Tag: manipura

ಅಪರಾಧ

ಮಣಿಪುರದಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ಮಣಿಪುರದಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ  ಇಂಫಾಲ್‌ : ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. 17 ವರ್ಷದ ಬಾಲಕಿ ಹಿಜಾಮ್ ಲಿಂಥೋಯಿಂಗಂಬಿ ಮತ್ತು 20 ವರ್ಷದ ಫಿಜಾಮ್ ಹೆಮ್ಜಿತ್ ಅವರ ಮೃತದೇಹದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿದ್ಯಾರ್ಥಿಗಳು ಸೇರಿ ಭಾರಿ ಪ್ರತಿಭಟನೆ ನಡೆಸಿದರು. ಇಬ್ಬರು ವಿದ್ಯಾರ್ಥಿಗಳು […]

ದೇಶ-ವಿದೇಶ

ಬುಡಕಟ್ಟು ಪ್ರಾಬಲ್ಯವಿರುವ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತಾತ್ಮಕ ಹುದ್ದೆ ಬೇಕು: ಪ್ರಧಾನಿಗೆ ಮಣಿಪುರದ ಕುಕಿ ಶಾಸಕರ ಒತ್ತಾಯ

ಬುಡಕಟ್ಟು ಪ್ರಾಬಲ್ಯವಿರುವ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತಾತ್ಮಕ ಹುದ್ದೆ ಬೇಕು: ಪ್ರಧಾನಿಗೆ ಮಣಿಪುರದ ಕುಕಿ ಶಾಸಕರ ಒತ್ತಾಯ ಮಣಿಪುರ: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಪ್ರಾಬಲ್ಯವಿರುವ ಐದು ಜಿಲ್ಲೆಗಳಿಗೆ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಪ್ರತ್ಯೇಕ ಆಡಳಿತಾತ್ಮಕ ಹುದ್ದೆಗಳನ್ನು ನೀಡಬೇಕು ಎಂದು ಕುಕಿ ಸಮುದಾಯದ ಎಲ್ಲಾ 10 ಶಾಸಕರು ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ. ಮೇ 3 ರಿಂದ ಈಶಾನ್ಯ ರಾಜ್ಯವು ಕುಕಿಗಳು ಮತ್ತು ಮೈತಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ ತತ್ತರಿಸುತ್ತಿರುವ ಕಾರಣದಿಂದ […]

ರಾಜಕೀಯ

ಮಣಿಪುರ ಬೆತ್ತಲೆ ಮೆರವಣಿಗೆ ವಿಚಾರದಲ್ಲಿ ಬಿಜೆಪಿ  ಧೃತರಾಷ್ಟ್ರನಂತೆ ಕುರುಡಾಗಿದೆ: ಉದ್ಭವ್ ಠಾಕ್ರೆ ವಾಗ್ದಾಳಿ

ಮಣಿಪುರ ಬೆತ್ತಲೆ ಮೆರವಣಿಗೆ ವಿಚಾರದಲ್ಲಿ ಬಿಜೆಪಿ  ಧೃತರಾಷ್ಟ್ರನಂತೆ ಕುರುಡಾಗಿದೆ: ಉದ್ಭವ್ ಠಾಕ್ರೆ ವಾಗ್ದಾಳಿ ಮುಂಬಯಿ: ಮಣಿಪುರದಲ್ಲಿ ಮೇ 4 ರಂದು ಇಬ್ಬರು ಬುಡುಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಹೇಯ ಕೃತ್ಯದ ಕುರಿತು ಶಿವಸೇನೆ (ಯುಬಿಟಿ) ಮುಖ್ಯಸ್ಥ, ಮಾಜಿ ಮಉಖ್ಯಮಂತ್ರಿ ಉದ್ಭವ್ ಠಾಕ್ರೆ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಥಾಣೆಯಲ್ಲಿ ಉತ್ತರ ಭಾರತೀಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಮಣಿಪುರದಲ್ಲಿ ಮಹಿಳೆಯರನ್ನು ಅವಮಾನಿಸುತ್ತಿದಾಗ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಳ್ಳಲು […]

ಅಪರಾಧ

ಮಣಿಪುರದಲ್ಲಿ ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ, ಸಾರ್ವತ್ರಿಕ ಆಕ್ರೋಶ

ಮಣಿಪುರದಲ್ಲಿ ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ  ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ವೀಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಒಂದು ದಿನಗಳ ಬಳಿಕ ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಊಹಿಸಲು ಸಾಧ್ಯವಾಗದ ಅಮಾನವೀಯ ಘಟನೆಗಳು ಬೆಳಕಿಗೆ ಬರುತ್ತಿವೆ. ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯನ್ನು ಮನೆಯೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿರುವುದು ಇದೀಗ ಬಹಿರಂಗವಾಗಿದೆ. ಈ ಬಗ್ಗೆ ಸರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ಲಿಂಗ್ ಜಿಲ್ಲೆಯ ಸೆರೋವ್‌ ಗ್ರಾಮದಲ್ಲಿ […]

ದೇಶ-ವಿದೇಶ ಪ್ರಚಲಿತ

ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಮಣಿಪುರಕ್ಕೆ ಭೇಟಿ  

ಸರ್ಕಾರದ ಮನವಿಗೆ ವಿರೋಧ   ಮಣಿಪುರ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ನಡುವೆ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರನ್ನು ಭೇಟಿ ಮಾಡಲು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಭಾನುವಾರ ಇಂಫಾಲ್‌ಗೆ ಆಗಮಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಕಾರಣಕ್ಕಾಗಿ ರಾಜ್ಯಕ್ಕೆ ಭೇಟಿ ನೀಡುವುದನ್ನು ಮುಂದೂಡುವಂತೆ ಮಣಿಪುರ ರಾಜ್ಯ ಬಿಜೆಪಿ ಸರ್ಕಾರ ಶನಿವಾರ ಮನವಿ ಮಾಡಿತ್ತು. ಆದರೂ ಸರ್ಕಾರದ ಮನವಿಯನ್ನು ಧಿಕ್ಕರಿಸಿ ಸ್ವಾತಿ ಮಲಿವಾಲ್ ಅವರು ಭಾನುವಾರ ಇಂಫಾಲ್‌ಗೆ ಭೇಟಿ ನೀಡಿದ್ದಾರೆ. ಈ ಬಗ್ಗೆ […]

ಅಪರಾಧ

ವೃದ್ದ ಮಹಿಳೆಯ ಸಜೀವ ದಹನ: ಮಣಿಪುರದಲ್ಲಿ ಮತ್ತೊಂದು ಭಯಾನಕ ಘಟನೆ; ವೃದ್ದ ಮಹಿಳೆಯ ಸಜೀವ ದಹನ

 ವೃದ್ದ ಮಹಿಳೆಯ ಸಜೀವ ದಹನ: ಮಣಿಪುರದಲ್ಲಿ ಮತ್ತೊಂದು ಭಯಾನಕ ಘಟನೆ; ವೃದ್ದ ಮಹಿಳೆಯ ಸಜೀವ ದಹನ  ಮಣಿಪುರ, ಜು 23 : ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಘರ್ಷಣೆಗಳು ಅಮಾನವೀಯವಾಗಿ ಮಾರ್ಪಟ್ಟಿರುವುದರಿಂದ ಮಣಿಪುರದ ಭಯಾನಕ ಘಟನೆಗಳು ದೇಶದಾದ್ಯಂತ ಮಾತ್ರವಲ್ಲದೇ ವಿದೇಶದಲ್ಲಿ ಸದ್ದು ಮಾಡುತ್ತಿದೆ.  ಇದೀಗ ಮತ್ತೊಂದು ಭಯಾನಕ ಘಟನೆ ಹೊರಬಿದ್ದಿದ್ದು, ವೃದ್ಧ ಮಹಿಳೆಯೋರ್ವಳನ್ನು ಜನಸಮೂಹವು ತನ್ನ ಮನೆಯೊಳಗೆ ಜೀವಂತವಾಗಿ ಸುಟ್ಟುಹಾಕಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಕಾಕ್ಚಿಂಗ್ ಜಿಲ್ಲೆಯ ಸೆರೌ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯಾಗಿದ್ದ 80 ವರ್ಷದ […]

ಕರಾವಳಿ

ಮಣಿಪುರ ಜನತೆ ಶಾಂತಿ ಕಾಪಾಡಲು ಉಡುಪಿ ಪೇಜಾವರ ಶ್ರೀ ಮನವಿ

ಮಣಿಪುರ ಜನತೆ ಶಾಂತಿ ಕಾಪಾಡಲು ಉಡುಪಿ ಪೇಜಾವರ ಶ್ರೀ ಮನವಿ  ಉಡುಪಿ: ದೇಶದ ಅವಿಭಾಜ್ಯ ಅಂಗವಾಗಿರುವ ಮಣಿಪುರ ರಾಜ್ಯದಲ್ಲಿ ಇತ್ತೀಚಿನ‌ ದಿನಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಬೆಳವಣಿಗೆಗಳಿಂದ ಮನಸ್ಸಿಗೆ ತುಂಬ ವಿಷಾದವಾಗಿದೆ ಎಂದು ಉಡುಪಿಯ ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು ಉಡುಪಿಯಲ್ಲಿ ಹೇಳಿದ್ದಾರೆ. ಜಗತ್ತಿಗೇ ಅಹಿಂಸೆ ಶಾಂತಿಯ ಮಂತ್ರವನ್ನು ಅತ್ಯಂತ ಪರಿಣಾಮಕಾರಿಯಾಗಿ ಬೋಧಿಸಿದ ಭಾರತದ ಯಾವುದೇ ಭಾಗದಲ್ಲಿ ಇಂಥ ವಿಲಕ್ಷಣ ಬೆಳವಣಿಗೆಗಳು ನಡೆಯಬಾರದು. ಅದು ನಮಗೆ ಬದುಕು ಕೊಟ್ಟ ನೆಲಕ್ಕೆ ನಾವು ಮಾಡುವ […]

ಅಪರಾಧ ದೇಶ-ವಿದೇಶ

ಮಣಿಪುರ ಮಹಿಳೆಯರ ನಗ್ನ ಮೆರವಣಿಗೆ ಪ್ರಕರಣ – ಪ್ರಮುಖ ಆರೋಪಿ ಮನೆಗೆ ಬೆಂಕಿ

ಮಣಿಪುರ ಮಹಿಳೆಯರ ನಗ್ನ ಮೆರವಣಿಗೆ ಪ್ರಕರಣ – ಪ್ರಮುಖ ಆರೋಪಿ ಮನೆಗೆ ಬೆಂಕಿ ಮಣಿಪುರ, ಜು 21 : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡಿದ ಭೀಕರ ಪ್ರಕರಣದ ವೀಡಿಯೊ ವೈರಲ್ ಆದ ಎರಡು ದಿನಗಳ ನಂತರ, ಪ್ರಮುಖ ಆರೋಪಿ ಹುಯಿರೆಮ್ ಹೆರೋದಾಸ್ ಮೈತೆಯ್ ಮನೆಗೆ ಪ್ರತಿಭಟನಾಕಾರರ ಗುಂಪೊಂದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ 4ರಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಮಹಿಳೆಯರ […]

ಅಪರಾಧ

ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಬಳಿಕ ನಾಲ್ವರ ಬಂಧನ

ಮಣಿಪುರದ ಕಾಂಗ್‌ಪೋಕ್ಷಿ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲು ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆದ ಬಳಿಕ ಗುರುವಾರ ದೇಶಾದ್ಯಂತ ಆಕ್ರೋಶ ವ್ಯಕ್ತವಾಯಿತ. ಆಬಳಿಕವಷ್ಟೇ ಅಲ್ಲಿಯ ಬಿಜೆಪಿ ಸರ್ಕಾರ ಆರೋಪಿಗಳ ಬಂಧನಕ್ಕೆ ಮುಂದಾಯಿತು. ಸಧ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೆ ಚಾನೆಲ್ ಜೊತೆ ದೂರವಾಣಿ ಕರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು, ಗುರುವಾರ ಸಂಜೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು […]

ಅಪರಾಧ

ಮಣಿಪುರದ ಹಿಂಸಾಚಾರದ ಕುರಿತು ಮೌನ ಮುರಿದ ಪ್ರಧಾನಿ ಮೋದಿ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಭರವಸೆ

ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾಗಿ ಸುಮಾರು ೭೭ ದಿನಗಳು ಕಳೆದ ನಂತರ ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ಮಾತನಾಡಿದ್ದಾರೆ.  ಎಸ್‌ಟಿ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಮಣಿಪುರದಲ್ಲಿ ಎರಡು ಜನಾಂಗಗಳ ನಡುವೆ ಹಿಂಸಾಚಾರ ಆರಂಭವಾದಾಗಿನಿಂದ ಪ್ರಧಾನಿ ಮೋದಿಯವರು ಈ ಕುರಿತು ಮಾತನಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಎಷ್ಟೇ ಟೀಕೆಗಳು ಬಂದರೂ ಮೌನಹಿಸಿದ್ದ ಪ್ರಧಾನಿ ಮೋದಿಯವರು 77 ದಿನಗಳ ನಂತರ ಮೌನ ಮುರಿದಿದ್ದು, ಈ ಘಟನೆಗಳಿಂದ ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ ಎಂದು ಹೇಳಿದ್ದಾರೆ.   ಇಬ್ಬರು ಮಹಿಳೆಯರ ಬೆತ್ತಲೆ […]

eMedia Kannada  @2025. All Rights Reserved.