ಕಾಪು ದಂಡತೀರ್ಥ: ಪ್ರತಿಭಾ ಅನಾವರಣ ಕಾರ್ಯಕ್ರಮ (Kapu Dandatheertha: Talent Unveiling Programme)
ಕಾಪು ದಂಡತೀರ್ಥ: ಪ್ರತಿಭಾ ಅನಾವರಣ ಕಾರ್ಯಕ್ರಮ (Kaup) ಕಾಪು: ಕಾಪು ದಂಡ ದಂಡತೀರ್ಥ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣ ಕಾರ್ಯಕ್ರಮ ನಡೆಯಿತು. ಸಮಾರಂಭದ ಉದ್ಘಾಟಕರಾಗಿ ರಂಗಭೂಮಿ ಕಲಾವಿದ ಪ್ರಸನ್ನ ಶೆಟ್ಟಿ ಬೈಲೂರು ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜೊತೆಗೆ ಇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಕಲಾ ಪ್ರೌಢಿಮೆಯನ್ನು ಅನಾವರಣಗೊಳಿಸಬೇಕು. ಪ್ರಸ್ತುತ ವಿದ್ಯಾರ್ಥಿ ಸಮೂಹ ದುಶ್ಚಟಗಳಲ್ಲಿ ತೊಡಗಿ ತಮ್ಮ ಸುಂದರ ಭವಿಷ್ಯವನ್ನು ನಾಶಪಡಿಸುತ್ತಿರುವುದು ದುಃಖಕರ. ಹಾಗಾಗಿ ವಿದ್ಯಾರ್ಥಿಗಳು ಆರೋಗ್ಯಪೂರ್ಣ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು […]









