ಮಂಗಳವಾರ ಗೃಹಸಚಿವ ಡಾ.ಜಿ.ಪರಮೇಶ್ವರ್ ಉಡುಪಿ, ದ.ಕ ಭೇಟಿ
ಮಂಗಳೂರು : ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಜೂ.6 ಮಂಗಳವಾರದಂದು ಮಂಗಳೂರಿಗೆ ಆಗಮಿಸಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 8.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ 8.45 ಕ್ಕೆ ಸರ್ಕಿಟ್ ಹೌಸ್‌ಗೆ ತೆರಳುತ್ತಾರೆ. 10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿಗೆ ಭೇಟಿ ನೀಡಿ ವಲಯ ಪರಿಶೀಲನಾ ಸಭೆ ನಡೆಸುವರು.ಮಧ್ಯಾಹ್ನ 12ರಿಂದ 12.30 ರವರೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. 12.30 ಕ್ಕೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸುತ್ತಾರೆ. ಮಧ್ಯಾಹ್ನ […]










