪಂಚಾಯತಿಯ 2024 ನೇ ಸಾಲಿನ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮ (20 ಅಂಶ) ಪ್ರಗತಿ ಪರಿಶೀಲನಾ ತ್ರೈಮಾಸಿಕ ಕೆಡಿಪಿ ಸಭೆಯು ಮಜೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರುರವರು ಅಧ್ಯಕ್ಷತೆ ವಹಿಸಿದ್ದರು. ಹಲವಾರು ಇಲಾಖಾಧಿಕಾರಿಗಳು ಗೈರು ಹಾಜರಾಗಿರುವುದರಿಂದ ಗ್ರಾಮದ ಪ್ರಗತಿಯು ಸಂಪೂರ್ಣವಾಗದೆ ಅಭಿವೃದ್ದಿ ಕೆಲಸಗಳು ಕುಂಠಿತವಾಗಿರುತ್ತದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಿಷಾದ ವ್ಯಕ್ತಪಡಿಸಿದರು. […]