Tag: Politics

ರಾಜಕೀಯ

ಸಿಎಂ ಬೊಮ್ಮಾಯಿ, ಯಡಿಯೂರಪ್ಪ ವಿರುದ್ಧ ಕಿಡಿ

ಬಿಟ್ಟಿ ಉಪದೇಶನೀಡುವ ಬೊಮ್ಮಾಯಿ, ಯಡಿಯೂರಪ್ಪನವರು ಬಡವರಿಗೆ ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಳುತ್ತಿಲ್ಲ   5 ಕೆ.ಜಿ ಅಕ್ಕಿ ಕೊಡಿ, ಉಳಿದ 5 ಕೆ.ಜಿ ಅಕ್ಕಿ ಕೊಡಲು ಆಗದಿದ್ರೆ ಹಣ ಕೊಡಿ ಎಂದು ನಮಗೆ ಬಿಟ್ಟಿ ಉಪದೇಶ ನೀಡುವ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಮುಂತಾದ ಬಿಜೆಪಿ ನಾಯಕರು ಒಂದು ಬಾರಿಯೂ ಇದು ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮ, ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದು ರಾಜ್ಯ ಬಿಜೆಪಿ ನಾಯಕರ ನೈಜ […]

ರಾಜಕೀಯ

2024ರ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಆಡಳಿತದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

  2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಬಿಜೆಪಿಯ ಹಿಂದಿನ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳು ಮತ್ತು ಅಕ್ರಮಗಳ ಬಗ್ಗೆ ತಮ್ಮ ಸರ್ಕಾರ ತನಿಖೆ ನಡೆಸಲಿದೆ ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ಮೂಲಗಳ ಪ್ರಕಾರ, ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಕುರಿತು ಸರ್ಕಾರ ಯೋಜಿಸುತ್ತಿದೆ. ಚುನಾವಣಾ ಪೂರ್ವದಲ್ಲಿ ತಮ್ಮ ಪಕ್ಷ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಲಿದೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ನ ಐದು ಭರವಸೆಗಳ ಅನುಷ್ಠಾನದಿಂದ ಬೊಕ್ಕಸಕ್ಕೆ ವರ್ಷಕ್ಕೆ 59 […]

ರಾಜಕೀಯ

ಶಕ್ತಿ ಸ್ಮಾರ್ಟ್ ಕಾರ್ಡ್ ಆನ್’ಲೈನ್ ಅರ್ಜಿ ಸಲ್ಲಿಸಲು ಶೀಘ್ರ ಹೊಸ ಪೋರ್ಟಲ್: ಸಚಿವ ರಾಮಲಿಂಗಾ ರೆಡ್ಡಿ.

  ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆಂದೇ ಹೊಸದೊಂದು ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಹೇಳಿದ್ದಾರೆ. ‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳಿಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್ ಗಳ ಅಗತ್ಯವಿದೆ. ಸೇವಾ ಸಿಂಧು ಪೋರ್ಟಲ್ […]

ರಾಜಕೀಯ

ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಗಲ್ಲಿಗಲ್ಲಿ ಸುತ್ತಿಸಿ ಒಂದು ರೀತಿಯಲ್ಲಿ ಅವಮಾನ ಮಾಡಿದಂತಾಗಿದೆ. :

ಪ್ರಧಾನಿ ನರೇಂದ್ರ ಮೋದಿ ನಮ್ಮ ಪ್ರಕಾರ ವಿಶ್ವದ ನಾಯಕ. ಆದರೆ ರಾಜ್ಯದ ಚುನಾವಣೆಯ ಸಂದರ್ಭ ಅವರನ್ನು ರಾಜ್ಯದ ಗಲ್ಲಿಗಲ್ಲಿ ಸುತ್ತಿಸಿ ಒಂದು ರೀತಿಯಲ್ಲಿ ಅವಮಾನ ಮಾಡಿದಂತಾಗಿತ್ತು. ಇದು ಕೂಡ ಜನರ ಆಕ್ರೋಶಕ್ಕೆ ಕಾರಣವಾಗಿ ಬಿಜೆಪಿ ಸೋಲಿಗೆ ಕಾರಣವಾಯಿತು ಎಂದು ಹೊನ್ನಾಳಿ ಮಾಜಿ ಸಚಿವ  ಎಂ ಪಿ ರೇಣುಕಾಚಾರ್ಯ  ತನ್ನ ಪಕ್ಷದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ. ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರನ್ನು ಕೆಳಗಿಳಿಸಿದ್ದೇ ನಮ್ಮ ಸೋಲಿಗೆ ಕಾರಣ. ಸರ್ಕಾರದ ಕೆಲವೊಂದು ತಪ್ಪು ನಿರ್ಧಾರಗಳು ಕೂಡ ಸೋಲಿಗೆ ಕಾರಣವಾಯಿತು ಎಂದು ಬಿಜೆಪಿ […]

ರಾಜಕೀಯ

ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿಯೂ ಕಮಿಷನ್ ನಿಗಧಿಯಾಗಿದೆ ಎಂಬ ಆರೋಪ ಬಂದಿದೆ ಎಂಬ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತಿರಿಸಿದ ಅವರು, “ಈ ಸರ್ಕಾರದಲ್ಲಿ ಇದುವರೆಗೂ ನಮ್ಮನ್ನು ಯಾರೂ ಕಮಿಷನ್ ಕೇಳಿಲ್ಲ. ಒಂದು ವೇಳೆ ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ” ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಬಿಲ್ ಪಾವತಿ ಬಗ್ಗೆ ಮನವಿ ಮಾಡಿದ ನಂತರ ಅವರು ಮಾತನಾಡಿದ್ದಾರೆ. ಕಮಿಷನ್ […]

ರಾಜಕೀಯ

ಕೈಗಾರಿಕೋದ್ಯಮಿಗಳ ಪ್ರತಿಭಟನೆ, ವಿದ್ಯುತ್ ನೀತಿ ಹಳಿ ತಪ್ಪಿರುವುದಕ್ಕೆ ಸಾಕ್ಷಿ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು  ರಾಜ್ಯದ ವಿದ್ಯುಶ್ಚಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕೈಗಾರಿಕೆಯಲ್ಲಿ ಅತ್ಯಂತ ಮುಂದುವರೆದ ರಾಜ್ಯವಾಗಿದೆ. ಇಲ್ಲಿ ಸಣ್ಣ ಉದ್ಯಮಗಳಿಂದ ಹಿಡಿದು ‌ಬೃಹತ್ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ನೀತಿ ಗ್ರಾಹಕರು ಹಾಗೂ ಕೈಗಾರಿಕೋದ್ಯಮಿಗಳಿಗೆ ಮಾರಕವಾಗಿರುವುದು ದುರ್ದೈವ ಮತ್ತು ಖಂಡನೀಯ. ಮುಂದಿನ […]

ಅಪರಾಧ ದೇಶ-ವಿದೇಶ

ಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾಗಾಂಧಿ

ಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾ ಗಾಂಧಿ  ನವದೆಹಲಿ: ಮಣಿಪುರದಲ್ಲಿ ಶಾಂತಿ ಕಾಪಾಡುವಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಮಣಿಪುರದ ಜನರು ನಂಬಿಕೆಯನ್ನು ಮರಳಿ ಪಡೆದು ಪುಟಿದೇಳಬೇಕು ಎಂದು ಮಣಿಪುರದ ಜನತೆಗೆ ಮನವಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು 2.5 ನಿಮಿಷಗಳ ವಿಡಿಯೊ ಸಂದೇಶದಲ್ಲಿ ”ಒಬ್ಬ ತಾಯಿಯಾಗಿ ನಾನು ನಿಮ್ಮ ನೋವನ್ನು ಅರ್ಥಮಾಡಿಕೊಂಡಿದ್ದು, ಶಾಂತಿ ಸೌಹಾರ್ದತೆಗೆ ದಾರಿ ಮಾಡಿಕೊಡುವಂತೆ ಮನವಿ ಮಾಡುತ್ತೇನೆ” […]

ರಾಜಕೀಯ

ಗೃಹ ಜ್ಯೋತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ:   ಮೂರು ದಿನಗಳಲ್ಲಿ 8 ಲಕ್ಷಕ್ಕೂ ಅಧಿಕ  ಮಂದಿಯಿಂದ ನೋಂದಾವಣೆ

ಬೆಂಗಳೂರು: ಚುನಾವಣೆಗೂ ಮುನ್ನ ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ನೋಂದಣಿ ಕಾರ್ಯಕ್ಕೆ ಜೂನ್​ 18ರಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ.  ಮೊದಲ ದಿನ 96 ಸಾವಿರಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದರೆ, ಎರಡನೇ ದಿನ ಈ ಸಂಖ್ಯೆ ದುಪ್ಪಟ್ಟಾಗಿತ್ತು. ಇದೀಗ ಮೂರನೇ ದಿನ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಜೂನ್ 20ರ ಹೊತ್ತಿಗೆ, ಕರ್ನಾಟಕದಲ್ಲಿ ಒಟ್ಟು 8,16,631 ಗ್ರಾಹಕರು ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್‌ವರೆಗೆ ಉಚಿತ […]

ರಾಜಕೀಯ

ತಂದೆ-ತಾಯಂದಿರಿಲ್ಲದ ಅನಾಥ ಮಕ್ಕಳಿಗೂ ಶೇ.1ರಷ್ಟು ಮೀಸಲಾತಿ: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ

ಉಡುಪಿ: ತಂದೆ-ತಾಯಂದಿರಿಲ್ಲದ ಅನಾಥ ಮಕ್ಕಳಿಗೂ ಶೇ.1ರಷ್ಟು ಮೀಸಲಾತಿ ಒದಗಿಸುವ ಆಯೋಗದ ಶಿಫಾರಸ್ಸನ್ನು ಹಿಂದಿನ ಸರಕಾರ ಒಪ್ಪಿಕೊಂಡಿದ್ದು, ಅದನ್ನು ಅನುಷ್ಠಾನಗೊಳಿಸಲು ಸರಕಾರ ಮುಂದಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.  ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಆಯೋಗದ ಸಭೆಯಲ್ಲಿ ಉಡುಪಿ ಜಿಲ್ಲೆ ಯಲ್ಲಿ ಹಿಂದುಳಿದ ಜಾತಿ ಮತ್ತು ಸಮುದಾಯದ ಪ್ರಗತಿ ಪರಿಶೀಲನೆ, ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ ಬಳಿಕ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು.  ನನ್ನ ನೇತೃತ್ವದ ಆಯೋಗ […]

ರಾಜಕೀಯ

ಧಮ್ಮಿದ್ದರೆ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ: ಬಸವರಾಜ ಬೊಮ್ಮಾಯಿ

ಇದು ಸುಳ್ಳ ಮಳ್ಳರ ಸರ್ಕಾರ: ಬಸವರಾಜ ಬೊಮ್ಮಾಯಿ ಬೆಂಗಳೂರು: ಕಾಂಗ್ರೆಸ್ ಸಿಎಂಗೆ ಧಮ್ಮಿದ್ದರೆ, ತಾಕತ್ತಿದ್ದರೆ ಎಲ್ಲ ಕಡೆಯಿಂದ ಅಕ್ಕಿ ಶೇಖರಿಸಿ. ಕೆಂದ್ರದ 5 ಪ್ಲಸ್ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ಬಿಜೆಪಿ ವತಿಯಿಂದ  ಇಂದು ನಗರದ ಆನಂದ ರಾವ್ ವೃತ್ತದ ಬಳಿ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದಾಗ ಅವರನ್ನು ಪೊಲೀಸರು ಬಂಧಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ […]

eMedia Kannada  @2025. All Rights Reserved.