ಜನವರಿ ತಿಂಗಳಲ್ಲಿ ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟ(Coastal Big Bash League cricket tournament to be held in Mangalore in January)
ಜನವರಿ ತಿಂಗಳಲ್ಲಿ ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟ (Mangaluru) ಮಂಗಳೂರು: ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಸಹ್ಯಾದ್ರಿ ಕಾಲೇಜಿನ ಮೈದಾನಲ್ಲಿ ಜನವರಿ ತಿಂಗಳಾಂತ್ಯದಲ್ಲಿ ಆಯೋಜಿಸಲಾಗುವುದು ಎಂದು ಆಯೋಜಕರು ಹೇಳಿದ್ದಾರೆ. ಇದು ಟಿ20 ಫಾರ್ಮ್ಯಾಟ್ ಲೆದರ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಗಿದ್ದು, ಫ್ರಾಂಚೈಸ್ ಆಧಾರಿತ ಟೂರ್ನಮೆಂಟ್ ಅಗಿದೆ. ಇದರಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿವೆ. ಪ್ರತೀ ಫ್ರಾಂಚೈಸ್‌ಗೆ 16 ಆಟಗಾರರು ಇರಲಿದ್ದು, ಪ್ರತಿ ತಂಡವು 5 ಲೀಗ್ ಪಂದ್ಯಗಳನ್ನು ಆಡಲಿದೆ. […]


