ಮೂಲ್ಕಿ: ನಗರ ಪಂಚಾಯಿತಿ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ (Civic Workers day at Moolki Nagara Panchayath)
ಮೂಲ್ಕಿ: ನಗರ ಪಂಚಾಯಿತಿ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ (Moolki) ಮೂಲ್ಕಿ: ಮೂಲ್ಕಿ ನಗರ ಪಂಚಾಯತ್ ಕಾರ್ಯಾಲಯದಲ್ಲಿನಗರ ಪಂಚಾಯಿತಿ ವತಿಯಿಂದ ಪೌರಕಾರ್ಮಿಕರ ದಿನಾಚರಣೆ ನೆರವೇರಿತು. ಪೌರಕಾರ್ಮಿಕರಾದ ಗಣೇಶ್, ರವಿ, ಶಾಂತಾ ದೀಪರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಮುಖ್ಯಾಧಿಕಾರಿ ಮಧುಕರ್ ವಹಿಸಿದ್ದರು. ಅವರು ಮಾತನಾಡಿ, ಪೌರಕಾರ್ಮಿಕರು ನಗರದ ಸೇನಾನಿಗಳಾಗಿದ್ದು, ನಗರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಪೌರ ಕಾರ್ಮಿಕರ ಶ್ರಮ ಅಪಾರ. ಪೌರಕಾರ್ಮಿಕರು ಸ್ವಚ್ಛತೆ ಜೊತೆಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿಕೊಳ್ಳಬೇಕು […]










