ಮಾಣಿಲ ಶ್ರೀಧಾಮದಲ್ಲಿ 48 ದಿನಗಳ ವರಮಹಾಲಕ್ಷ್ಮೀ ವ್ರತಾಚರಣೆ ಪೂರ್ವಭಾವಿ ಸಭೆ ಆರಾಧನೆ, ಆಧ್ಯಾತ್ಮಿಕ ಚಿಂತನೆಯಿಂದ ಆತ್ಮೋನ್ನತಿ: ಶ್ರೀ ಮೋಹನದಾಸ ಸ್ವಾಮೀಜಿ (Mangaluru) ಮಂಗಳೂರು: ಆರಾಧನೆ, ಆಧ್ಯಾತ್ಮಿಕ ಚಿಂತನೆಯಿಂದ ಆತ್ಮೋನ್ನತಿ ಸಾಧ್ಯ. ಭಜನೆ, ಧ್ಯಾನಗಳಿಂದ ಮನಸು ಪ್ರಫುಲ್ಲವಾಗಿ ನೆಮ್ಮದಿ ಪ್ರಾಪ್ತವಾಗುತ್ತದೆ ಎಂದು ಮಾಣಿಲ ಶ್ರೀಧಾಮ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಮಾಣಿಲ ಶ್ರೀಧಾಮದಲ್ಲಿ ನಡೆಯಲಿರುವ 27ನೇ ವರ್ಷದ 48 ದಿನಗಳ ವರಮಹಾಲಕ್ಷ್ಮೀ ಆಚರಣೆ ಬಗ್ಗೆ ಜೂ. 14ರ ಭಾನುವಾರ ನಡೆದ ಪೂರ್ವಭಾವಿ […]
ಬೆಳ್ಮಣ್ : ಕುಂಭ ನಿಧಿ ಕ್ರೆಡಿಟ್ ಕೋ–ಸೊಸೈಟಿಯ ಒಕ್ಕೂಟದ ಉದ್ಘಾಟನೆ, ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮ ಉದ್ಘಾಟಿಸಿದ ಮಾಣಿಲ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ (Belman) ಬೆಳ್ಮಣ್ : ಬೆಳ್ಮಣ್ ಕುಂಭನಿಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಮತ್ತು ಸ್ವಸಹಾಯ ಸಂಘಗಳ ಒಕ್ಕೂಟದ ಉದ್ಘಾಟನೆ ಕುಲಾಲ ಭವನ ನಾನಿಲ್ತಾರ್ ಮುಲ್ಲಡ್ಕ ಮುಂಡ್ಕೂರಿನಲ್ಲಿ ಜರಗಿತು. ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ತಮ್ಮ […]
ಕಟೀಲು: ಯಕ್ಷಗಾನ ಮಂಡಳಿಯ ಆರಂಭೋತ್ಸವ, ಏಳನೇ ಮೇಳದ ಪಾದಾರ್ಪಣೆ ಪ್ರಹ್ಲಾದ್ ಜೋಷಿಯವರಿಂದ ಬೆಳ್ಳಿ ಬಂಗಾರದ ಪರಿಕರಗಳ ಮೆರವಣಿಗೆಗೆ ಚಾಲನೆ (Kateelu) ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರಂಭೋತ್ಸವ ಮತ್ತು ಏಳನೇ ಮೇಳದ ಪಾದಾರ್ಪಣೆ ಕಾರ್ಯಕ್ರಮದ ಅಂಗವಾಗಿ ಬಜಪೆಯಿಂದ ಕಟೀಲುವರೆಗೆ ದೇವರ ಬೆಳ್ಳಿ ಬಂಗಾರದ ಪರಿಕರಗಳ ಮೆರವಣಿಗೆ ಶನಿವಾರ ಸಂಜೆ ನಡೆಯಿತು. ಮೆರವಣಿಗೆಗೆ ಚಾಲನೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನೀಡಿದರು. ಅವರು ಮಾತನಾಡಿ, ಮಕ್ಕಳಲ್ಲಿ ಭಯ ಭಕ್ತಿಯ ಪರಂಪರೆಯನ್ನು ನಮ್ಮ […]
ಕಾಪು ಶ್ರೀ ಹೊಸ ಮಾರಿಗುಡಿ : ದಕ್ಷಿಣ ವಾಹಿನಿ ಹಸಿರು ಹೊರೆಕಾಣಿಕೆ (Kaup)ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಿಂದ ದಕ್ಷಿಣ ವಾಹಿನಿ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಗಣ್ಯರು ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮುಲ್ಕಿ, ಮೂಡಬಿದ್ರಿ ಹಾಗೂ ವಿವಿಧ ಪ್ರದೇಶಗಳಿಂದ ಹೊರೆಕಾಣಿಕೆ ಸಮರ್ಪಣೆಯು ಉಡುಪಿ ಜಿಲ್ಲೆಯ ಗಡಿ ಪ್ರದೇಶವಾದ ಹೆಜಮಾಡಿಯ ಮೂಲಕ, ಮೂಳೂರು ಕೊಪ್ಪಲಂಗಡಿಗೆ ತಲುಪಿತು. ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಕಾಪು ಪೇಟೆಯಾಗಿ ಹೊಸಮಾರಿಗುಡಿ ದೇವಳವನ್ನು ತಲುಪಿತು. ಮೆರವಣಿಗೆಯಲ್ಲಿ ಕುಣಿತ ಭಜನೆ, ಡೋಲು ವಾದನ, ತಾಲೀಮು, ಎರ್ಮಾಳು ಬ್ಯಾಂಡ್, ಮಕ್ಕಳಿಂದ ಜಾಗಟೆ ಮತ್ತು ಶಂಖನಾದ, ಕೊಂಬು, ಬಿರುದಾವಳಿ, ಕೀಳು ಕುದುರೆ, ಸ್ಪಷಲ್ ಬ್ಯಾಂಡ್, ಮಹಿಳಾ ಚೆಂಡೆ, ಮಹಿಷಮರ್ಧಿನಿ ಟ್ಯಾಬ್ಲೋ, ಕಳತ್ತೂರು ಡೋಲು, ಕಟೀಲು ಚೆಂಡೆ ಸಹಿತ ವಿವಿಧ ವೇಷಗಳು ಮೆರವಣಿಗೆಯಲ್ಲಿ ರಂಗು ತಂದಿತು. ಕೇಸರಿ ಪೇಟ ತೊಟ್ಟ ಪುರಷರು ಮತ್ತು ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡರು. ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ , ಮಾಣಿಲ ಶ್ರೀದಾಮದ ಮೋಹನದಾಸ ಸ್ವಾಮೀಜಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯೆ ವಿಜಯಲಕ್ಷ್ಮೀ ಶೆಟ್ಟಿ, ಜಾಗತಿಕ ಬಂಟರ ಸಂಗದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಹೊರೆಕಾಣಿಕೆ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣ ಸಮಿತಿ ಅಧ್ಯಕ್ಷ ರವಿ ಸುಂದರ್ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣಾ ಮೆರವಣಿಗೆ ಸಮಿತಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಉಪಸ್ಥಿತರಿದ್ದರು
ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ ಸಂಪನ್ನ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯ ವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಮಂಗಳವಾರ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವ ಚಂಡೀಯಾಗ ನೆರವೇರಿತು. ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಆರ್ಚಕರಾದ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ನವ ಚಂಡೀಯಾಗದ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸಂಪನ್ನಗೊಂಡಿತು. ಬೆಳಿಗ್ಗೆ […]
ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ ಸಂಪನ್ನ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯ ವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಮಂಗಳವಾರ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವ ಚಂಡೀಯಾಗ ನೆರವೇರಿತು. ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಆರ್ಚಕರಾದ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ನವ ಚಂಡೀಯಾಗದ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸಂಪನ್ನಗೊಂಡಿತು. ಬೆಳಿಗ್ಗೆ […]
ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಲೋಕ ಕಲ್ಯಾಣಾರ್ಥ ಮತ್ತು ಸಾನಿಧ್ಯ ವೃದ್ಧಿಗಾಗಿ ನವದುರ್ಗಾ ಲೇಖನ ಯಜ್ಞ ಪ್ರಯುಕ್ತ ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪಕ್ಕೆ ಶ್ರೀ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಾತನಾಡಿ, ದೇಶ ವಿದೇಶದ ಭಕ್ತರನ್ನು ಒಂದುಗೂಡಿಸುವ ಪ್ರಯತ್ನಕ್ಕೆ ಕಾಪು ಶ್ರೀ ಹೊಸಮಾರಿಗುಡಿ ನಾಂದಿ ಹಾಡಿದೆ ಎಂದರು. ಶ್ರೀಧಾಮ ಮಾಣಿಲ […]