Tag: police

ಅಪರಾಧ

breaking news ಮಂಡ್ಯ ಜಿಲ್ಲೆಯಲ್ಲಿ ನಡೆದ ಘಟನೆ

ಸುತ್ತಿಗೆಯಿಂದ ಬಡಿದು ಇಬ್ಬರು ಮಕ್ಕಳ ಬರ್ಬರ ಹತ್ಯೆ: ತಂದೆಯಿಂದಲೇ ಕೃತ್ಯ: ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ  ಮಂಡ್ಯ: ತಂದೆಯೋರ್ವ ಇಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ.         ಅದರ್ಶ್ (4) ಹಾಗೂ ಅಮೂಲ್ಯ (3) ಕೊಲೆಯಾಗಿರುವ ಮಕ್ಕಳು. ಶ್ರೀಕಾಂತ್ ಎಂಬಾತ ಸುತ್ತಿಗೆಯಿಂದ ಹೊಡೆದು ಮಕ್ಕಳನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಇದಲ್ಲದೆ ಪತ್ನಿ ಲಕ್ಮೀ ಮೇಲೂ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಲಕ್ಷ್ಮೀಯನ್ನು ಆಸ್ಪತ್ರೆಗೆ […]

ಅಪರಾಧ

ಸುಳ್ಯ;ಕಾರು & ಲಾರಿ ನಡುವೆ ಭೀಕರ ಅಪಘಾತ:ಓರ್ವ ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ಸುಳ್ಯ:ಸ್ವಿಫ್ಟ್ ಕಾರಿಗೆ ನಿಯಂತ್ರಣ ಕಳೆದುಕೊಂಡ ಕಂಟೈನರ್ ಲಾರಿ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಡು, ನಾಲ್ವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ದೇವರ ಕೊಲ್ಲಿ ತಿರುವಿನಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಮಂಗಳೂರಿನ ಕುಳಾಯಿ ನಿವಾಸಿ ಈಶ್ವರ (42), ಕಾರಿನಲ್ಲಿದ್ದ ಪ್ರಯಾಣಿಕರಾದ ಚಂದ್ರಶೇಖರ, ನಿತಿನ್, ಜಗದೀಶ್ ಹಾಗೂ ಹರ್ಷ ಎಂಬವರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಈಶ್ವರ, ಚಂದ್ರಶೇಖರ ಮತ್ತು ನಿತಿನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು […]

ಅಪರಾಧ

ಬೆಳ್ತಂಗಡಿ; ಬೈಕ್ ಗೆ ಬಸ್ ಢಿಕ್ಕಿ; ಹುಟ್ಟು ಹಬ್ಬದ ದಿನವೇ ಯುವಕ ಮೃತ್ಯು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಬಳಿ ನಡೆದಿದೆ. ಓಡೀಲು ನಿವಾಸಿ ದೀಕ್ಷಿತ್ ಮೃತ ಯುವಕ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ನ ಹುಟ್ಟುಹಬ್ಬವಾಗಿದ್ದು, ಈ ಹಿನ್ನಲೆಯಲ್ಲಿ ಬೆಳಿಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ವೇಣೂರು ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಪ್ರಚಲಿತ

ತಂದೆ ವರ್ಗಾವಣೆಯಾಗುವಾಗ ಮಗಳು ಅಧಿಕಾರ ಸ್ವೀಕಾರ ; ತಂದೆಯಿಂದಲೇ ಅಧಿಕಾರ ಸ್ವೀಕರಿಸಿದ ಮಗಳು

ಮಂಡ್ಯ: ಅದೊಂದು ಭಾವುಕತೆಗೆ ಸಾಕ್ಷಿಯಾದ ಕ್ಷಣ. ಒಂದೆಡೆ ತಂದೆಯ ವರ್ಗಾವಣೆ, ಮತ್ತೊಂದೆಡೆ ಅದೇ ಸ್ಥಳಕ್ಕೆ ಮಗಳ ನಿಯೋಜನೆ. ಅಧಿಕಾರ ಹಸ್ತಾಂತರ ಮಾಡುವಾಗ ತಂದೆಗೆ ಹೆಮ್ಮೆ ಎನ್ನಿಸುವಂತಹ ಅನುಭವ. ಇತ್ತ ಮಗಳಿಗೂ ಖುಷಿ ನೀಡಿದ ಸಂದರ್ಭ.  ಹೌದು, ಇಂತಹದೊಂದು ವಿಶೇಷ ಘಟನೆಗೆ ಸಾಕ್ಷಿಯಾಗಿದ್ದು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ. ಠಾಣೆಯಲ್ಲಿ ಎಸ್‌ಐ ಆಗಿದ್ದ ಬಿ‌.ಎಸ್.ವೆಂಕಟೇಶ್ ಅವರು ತನ್ನ ಮಗಳು ನೂತನ ಎಸ್ಐ ಬಿ.ವಿ.ವರ್ಷಾ ಅವರಿಗೆ ಮಂಗಳವಾರ ಅಧಿಕಾರ ಹಸ್ತಾಂತರ ಮಾಡಿದ್ದು ವಿಶೇಷ ಎನ್ನಿಸಿಕೊಂಡಿತು. ಇದಕ್ಕೆ ಠಾಣೆಯ ಸಿಬ್ಬಂದಿ ಸಾಕ್ಷಿಯಾಗಿದ್ದರು. ಮಾತ್ರವಲ್ಲದೆ […]

ಅಪರಾಧ

ಸರಗಳ್ಳತನಕ್ಕೆ ಸಂಬಂಧಿಸಿ ಇಬ್ಬರ ಬಂಧನ: ಕಾಪುವಿನಲ್ಲಿ ಉಡುಪಿ ಪೋಲೀಸ್‌ ವರಿಷ್ಠಾಧಿಕಾರಿ ಹೇಳಿಕೆ

ಕಾಪು, : ಕಳೆದ ವಾರ ಕಾಪು ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಸರ ಕಿತ್ತು ಪರಾರಿಯಾದ ಘಟನೆಗೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮಂಗಳವಾರ   ಸಂಜೆ ಕಾಪು ಪೊಲೀಸ್‌ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ ಎಂ ಹಾಕೆ ಹೇಳಿದ್ದಾರೆ. ಬಂಧಿತ ಆರೋಪಿಗಳು ಬಿ.ಸಿ ರೋಡ್‌ನ ಮೂಡಗ್ರಾಮದ ಗೂಡಿನಬೈಲು ನಿವಾಸಿ ಮುಹಮ್ಮದ್ ರಫೀಕ್ (೩೩) ಹಾಗೂ ಕೃಷ್ಣಾಪುರ ೮ನೇ ಬ್ಲಾಕ್‌ನ ಚೊಕ್ಕಬೆಟ್ಟು ಅಹಿಂಜಾ ಅಪಾರ್ಟ್ಮೆಂಟ್ ನಿವಾಸಿ ತೌಸಿಫ್ […]

ಅಪರಾಧ

ಬೆಳ್ತಂಗಡಿಯಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ;  ಆಟೋ ಚಾಲಕ ಸೇರಿ ಇಬ್ಬರ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಆಟೋ ರಿಕ್ಷಾದಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿರುವ ಘಟನೆ ನಡೆದಿದೆ. ಆಟೋ ರಿಕ್ಷಾ ಚಾಲಕ ಸಾದಿಕ್ ಮತ್ತು ಸ್ಥಳೀಯ ನಿವಾಸಿ ಕರೀಂ ಅವರನ್ನು ಪೊಲೀಸರು ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನೆರೋಲ್ದಪಲ್ಕೆ ಎಂಬಲ್ಲಿ ಜೂನ್ 18 ರಂದು ಬಾಲಕಿ ತನ್ನ ತಾಯಿ ಪಡೆದ ಸಾಲದ ಕಂತು ಪಾವತಿಸಲು ಸ್ವಸಹಾಯ ಸಂಘದ ಕಡೆಗೆ ನಡೆದುಕೊಂಡು […]

ಅಪರಾಧ

ಬಸ್ ಮತ್ತು ಬೈಕ್ ನಡುವೆ ಢಿಕ್ಕಿ : ಯುವಕ-ಯುವತಿ ಸಾವು

ಕಾರ್ಕಳ: ಉಡುಪಿ ಜಿಲ್ಲೆಯ ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣ ರೀತಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಿವಿಲ್‌ ಎಂಜಿನಿಯರಿಂಗ್‌ ಮುಗಿಸಿ ಕಂಟ್ರಾಕ್ಟರ್‌ ಜತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಸಶಾಂಕ್ (21) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತ(19) ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿಯಲಾಗಿದೆ. ಶಶಾಂಕ್‌ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ […]

ಅಪರಾಧ

ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಮಹಿಳಾ ಪೇದೆ ಹೃದಯಾಘಾತದಿಂದ ಮೃತ್ಯು;ತಂದೆ- ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ಮಗು

ಮಹಿಳಾ ಪೇದೆ ಹೃದಯಾಘಾತದಿಂದ ಮೃತ್ಯು;ತಂದೆ- ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ಮಗು ಬೆಂಗಳೂರು;ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಮಹಿಳಾ ಪೊಲೀಸ್‌ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂಚಾರಿ ಮಹಿಳಾ ಪೊಲೀಸ್ ಪ್ರಿಯಾಂಕಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಹಲವು ವರ್ಷಗಳಿಂದ ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪ್ರಿಯಾಂಕ ಭಾನುವಾರ ಎಂದಿನಂತೆ ಕೆಲಸವನ್ನು ಮುಗಿಸಿಕೊಂಡು ಮನೆಗೆ ಹೋಗಿದ್ದು, ತಡರಾತ್ರಿ ಹೃದಯಾಘಾತದಿಂದ […]

ಅಪರಾಧ

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳಿಂದ ಬಸ್ಸು ತಡೆದು ಪ್ರತಿಭಟನೆ

ಚಾರ್ಮಾಡಿ: ಬಸ್ ನಿರ್ವಾಹಕ ವಿದ್ಯಾರ್ಥಿಗಳನ್ನು ಬಸ್ ಒಳಗೆ ದೂಡಿ ಹಲ್ಲೆ ನಡೆಸಿದ ಎಂಬ ಕಾರಣಕ್ಕೆ ಬಸ್ಸನ್ನು ಚಾರ್ಮಾಡಿ ಬಳಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರು ತಡೆಹಿಡಿದು ಗಲಾಟೆ ನಡೆಸಿದ ಘಟನೆ ನಡೆದಿದೆ. ಮಂಗಳೂರಿನಿಂದ ಮೂಡಿಗೆರೆಗೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ ಗೆ ಉಜಿರೆಯಲ್ಲಿ ಹತ್ತುವ ವೇಳೆ ನಿರ್ವಾಹಕ ವಿದ್ಯಾರ್ಥಿಗಳನ್ನು ದೂಡಿ ಹಲ್ಲೆ ನಡೆಸಿರುವುದಾಗಿ ಹೇಳಿ ಅವರು ನಿರ್ವಾಹಕನ ಜತೆ ರಂಪಾಟ ನಡೆಸಿದ್ದಾರೆ.  ಬಳಿಕ ಬಸ್ ಚಾರ್ಮಾಡಿ ಚೆಕ್ ಪೋಸ್ಟ್ ಗೆ ತಲುಪುವ ಸಮಯ ಅಲ್ಲಿಯ ಸ್ಥಳೀಯರು ಜಮಾಯಿಸಿ ಬಸ್ಸನ್ನು […]

ಅಪರಾಧ

ಮಣಿಪಾಲ ವಿದ್ಯಾರ್ಥಿ ಸೇರಿ ಮೂವರು ಗಾಂಜಾ ಪೆಡ್ಲರ್‌ಗಳ ಬಂಧನ

 ಉಡುಪಿ : ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಂಡ ಘಟನೆ ಮಣಿಪಾಲದಲ್ಲಿ  ನಡೆದಿದೆ. ಹೆರ್ಗ ಗ್ರಾಮದ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿ ಅಲ್ಲಿ ವಾಸವಾಗಿದ್ದ ವಿದ್ಯಾರ್ಥಿ ಶಶಾಂಕ (25) ಹಾಗೂ ಆತನ ಜತೆಗಿದ್ದ ಕಾರ್ಕಳದ ಪೆಡ್ಲರ್, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಆದಿಲ್ (36)ನನ್ನು ಬಂಧಿಸಿ ಸುಮಾರು 300 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಅನಂತರ ಆದಿಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ […]

eMedia Kannada  @2025. All Rights Reserved.