ಮಣಿಪಾಲ ಮಾಹೆಯ ಎರಡು ಸಾಕ್ಷ್ಯಚಿತ್ರಗಳು ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವಕ್ಕೆ ಆಯ್ಕೆ(Two documentaries on Manipal MAHE selected for International Folk Film Fastival)
ಮಣಿಪಾಲ ಮಾಹೆಯ ಎರಡು ಸಾಕ್ಷ್ಯಚಿತ್ರಗಳು ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವಕ್ಕೆ ಆಯ್ಕೆ (Manipala) ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಯ ಎರಡು ಸಾಕ್ಷ್ಯ ಚಿತ್ರಗಳು ಕೇರಳದ ತ್ರಿಶೂರಿನ ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವದ 8 ನೆಯ ಆವೃತ್ತಿಗೆ ಅಧಿಕೃತವಾಗಿ ಆಯ್ಕೆಯಾಗುವುದರೊಂದಿಗೆ ಸಂಸ್ಥೆಯ ಮಕುಟಕ್ಕೆ ಮತ್ತೊಂದು ಗರಿ ಸೇರಿಕೊಂಡಿದೆ. ಐಎಫ್ಎಫ್ಎಫ್ ಪ್ರತಿಷ್ಠಿತ ಜಾಗತಿಕ ಕಾರ್ಯಕ್ರಮವಾಗಿದ್ದು, ಅದು ಸಿನೆಮಾದ ಮೂಲಕ ಜಾನಪದ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂಭ್ರಮಿಸುವ ಉತ್ಸವವಾಗಿದೆ. ಈ ಸಲದ ಚಿತ್ರೋತ್ಸವಕ್ಕೆ ಜಗತ್ತಿನಾದ್ಯಂತ ಸುಮಾರು 800 ಚಿತ್ರಗಳು […]