Tag: laxmi hebbalkar

ಕರಾವಳಿ ವಿಡಿಯೋ

ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ

ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ  ಉಡುಪಿ: ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ 77ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಗೈದರು.   ಬಳಿಕ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವ ಸಂದೇಶವನ್ನು ನೀಡಿದರು.  ಇದಕ್ಕೂ ಮುನ್ನ ಆಕರ್ಷಕ ಪಥಸಂಚಲನ ನಡೆಯಿತು. ನಮ್ಮ ಸರ್ಕಾರವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚಿನ ಮಹತ್ವ ನೀಡಲಿದೆ. ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ನಡೆಯುವ ದಬ್ಬಾಳಿಕೆ, ಸಾಮಾಜಿಕ ಜಾಲತಾಣಗಳ ಮೂಲಕ […]

ಕರಾವಳಿ ಜೀವನಶೈಲಿ ವಿಡಿಯೋ

ಸಿಎಂ ಸಿದ್ದರಾಮಯ್ಯನವರಿಂದ ಬನ್ನಂಜೆಯಲ್ಲಿರುವ ಸರ್ಕಾರಿ ಹಾಸ್ಟೆಲ್‌ ವೀಕ್ಷಣೆ

ಸಿಎಂ ಸಿದ್ದರಾಮಯ್ಯನವರಿಂದ ಬನ್ನಂಜೆಯಲ್ಲಿರುವ ಸರ್ಕಾರಿ ಹಾಸ್ಟೆಲ್‌ ವೀಕ್ಷಣೆ  ಉಡುಪಿ: ಜಿಲ್ಲೆಯಲ್ಲಾದ ಮಳೆ ಹಾನಿ ಪ್ರದೇಶಗಳಿಗೆ ಇಂದು(ಮಂಗಳವಾರ) ಸಿಎಂ ಸಿದ್ದರಾಮಯ್ಯನವರು ಭೇಟಿ ನೀಡಲು ಆಗಮಿಸಿದ್ದಾರೆ.  ಈ ವೇಳೆ ಉಡುಪಿ ಜಿಲ್ಲೆಯ ಬನ್ನಂಜೆಯಲ್ಲಿರುವ ಸರ್ಕಾರಿ ಹಾಸ್ಟೆಲ್‌ ಸಿಎಂ ದಿಢೀರ್ ಭೇಟಿ ನೀಡಿದ್ದು, ವಿದ್ಯಾರ್ಥಿನಿಯರ ಜೊತೆ ಸಿಎಂ ಮಾತುಕತೆ ನಡೆಸಿದ್ದಾರೆ.  ಹೌದು,’ಗೃಹಲಕ್ಷ್ಮೀ ಯೋಜನೆ ಬಗ್ಗೆ ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿದ ಸಿಎಂ, ‘ಈ ಯೋಜನೆಯಿಂದ ನಿಮಗೆ ಹಣ ಸಿಗುವುದಿಲ್ಲ, ಬದಲಾಗಿ ನಿಮ್ಮ ಅಮ್ಮನಿಗೆ ಹಣ ಸಿಗುತ್ತದೆ ಎಂದಿದ್ದಾರೆ. ಇದೇ ವೇಳೆ ‘ಡಿಗ್ರಿ […]

ಕರಾವಳಿ ರಾಜಕೀಯ

ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ಉದಾಸೀನ ತೋರಿಸಿದರೆ ಕಠಿಣ ಕ್ರಮ – ಸಿಎಂ ಎಚ್ಚರಿಕೆ

ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ಉದಾಸೀನ ತೋರಿಸಿದರೆ ಕಠಿಣ ಕ್ರಮ – ಸಿಎಂ ಎಚ್ಚರಿಕೆ ಉಡುಪಿ: ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ಉದಾಸೀನ ತೋರಿಸಿದರೆ ಜನರಿಗೆ ಸ್ಪಂದಿಸದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲ. ಜನ ಸ್ಪಂದನೆಗೆ ಸಿದ್ದರಿಲ್ಲದವರು ಸ್ಥಾನ ತ್ಯಾಗ ಮಾಡಿ. ಜನಸ್ಪಂದನೆಗೆ ಸಾಕಷ್ಟು ಅಧಿಕಾರಿಗಳು ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಅವರು ಮಂಗಳವಾರ ಉಡುಪಿ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ […]

ಕರಾವಳಿ ರಾಜಕೀಯ

ಉಡುಪಿ ಜಿಲ್ಲೆ ಗಡಿ ಭಾಗ ಹೆಜಮಾಡಿಯಲ್ಲಿ ಮುಖ್ಯಮಂತ್ರಿಗಳಿಗೆ ಅದ್ದೂರಿ ಸ್ವಾಗತ

ಉಡುಪಿ ಜಿಲ್ಲೆ ಗಡಿ ಭಾಗ ಹೆಜಮಾಡಿಯಲ್ಲಿ ಮುಖ್ಯಮಂತ್ರಿಗಳಿಗೆ ಅದ್ದೂರಿ ಸ್ವಾಗತ ಹೆಜಮಾಡಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಉಡುಪಿ ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಂಗಳವಾರ ಉಡುಪಿ ಜಿಲ್ಲಾ ಗಡಿ ಭಾಗ ಹೆಜಮಾಡಿಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿಗಳು ಕಾರಿನಿಂದ ಇಳಿಯುತ್ತಿದ್ದಂತೆ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಎಸ್‌ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ಹೂ ಗುಚ್ಚದೊಂದಿಗೆ ಸ್ವಾಗತಿಸಿದರು.  ಇದೇ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪರವಾಗಿ ಜಿಲ್ಲಾ […]

ಕರಾವಳಿ ವಿಡಿಯೋ

ಪಡುಬಿದ್ರಿಯಲ್ಲಿ ಕಡಲು ಕೊರೆತ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ:  ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಮಾಂಕಾಳ ವೈಧ್ಯ ಉಪಸ್ಥಿತಿ

ಪಡುಬಿದ್ರಿಯಲ್ಲಿ ಕಡಲು ಕೊರೆತ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ:  ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಮಾಂಕಾಳ ವೈಧ್ಯ ಉಪಸ್ಥಿತಿ ಪಡುಬಿದ್ರಿ: ಈ ಬಾರಿಯ ಮಳೆ ಗಾಳಿಗೆ ಪಡುಬಿದ್ರಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಕೋಟ್ಯಾಂತರ ರುಪಾಯಿ ನಷ್ಟ ಸಂಭವಿಸಿದೆ. ಆಪ್ರಯುಕ್ತ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಬೇಟಿ ನೀಡಿ ಕಡಲ್ಕೊರೆತ ವೀಕ್ಷಿಸಿದರು, ಸಿಎಂ ರೊಂದಿಗೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಉಪಸ್ಥಿತರಿದ್ದರು.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ,   ಕಡಲು ಕೊರೆತ ಮಳೆಗಾಲದಲ್ಲಿ ನಿರಂತರ ನಡೆಯುತ್ತದೆ. […]

ಕರಾವಳಿ ವಿಡಿಯೋ

ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ 28 ಕೋಟಿ ನಷ್ಟ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ 28 ಕೋಟಿ ನಷ್ಟ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರು: ಉಡುಪಿ ಜಿಲ್ಲೆಯಾದ್ಯಂತ ಮಳೆ‌ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ […]

ಕರಾವಳಿ ಪ್ರಚಲಿತ

ಹಠಾತ್ ಪ್ರವಾಹ ಮುನ್ಸೂಚನೆ’ – ಎಚ್ಚರಿಕೆ ವಹಿಸಲು ಸಚಿವೆ ಹೆಬ್ಬಾಳಕರ್ ಸೂಚನೆ

ಬೆಂಗಳೂರು, ಜು 27 : ಹವಾಮಾನ ಇಲಾಖೆಯು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ (ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯಿಂದಿರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಈ ಕುರಿತು ಉಡುಪಿಯ ಜಿಲ್ಲಾಧಿಕಾರಿ ಹಾಗೂ ಇತರ ಹಿರಿಯ ಅಧಿಕಾರಿಗಳಿಗೆ ಸಚಿವರು ಸಂದೇಶ ರವಾನಿಸಿದ್ದಾರೆ. ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಾಗಿರಿ, ಉತ್ತರ ಹಾಗೂ ದಕ್ಷಿಣ […]

ಕರಾವಳಿ

ಕಡಲ ಕೊರೆತ ತಡೆಗೆ ಶಾಶ್ವತ ಪರಿಹಾರ ಪಡುಬಿದ್ರಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.

ಶನಿವಾರ ಪಡುಬಿದ್ರೆಯ ಕಾಡಿ ಪಟ್ಣದ ಸಮುದ್ರ ಕೊರೆತ ಪ್ರದೇಶ ಕ್ಕೆ  ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗಮಿಸಿ ಪರಿಶೀಲಿಸಿದ ಬಳಿಕ ಮಾಧ್ಯಮ  ಪ್ರತಿನಿಧಿಗಳೊಂದಿಗೆ ಮಾತನಾಡಿದರು .   ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ ಕೊರೆತ  ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.  ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಸಮುದ್ರ ಕೊರೆತ ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ  […]

ಕರಾವಳಿ

ಪಡುಬಿದ್ರಿಯಲ್ಲಿ ತೀವ್ರಗೊಂಡ ಕಡಲ್ಕೊರೆತ: ಮೀನುಗಾರಿಕಾ ಗೋದಾಮು, ಸಂಗ್ರಹಿಸಿಟ್ಟ ಸೀಮೆ ಎಣ್ಣೆ ಸಹಿತ ೫ ಲಕ್ಷದ ಸೊತ್ತು ನಷ್ಠ

ಕಳೆದ ೩ ದಿನಗಳಿಂದ ತೀವ್ರ ಸಮುದ್ರ ಕೊರೆತ ಉಂಟಾಗಿದ್ದ ಪಡುಬಿದ್ರಿ–ಕಾಡಿಪಟ್ಣ ಬೀಚ್ ಬಳಿ ಶುಕ್ರವಾರ ಸಮುದ್ರದ ಉಗ್ರ ಸ್ವರೂಪದ ಅಲೆಗಳು ಕಾಡಿಪಟ್ಣ ಕೈರಂಪಣಿ ಫಂಡಿನ ಗೋದಾಮನ್ನು ಅಪೋಶನಗೈದಿದೆ. ಕಾಡಿಪಟ್ಣ ಕೈರಂಪಣಿ ಫಂಡಿನ ಗೋದಾಮು ಒಳಗಡೆ ಸೀಮೆ ಎಣ್ಣೆ ಸಂಗ್ರಹದ ಕಾಂಕ್ರೀಟ್ ಟ್ಯಾಂಕ್ ಸಹಿತ ಸುಮಾರು ರೂ.೫ಲಕ್ಷದ ಸೊತ್ತುಗಳು ಸಮುದ್ರ ಪಾಲಾಗಿದೆ ಎಂದು ಸ್ಥಳೀಯ ಮೀನುಗಾರರು ಅವಲತ್ತುಕೊಂಡಿದ್ದಾರೆ.  ಕೊರೆತ ಸ್ಥಳದ ಪಕ್ಕದಲ್ಲೇ ಮೀನುಗಾರಿಕಾ ರಸ್ತೆ ಇದೆ. ಶೀಘ್ರ ತಡೆಗೋಡೆ ನಿರ್ಮಾಣ ಮಾಡದಿದ್ದಲ್ಲಿ ಮೀನುಗಾರಿಕಾ ರಸ್ತೆಯೂ ಸಮುದ್ರ ಪಾಲಾಗುವ ಭೀತಿ […]

eMedia Kannada  @2025. All Rights Reserved.