Tag: police

ಅಪರಾಧ

ಕಿನ್ನಿಗೋಳಿ ಮೂರು ಕಾವೇರಿಯಲ್ಲಿ ಟಿಪ್ಪರ್-ಕಾರು ನಡುವೆ ಅಪಘಾತ ; ಮೂವರು ಗಂಭೀರ

ಕಿನ್ನಿಗೋಳಿ ಮೂರು ಕಾವೇರಿಯಲ್ಲಿ ಟಿಪ್ಪರ್–ಕಾರು ನಡುವೆ ಅಪಘಾತ ; ಮೂವರು ಗಂಭೀರ  ಕಿನ್ನಿಗೋಳಿ: ಇಲ್ಲಿನ ಮೂರುಕಾವೇರಿ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಮೂಡುಬಿದಿರೆ ಕಡೆಯಿಂದ  ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಮೂರುಕಾವೇರಿ ಸಮೀಪದ ಮಹಮ್ಮಾಯಿ ದೇವಸ್ಥಾನದ ಬಳಿ ಕಾರಿಗೆ ಡಿಕ್ಕಿ ಹೊಡೆದಿದೆ.  ಅಪಘಾತದ ರಭಸಕ್ಕೆ ಕಾರಿನ ಒಂದು ಬದಿ ಸಂಪೂರ್ಣವಾಗಿ ಜಖಂಗೊಡಿದ್ದು, ಇದರಲ್ಲಿ ಪ್ರಯಾಣಿಸುತ್ತಿದ್ದ ಐವರು ಪ್ರಯಾಣಿಕರ ಪೈಕಿ ಮೂವರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.  ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ […]

ಅಪರಾಧ ದೇಶ-ವಿದೇಶ

ಬುದ್ಧ, ಪುಲೆ, ಪೆರಿಯಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಸಂಭಾಜಿ ಭಿಡೆ ವಿರುದ್ಧ ಪ್ರಕರಣ ದಾಖಲು

ಬುದ್ಧ, ಪುಲೆ, ಪೆರಿಯಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಸಂಭಾಜಿ ಭಿಡೆ ವಿರುದ್ಧ ಪ್ರಕರಣ ದಾಖಲು ಮಹಾರಾಷ್ಟ್ರ; ಬೌದ್ಧ ಧರ್ಮದ ಸಂಸ್ಥಾಪಕ ಗೌತಮ ಬುದ್ಧ ಮತ್ತು ಸಮಾಜ ಸುಧಾರಕರಾದ ಜ್ಯೋತಿಬಾ ಫುಲೆ ಮತ್ತು ಪೆರಿಯಾರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿಂದುತ್ವ ಸಂಘಟನೆಯ ನಾಯಕ ಸಂಭಾಜಿ ಭಿಡೆ ವಿರುದ್ಧ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಭಿಡೆ ವಿರುದ್ಧ ವಾರದೊಳಗೆ ದಾಖಲಾದ ಮೂರನೇ ಪ್ರಕರಣ ಇದಾಗಿದೆ. ಇದಕ್ಕೂ ಮುನ್ನ ಮಹಾತ್ಮ ಗಾಂಧಿ ಮತ್ತು ಆಧ್ಯಾತ್ಮಿಕ ನಾಯಕ ಸಾಯಿಬಾಬಾ ಅವರ […]

ಅಪರಾಧ

ಮಂಗಳೂರು: ಡೆತ್ ನೋಟ್ ಬರೆದಿಟ್ಟು ವಸತಿ ಸಂಕೀರ್ಣದಿಂದ ಜಿಗಿದು ಉದ್ಯಮಿ ಆತ್ಮಹತ್ಯೆಗೆ ಶರಣು

 ಡೆತ್ ನೋಟ್ ಬರೆದಿಟ್ಟು ವಸತಿ ಸಂಕೀರ್ಣದಿಂದ ಜಿಗಿದು ಉದ್ಯಮಿ ಆತ್ಮಹತ್ಯೆಗೆ ಶರಣು  ಮಂಗಳೂರು: ತಾನು ವಾಸವಿದ್ದ ಅಪಾರ್ಟ್‌ಮೆಂಟಿನ  17ನೆ ಮಹಡಿಯಿಂದ ಜಿಗಿದು ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬೆಂದೂರ್ ವೆಲ್ ನಲ್ಲಿ ನಡೆದಿದೆ.  ಕ್ವಾರಿ ಉದ್ಯಮಿ ಹಾಗೂ ಬಿಲ್ಡರ್ ಆಗಿರುವ 62 ವರ್ಷದ   ಮೋಹನ್ ಅಮೀನ್ ಎಂಬವರೇ ಈ ರೀತಿಯಾಗಿ ಆತ್ಮಹತ್ಯೆಗೆ ಶರಣಾಗಿರುವ ಉದ್ಯಮಿಯಾಗಿದ್ದಾರೆ.   ತನ್ನ ಮನೆಯಿಂದ ಹೊರಗಡೆ ಹೋಗಿದ್ದ ಮೋಹನ್ ಅವರು ಬಳಿಕ ತಮ್ಮ ‍ಫ್ಲ್ಯಾಟ್ ಇರುವ ಅಟ್ಲಾಂಟಿಕ್ ಅಪಾರ್ಟ್ಮೆಂಟ್ ಗೆ ಬಂದು ಬಳಿಕ […]

ಅಪರಾಧ

ಮಲ್ಪೆ ಸಮುದ್ರ ತೀರದಲ್ಲಿ ಇಬ್ಬರು ಹುಡುಗಿಯರು ನೀರುಪಾಲು : ಒಬ್ಬಾಕೆ ಮೃತ್ಯು : ಮತ್ತೋರ್ವಳ ರಕ್ಷಣೆ.

ಉಡುಪಿ: ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರು ಮಲ್ಪೆ ಸಮುದ್ರ ತೀರದಲ್ಲಿ ನೀರುಪಾಲಾಗಿದ್ದು, ಅವರಲ್ಲಿ ಒಬ್ಬಾಕೆ ಮೃತಪಟ್ಟು ಇನ್ನೊಬ್ಬಾಕೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲುಗೊಂಡಿರುವ ಘಟನೆ ಘಟಿಸಿದೆ. ಮಡಿಕೇರಿಯ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿರುವ ಮಾನ್ಯ ಮತ್ತು ಯಶಸ್ವಿನಿ ಎಂಬಿಬ್ಬರು ವಿದ್ಯಾರ್ಥಿನಿಯರು ಕಳೆದ ಮೂರು ದಿನಗಳ ಹಿಂದೆ ಇದ್ದಕ್ಕಿದಂತೆ ನಾಪತ್ತೆಯಾಗಿದ್ದರು. ಇತ್ತಕಡೆ ಶನಿವಾರ ಮಧ್ಯರಾತ್ರಿ ಮಲ್ಪೆ ತೀರದಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗುತ್ತಿದ್ದಾರೆ ಎಂಬ ಸುದ್ದಿ ತಿಳಿದು ಮುಳುಗುತಜ್ಞ ಈಶ್ವರ್ ಮಲ್ಪೆ ಘಟನಾ ಸ್ಥಳಕ್ಕಾಗಮಿಸಿ […]

Uncategorised

ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಾಗಿ ಅಲೋಕ್‌ ಮೋಹನ್‌ ನೇಮಕ

ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ನೇಮಕ  ಬೆಂಗಳೂರು, :ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಕೆಲ ತಿಂಗಳ ಹಿಂದೆ ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರನ್ನು ನಿಯೋಜಿಸಲಾಗಿತ್ತು.  ಪ್ರವೀಣ್ ಸೂದ್‌ ನಿರ್ಗಮನದ ಬಳಿಕ ಡಿಜಿ-ಐಜಿಪಿಯಾಗಿ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಈಗ ಆ ಸ್ಥಾನಕ್ಕೆ ಅವರನ್ನೇ ನೇಮಿಸಿ ಸರ್ಕಾರ ಆದೇಶಿಸಿದೆ.

ಅಪರಾಧ ಕರಾವಳಿ

  ಬಚ್ಚಲು ಕೋಣೆಯ ವೀಡಿಯೋ ಚಿತ್ರೀಕರಿಸುತ್ತಿದ್ದ ಸುಮಂತ್ ಹಿಂದೂ ಸಂಘಟನೆಯ ಕಾರ್ಯಕರ್ತನಲ್ಲ –  ಬಜರಂಗದಳ ಮುಖಂಡರಿಂದ ಸ್ಪಷ್ಟನೆ

  ಬಚ್ಚಲು ಕೋಣೆಯ ವೀಡಿಯೋ ಚಿತ್ರೀಕರಿಸುತ್ತಿದ್ದ ಸುಮಂತ್ ಹಿಂದೂ ಸಂಘಟನೆಯ ಕಾರ್ಯಕರ್ತನಲ್ಲ –  ಬಜರಂಗದಳ ಮುಖಂಡರಿಂದ ಸ್ಪಷ್ಟನೆ  ಮೂಲ್ಕಿ:  ಮಂಗಳೂರು ಕಮೀಷನರೇಟ್ ನ ಮುಲ್ಕಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನೆರೆಮನೆಯ ಬಚ್ಚಲು ಕೋಣೆಯ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ವೇಳೆ ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಸಿಕ್ಕಿಬಿದ್ದಿರುವ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  ಇದೀಗ ಕೆಲವೊಂದು ಮಾಧ್ಯಮಗಳು ಸುಮಂತ್ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದಾನೆ. ಜಾಗರಣ ವೇದಿಕೆ, ಬಜರಂಗದಳದ ಕಾರ್ಯಕರ್ತ ಎಂದು ಹೇಳಿವೆ. ಆದರೆ ಇದನ್ನು ನಿರಾಕರಿಸಿರುವ […]

ಅಪರಾಧ

ಪಕ್ಷಿಕೆರೆ:   ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೊ‌ ಚಿತ್ರೀಕರಣ, ಯುವಕನ  ಬಂಧನ

ಮಂಗಳೂರು: ಮಹಿಳೆಯೊಬ್ಬರು ಸ್ನಾನ ಮಾಡುವಾಗ ವೀಡಿಯೊ‌ ಚಿತ್ರೀಕರಣ ಮಾಡುತ್ತಿದ್ದ  ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಬುಧವಾರ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ ನೆರೆ‌ ಮನೆಯ ಮಹಿಳೆಯೊಬ್ಬರು ಬಾತ್ ರೂಮಿನಲ್ಲಿ ಸ್ನಾನ ಮಾಡುವುದನ್ನು ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂಬಾತ ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ.   ಸುಮಂತ್ ವೀಡಿಯೊ ಮಾಡುತ್ತಿದ್ದ ವೇಳೆ ಕ್ಯಾಮರಾ ಕಂಡ ಮಹಿಳೆ ಕಿರುಚಾಡಿದ್ದಾರೆ. ಬಳಿಕ ಮುಲ್ಕಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, […]

ಅಪರಾಧ

 ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರ ಮೇಲೆ ಮೇಲೆ ಪ್ರಕರಣ ದಾಖಲು.

ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರ ಮೇಲೆ ಮೇಲೆ ಪ್ರಕರಣ ದಾಖಲು.  ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಕೆ ಸಂಬಂಧಿಸಿ ಜುಲೈ 28ರಂದು ಬಿಜೆಪಿ ಹಮ್ಮಿಕೊಂಡಿದ್ದ ಬಿಜೆಪಿ ಕಚೇರಿಯಿಂದ ಎಸ್‌ಪಿ ಕಚೇರಿ ವರೆಗೆ ಜಾಥಾ ನಡೆಸಿ ಪ್ರತಿಭಟನಾ ಸಭೆ ನಡೆಸಿತ್ತು.  ಪ್ರತಿಭಟನೆ ಸಭೆಯಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿಯವರು ಪ್ರಚೋದನಕಾರಿ ಮಾತನ್ನು ಆಡಿದ್ದಾರೆ.  ಅವರು ತಮ್ಮ ಭಾಷಣದಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ. ಅವರನ್ನು ಮದರಸಗಳಿಗೆ ಬೇಕಿದ್ದರೆ ಸೇರಿಸಿ ಎಂದು […]

ಅಪರಾಧ

ಉಡುಪಿಯ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ: ಶರಣ್ ಪಂಪ್ವೆಲ್, ದಿನೇಶ್ ಮೆಂಡನ್ ವಿರುದ್ದ ಪ್ರಕರಣ ದಾಖಲು

ಉಡುಪಿಯ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ: ಶರಣ್ ಪಂಪ್ವೆಲ್, ದಿನೇಶ್ ಮೆಂಡನ್ ವಿರುದ್ದ ಪ್ರಕರಣ ದಾಖಲು ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಹಿಂಪ ಮುಖಂಡರಾದ ಶರಣ್ ಪಂಪ್ಲೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಉಡುಪಿ ಶ್ರೀಕೃಷ್ಣ ಮಠದ […]

ಅಪರಾಧ

ಮತ್ತೊಂದು ಮತೀಯ ಗೂಂಡಾಗಿರಿ: ಧರ್ಮಸ್ಥಳದಲ್ಲಿ ಆಟೋ ಚಾಲಕನ ಮೇಲೆ ಹಲ್ಲೆ

ಮತ್ತೊಂದು ಮತೀಯ ಗೂಂಡಾಗಿರಿ: ಧರ್ಮಸ್ಥಳದಲ್ಲಿ ಆಟೋ ಚಾಲಕನ ಮೇಲೆ ಹಲ್ಲೆ ದಕ ಜಿಲ್ಲೆಯಲ್ಲಿ ಬಾಲ ಬಿಚ್ಚಿದ ಸಂಘಟನೆಗಳ ಕಾರ್ಯಕರ್ತರು ಧರ್ಮಸ್ಥಳ: ಧರ್ಮಸ್ಥಳ ಬಸ್‌ ನಿಲ್ದಾಣಕ್ಕೆ ಯುವತಿಯನ್ನು ಡ್ರಾಪ್‌ ಮಾಡಲು ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ಚಾಲಕನ ಮೇಲೆ ಗುಂಪೊಂದು ಮತೀಯ ಗೂಂಡಾಗಿರಿ ನಡೆಸಿ ಹಲ್ಲೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಉಜಿರೆ ನಿವಾಸಿ, ಆಟೋ ಚಾಲಕ ಮುಹಮ್ಮದ್‌ ಆಶಿಕ್‌ ಯುವತಿಯೊಬ್ಬರನ್ನು ಧರ್ಮಸ್ಥಳಕ್ಕೆ ಬಿಟ್ಟು ಬರಲು ಬಾಡಿಗೆಗೆ ಹೋಗಿದ್ದರು. ಯುವತಿಯನ್ನು ಇಳಿಸಿ, ಹಿಂದಿರುಗಿ ಬರುವಾಗ ಗುಂಪೊಂದು ಆತನನ್ನು […]

eMedia Kannada  @2025. All Rights Reserved.