Tag: lakshmi hebbalkar

ಪ್ರಚಲಿತ

ಶಕ್ತಿ ಯೋಜನೆಯು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ನೆರವಾಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿಯು ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ  ಉಡುಪಿ, ಜೂನ್ 11 : ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆಯು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ನೆರವಾಗಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ಇಂದು ಉಡುಪಿಯು […]

ಕರಾವಳಿ ಪ್ರಚಲಿತ

breaking news ಯೋಜನೆ ಅನುಷ್ಠಾನದಲ್ಲಿ ಅಶಿಸ್ತು, ವಿಳಂಬ ಸಹಿಸುವುದಿಲ್ಲ ಉಡುಪಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

 ಉಡುಪಿ, ಜೂನ್ 11 : ಜಿಲ್ಲೆಯ ಯಾವುದೇ ಇಲಾಖೆಯಲ್ಲಿ ಸರಕಾರದ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಹಾಗೂ ಆಶಿಸ್ತು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು. ಅವರು ಭಾನುವಾರ ಸಂಜೆ ಉಡುಪಿಯ ತಾಲೂಕು ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲಿ […]

ಕರಾವಳಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಭೇಟಿ ಶ್ರೀಕೃಷ್ಣಮಠಕ್ಕೆ,ಉಡುಪಿ ಜಿಲ್ಲಾ ಉಸ್ತುವಾರಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಶ್ರೀಮತಿ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ರವರು ಭಾನುವಾರ ಬೆಳಿಗ್ಗೆ ಆಗಮಿಸಿ ಶ್ರೀ ಕೃಷ್ಣನ  ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೃಷ್ಣಮೂರ್ತಿ ಭಟ್, ಉದಯಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಪ್ರಚಲಿತ ರಾಜಕೀಯ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ ಅಂತಿಮವಲ್ಲ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ ಅಂತಿಮವಲ್ಲ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಕರಡು ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆ ಅರ್ಜಿ ಇನ್ನೂ ಅಂತಿಮವಾಗಿಲ್ಲ, ಅದರಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದ್ದು, ಅಂತಿಮ ಅರ್ಜಿಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, […]

ರಾಜಕೀಯ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ – ದ.ಕ. ಜಿಲ್ಲೆಗೆ ಸಚಿವ ದಿನೇಶ್ ಗುಂಡೂರಾವ್ , ಉಡುಪಿ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆಗೆ ಡಾ. ಜಿ ಪರಮೇಶ್ವರ್, ಗದಗ ಜಿಲ್ಲೆಗೆ ಹೆಚ್.ಕೆ ಪಾಟೀಲ್, ಬೆಂಗಳೂರು ಗ್ರಾಮಾಂತರಕ್ಕೆ ಕೆ.ಹೆಚ್ ಮುನಿಯಪ್ಪ, ರಾಮನಗರಕ್ಕೆ ರಾಮಲಿಂಗಾರೆಡ್ಡಿ, ಚಿಕ್ಕಮಗಳೂರಿಗೆ ಕೆಜೆ ಜಾರ್ಜ್, ವಿಜಯಪುರಕ್ಕೆ ಎಂ.ಬಿ ಪಾಟೀಲ್, ಮೈಸೂರಿಗೆ ಹೆಚ್.ಸಿ ಮಹದೇವಪ್ಪ, ಬೆಳಗಾವಿಗೆ ಸತೀಶ್ ಜಾರಕಿಹೊಳಿ, ಕಲಬುರ್ಗಿಗೆ ಪ್ರಿಯಾಂಕಾ ಖರ್ಗೆ, ಹಾವೇರಿಗೆ ಶಿವಾನಂದ ಪಾಟೀಲ್, […]

eMedia Kannada  @2025. All Rights Reserved.