ಶಿವಮೊಗ್ಗದಲ್ಲಿ ಮೆಸ್ಕಾಂ ಕಚೇರಿಗೆ ಕಲ್ಲು ತೂರಾಟ; ಬಿಜೆಪಿ ಶಾಸಕರು ಸೇರಿ ಹಲವರು ಪೊಲೀಸ್ ವಶಕ್ಕೆ
ಶಿವಮೊಗ್ಗ; ವಿದ್ಯುತ್ ಬಿಲ್ ಏರಿಕೆ ವಿರೋಧಿಸಿ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ಕಿಡಿಗೇಡಿಯೋರ್ವ ಮೆಸ್ಕಾಂ ಕಚೇರಿಗೆ ಕಲ್ಲು ತೂರಿ ಕಿಟಕಿ ಗಾಜು ಒಡೆದು ಹಾಕಿದ ಘಟನೆ ಬುಧವಾರ ಘಟಿಸಿದೆ. ವಿದ್ಯುತ್ ದರ ಏರಿಕೆಯ ವಿರುದ್ಧ ಬಿಜೆಪಿಯಿಂದ ಇಲ್ಲಿನ ರೈಲು ನಿಲ್ದಾಣದ ಬಳಿಯ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.ಈ ವೇಳೆ ಶಾಸಕ ಚೆನ್ನಬಸಪ್ಪ ಸೇರಿ ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನೆ ವೇಳೆ ಬಿಜೆಪಿ ಮುಖಂಡರ ಭಾಷಣ ಮುಗಿಯುತ್ತಿದ್ದಂತೆಯೇ ಮೆಸ್ಕಾಂ ಕಚೇರಿಗೆ […]








