ಕಾಪು: ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ (78th Indipendent Celebration for Kaup Dandatheertha Education Trust)
ಕಾಪು: ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ (Kaup) ಕಾಪು: ಕಾಪುವಿನ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 78ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕಾಪು ರೋಟರಿ ಕ್ಲಬ್ ಅಧ್ಯಕ್ಷರಾದ ಬಾಲಕೃಷ್ಣ ಆಚಾರ್ಯ ಮಾತನಾಡಿ, ದೇಶದಾದ್ಯಂತ ಇಂದು ಶಾಲಾ-ಕಾಲೇಜು, ಸರಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಹಳ ವಿಜೃಂಭಣೆಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೇಶಕ್ಕಾಗಿ ತ್ಯಾಗ – ಬಲಿದಾನ ಗೈದ ವೀರ ನಾಯಕರನ್ನು ಸ್ಮರಿಸುತ್ತಿದ್ದೇವೆ. […]




